School Holiday: 6 ಜಿಲ್ಲೆಗಳ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
School Holiday: ದೇಶದ ಹಲವು ರಾಜ್ಯಗಳಲ್ಲಿ ಕಾರಣಾಂತರಗಳಿಂದ ಶಾಲಾ-ಕಾಲೇಜುಗಳಿಗೆ ಸಾಲು ರಜೆಗಳನ್ನೇ ಘೋಷಣೆ ಮಾಡಲಾಗಿದೆ. ಇದೀಗ ಇಂದು (ಜುಲೈ 21) ಈ 6 ಜಿಲ್ಲೆಗಳ ಶಾಲೆಗಳಿಗೆ ರಜೆ ನೀಡಿ ಆದೇಶ ಹೊರಡಿಸಲಾಗಿದೆ. ಹಾಗಾದ್ರೆ ಎಲ್ಲಿ ಹಾಗೂ ಕಾರಣ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕರ್ನಾಟಕದಲ್ಲಿ ಸರ್ಕಾರಿ ರಜೆಗಳನ್ನು ಹೊರತುಪಡಿಸಿ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ, ಹವಾಮಾನ ವೈಪರಿತ್ಯದಂತಹ ಸಂದರ್ಭದಲ್ಲಿ ಶಾಲಾ-ಕಾಲೇಜುಗಳಿಗೆ ಸಾಲು ರಜೆಗಳನ್ನೇ ಘೋಷಣೆ ಮಾಡಲಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ರಜೆಗಳ ಹಬ್ಬದೂಟವನ್ನೇ ಬಡಿಸಿದಂತಾಗಿದೆ. ಹಾಗೆಯೇ ಭಾರೀ ಮಳೆಯಾಂದತಹ ಸಂದರ್ಭದಲ್ಲಿ ಹಲವು ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ.

ಅದರಲ್ಲೂ ಈಗಾಗಲೇ ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಕಾರಣ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಡಳಿತಗಳು ಆದೇಶ ಹೊರಡಿಸಿದ್ದವು. ಅಲ್ಲದೆ, ಇದೀಗ ಈ ರಜೆಗಳನ್ನು ಸರಿದೂಗಿಸುವ ಕಾರ್ಯವನ್ನು ಕೂಡ ಮಾಡುತ್ತಿವೆ. ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆ ಆಗಬಾರದೆನ್ನುವ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಹಾಗೆಯೇ ಇದೀಗ ರಣಭೀಕರ ಮಳೆ ಸುರಿಯುತ್ತಿರುವ ಹಿನ್ನೆಲೆ ಉತ್ತರಾಖಂಡದ 6 ಜಿಲ್ಲೆಗಳಿಗೆ ಜುಲೈ 21ರ ಸೋಮವಾರ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಅಲ್ಲದೆ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಈ ಭಾಗದ ಅಂಗನವಾಡಿ, ಶಾಲೆಗಳಿಗೆ ಜಿಲ್ಲಾಡಳಿತಗಳು ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿವೆ.
ಯಾವ್ಯಾವ ಜಿಲ್ಲೆಗಳಲ್ಲಿ ರಜೆ ಘೋಷಣೆ?: ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆ ಮುಂದುವರೆಯುವ ಮುನ್ಸೂಚನೆ ಹಿನ್ನೆಲೆ ಡೆಹ್ರಾಡೂನ್, ತೆಹ್ರಿ, ಪೌರಿ, ನೈನಿತಾಲ್, ಚಂಪಾವತ್ ಮತ್ತು ಉಧಮ್ ಸಿಂಗ್ ಜಿಲ್ಲೆಗಳಲ್ಲಿ ಅಂಗನವಾಡಿ ಹಾಗೂ 1-12ನೇ ತರಗತಿವರೆಗೆ ರಜೆ ಘೋಷಣೆ ಮಾಡಲಾಗಿದೆ. ಅಲ್ಲದೆ, ಇಲ್ಲಿನ ಕೆಲವು ಭಾಗಗಳಲ್ಲಿನ ಜನರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.
ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಪತ್ರಗಳನ್ನು ಕಳುಹಿಸಲಾಗಿದ್ದು, ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ನಿರ್ದೇಶಿಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈ ನಡುವೆಯೇ ಈ ಆರು ಜಿಲ್ಲೆಗಳಲ್ಲಿ ಅಂಗನವಾಡಿ ಕೇಂದ್ರಗಳಿಗೆ ಹಾಗೂ 1ರಿಂದ 12ನೇ ತರಗತಿವರೆಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಈಗಾಗಲೇ ದೇಶ ಹಲವೆಡೆ ಭಾರೀ ಮಳೆಯಂತಹ ಸಂದರ್ಭಗಳಲ್ಲಿ ಶಾಲಾ-ಕಾಲೇಜುಗಳಿಗೆ ಒಂದು ವಾರಗಟ್ಟಲೇ ರಜೆ ನೀಡಲಾಗಿದೆ.
ರಜೆಗಳನ್ನು ಸರಿದೂಗಿಸುವ ನಿರ್ಧಾರ: ಅಲ್ಲದೆ, ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆ ಆಗದಿರಲೆಂದು ಕೆಲವೆಡೆ ಶನಿವಾರ ಪೂರ್ತಿ ನಡೆಸಲು ಚಿಂತನೆ ನಡೆಸಿದರೆ, ಇನ್ನೂ ಕೆಲವೆಡೆ ಭಾನುವಾರ ತರಗತಿಗಳನ್ನು ನಡೆಸಲ ಚಿಂತನೆಗಳು ನಡೆದಿವೆ ಎಂದು ತಿಳಿದುಬಂದಿದೆ. ಈಗಾಗಲೇ ಈ ಪ್ಲಾನ್ ಅನ್ನು ಬಹುತೇಕ ಭಾಗಗಳಲ್ಲಿ ಮುಂದುವರೆಸಲಾಗುತ್ತಿದೆ. ಇದರಿಂದ ತಮ್ಮ ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