Holiday: ಎಲ್ಲಾ ಶಾಲಾ-ಕಾಲೇಜುಗಳಿಗೆ ಜುಲೈ 19-21ರ ವರೆಗೂ ರಜೆ ಘೋಷಣೆ
Holiday: ಈಗಾಗಲೇ ದೇಶದ ಹಲವು ರಾಜ್ಯಗಳಲ್ಲಿ ಕಾರಣಾಂತರಗಳಿಂದ ಶಾಲಾ-ಕಾಲೇಜುಗಳಿಗೆ ಸಾಲು ರಜೆಗಳನ್ನೇ ನೀಡಲಾಗಿದೆ. ಹಾಗೆಯೇ ಇದೀಗ ಈ ಭಾಗದಲ್ಲಿ ಜುಲೈ 19ರಿಂದ 21ರ ವರೆಗೂ ರಜೆ ಘೋಷಣೆ ಮಾಡಲಾಗಿದೆ. ಹಾಗಾದ್ರೆ ಎಲ್ಲಿ ಹಾಗೂ ಕಾರಣ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕರ್ನಾಟಕದಲ್ಲಿ ಹಲವು ಜಿಲ್ಲೆಗಳಲ್ಲಿ ಸರ್ಕಾರಿ ರಜೆಗಳನ್ನು ಹೊರತುಪಡಿಸಿ ಮಳೆ, ಪ್ರತಿಭಟನೆ ವಿಶೇಷ ಕಾರ್ಯಕ್ರಮಗಳ ಹಿನ್ನೆಲೆ ಸಾಲು ರಜೆಗಳನ್ನೇ ನೀಡಲಾಗಿದೆ. ಅದರಲ್ಲೂ ಇದೀಗ ಮಳೆರಾಯನ ಆರ್ಭಟ ಜೋರಾಗಿದ್ದು, ಮಕ್ಕಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಆಗಾಗ ರಜೆಗಳನ್ನು ಘೋಷಿಸಲಾಗಿದೆ. ಅಲ್ಲದೆ, ಈ ರಜೆಗಳನ್ನಯ ಸರಿದೂಗಿಸುವ ಕ್ರಮಗಳನ್ನು ಕೂಡ ತೆಗೆದುಕೊಳ್ಳಲಾಗಿದೆ.
ಅದರಲ್ಲೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಭಾರೀ ಮಳೆ ಮುಂದುವರೆದಿದೆ.

ಕರ್ನಾಟಕದ ಹೊರತುಪಡಿಸಿ ಕೆಲ ರಾಜ್ಯಗಳಲ್ಲಿ ಹವಾಮಾನ ವೈಪರಿತ್ಯದಂತಹ ಸಂದರ್ಭಗಳಲ್ಲಿ ತಿಂಗಳುಗಟ್ಟಲೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ, ಮನೆಯಿಂದಲೇ ಆನ್‌ಲೈನ್ ತರಗತಿ ನಡೆಸಿದ ಘಟನೆಗಳು ನಡೆದಿವೆ. ಇದೀಗ ತೆಲಂಗಾಣ ಸರ್ಕಾರ ಹೈದರಾಬಾದ್ ಶಾಲಾ-ಕಾಲೇಜುಗಳಿಗೆ ಜುಲೈ 19ರಿಂದ 21ರ ವರೆಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.
ಹೈದರಾಬಾದ್‌ನಲ್ಲಿ ಬೋನಾಲು ಹಬ್ಬ ಹಿನ್ನೆಲೆ ಶಾಲಾ ಶಿಕ್ಷಣ ಇಲಾಖೆ ಈ ಭಾಗಗಳಲ್ಲಿ ಶಾಲಾ-ಕಾಲೇಜುಗಳಿಗೆ 19ರಿಂದ 21ರ ವರೆಗೆ ರಜೆ ಘೋಷಣೆ ಮಾಡಿದೆ. ಪ್ರತಿ ವರ್ಷ ಆಷಾಢ ಮಾಸ ಜುಲೈ ತಿಂಗಳಲ್ಲಿ ಬರುತ್ತದೆ. ಈ ಸಮಯದಲ್ಲಿ ತೆಲುಗು ರಾಜ್ಯಗಳಲ್ಲಿ ಬೋನಾಲು ಹಬ್ಬವನ್ನು ಆಚರಿಸುವುದು ವಾಡಿಕೆಯಾಗಿದೆ. ತೆಲಂಗಾಣ ಸಂಸ್ಕೃತಿ ಮತ್ತು ಸಂಪ್ರದಾಯಗಳ ಸಂಕೇತ ಆಗಿದೆ. ಪ್ರತಿ ಭಾನುವಾರ ದೇವಿಗೆ ಬೋನಾಲು ಜಾತ್ರೆಯನ್ನು ಆಯೋಜನೆ ಮಾಡುವುದು ಇಲ್ಲಿನ ಸಂಪ್ರದಾಯವಾಗಿದೆ.
ಇತ್ತೀಚಿನ ದಿನಗಳಲ್ಲಿ ಪ್ರತಿ ಭಾನುವಾರ ಬೋನಾಲುವನ್ನ ಆಯೋಜನೆ ಮಾಡಲಾಗುತ್ತದೆ. ಬೋನಾಲು ಹಬ್ಬದ ಬಳಿಕ ಸೋಮವಾರ ದೇವಿಯ ಮೆರವಣಿಗೆ ಮತ್ತು ಜಾತ್ರೆಯನ್ನು ಆಯೋಜನೆ ಮಾಡಲಾಗುತ್ತದೆ. ಆ ವೇಳೆ ಕೆಲವು ದೇವಿಯ ಭಕ್ತರು ಮುಂಬರುವ ದಿನಗಳಲ್ಲಿ ರಾಜ್ಯ ಮತ್ತು ದೇಶ ಹೇಗಿರುತ್ತದೆ ಎಂದು ಭವಿಷ್ಯ ನುಡಿಯುತ್ತಾರೆ. ಬಹುತೇಕ ಎಲ್ಲವೂ ಭವಿಷ್ಯ ನುಡಿದಂತೆ ನಡೆಯುತ್ತದೆ ಎಂಬುದು ಇಲ್ಲಿನ ಜನರ ನಂಬಿಕೆಯಾಗಿದೆ.
ದೇವಿಯ ಮೆರವಣಿಗೆಯನ್ನು ನೋಡಲು ತೆಲಂಗಾಣ ಮತ್ತು ಹೈದರಾಬಾದ್ ಜನರು ಮಾತ್ರ ಅಲ್ಲದೆ, ಆಂಧ್ರಪ್ರದೇಶ, ಮಹಾರಾಷ್ಟ್ರ, ಛತ್ತೀಸ್‌ಗಢ, ಕರ್ನಾಟಕ ಮತ್ತು ಒಡಿಶಾದ ಭಕ್ತರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಬಂದು ದೇವಿಗೆ ಗೌರವ ಸಲ್ಲಿಸುತ್ತಾರೆ.
ಇತ್ತೀಚಿನ ದಿನಗಳಲ್ಲಿ ಆಷಾಢ ಮಾಸದ ಮೊದಲ ಮೂರು ಮತ್ತು ನಾಲ್ಕನೇ ಭಾನುವಾರದಂದು ಬೊನಾಲು ಹಬ್ಬವನ್ನು ಆಚರಣೆ ಮಾಡಲಾಗುತ್ತದೆ. ಇಲ್ಲಿನ ಜನರು ಮೊದಲ ವಾರದಲ್ಲಿ ಗೋಲ್ಕೊಂಡ ಬೊನಾಲು, ಮೂರನೇ ಭಾನುವಾರ ಲಷ್ಕರ್ ಬೊನಾಲು ಮತ್ತು ನಾಲ್ಕನೇ ಭಾನುವಾರ ಲಾಲ್ ದರ್ವಾಜ ಬೊನಾಲು ಆಚರಣೆ ಮಾಡುತ್ತಾರೆ.
ಆಷಾಢ ಮಾಸದ ನಾಲ್ಕನೇ ಭಾನುವಾರ ಹೈದರಾಬಾದ್‌ನಲ್ಲಿ ಬೊನಾಲು ಹಬ್ಬವನ್ನ ಆಚರಣೆ ಮಾಡಲಾಗುತ್ತದೆ. ಲಷ್ಕರ್ ಬೊನಾಲು ಬಳಿಕ ಲಾಲ್ ದರ್ವಾಜದಲ್ಲಿ ನಡೆಯುವ ಅಮ್ಮವರಿ ಬೋನಾಲನ್ನು ಸದ್ಧೂರಿಯಾಗಿ ಆಚರಣೆ ಮಾಡಲಾಗುತ್ತದೆ. ಈ ವೇಳೆ ಹಳೇ ನಗರದಲ್ಲಿ ಅನೇಕ ಅಮ್ಮವರಿ ದೇವಾಲಯಗಳನ್ನು ಅಲಂಕರಿಸಲಾಗಿರುತ್ತದೆ. ಈ ಸಂದರ್ಭದಲ್ಲಿ ಹಳೆಯ ಹೈದರಾಬಾದ್ ನಗರದಲ್ಲಿ ಸಂಭ್ರಮದ ವಾತಾವರಣ ಇದೆ.
ಈ ಜಾತ್ರೆ ಸಮಯದಲ್ಲಿ ಶನಿವಾರ ಹಳೇ ನಗರದ ಶಾಲೆಗಳಿಗೆ ರಜೆ ನೀಡಲಾಗಿದೆ. ಭಕ್ತರ ದಟ್ಟಣೆ ಹಿನ್ನೆಲೆ ಶನಿವಾರ ಜಾತ್ರೆಯಿಂದ ಪ್ರಭಾವಿತವಾದ ಪ್ರದೇಶಗಳಿಗೆ ರಜೆ ನೀಡಲಾಗುವುದು. ಮತ್ತೊಂದೆಡೆ, ಜಾತ್ರೆಯ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆ ಸೋಮವಾರ ರಜೆ ಘೋಷಣೆ ಮಾಡಿದೆ. ಈ ಶನಿವಾರ ನೀಡಲಾದ ರಜೆಯನ್ನು ಸರಿದೂಗಿಸಲು ಆಗಸ್ಟ್‌ನ ಎರಡನೇ ಶನಿವಾರದಂದು ಕೆಲಸ ಮಾಡುವಂತೆ ಆದೇಶದಲ್ಲಿ ತಿಳಿಸಲಾಗಿದೆ.
ಜೊತೆಗೆ ವಿದ್ಯಾರ್ಥಿಗಳಿಗೆ ಭಾನುವಾರ ಸೇರಿದಂತೆ ಜುಲೈ 19, 20 ಮತ್ತು 21ರಂದು ಮೂರು ದಿನಗಳ ರಜೆ ಸಿಗುತ್ತದೆ. ಆಯಾ ಪ್ರದೇಶಗಳಲ್ಲಿನ ಬ್ಯಾಂಕುಗಳು ಮತ್ತು ಇತರ ಸರ್ಕಾರಿ ಸಂಸ್ಥೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಇನ್ನೂ ಇಲ್ಲಿನ ಶಾಲಾ ವಿದ್ಯಾರ್ಥಿಗಳಿಗೆ ಸಾಲು ರಜೆಗಳ ಹಬ್ಬದೂಟವನ್ನೇ ಬಡಿಸಿದಂತಾಗಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications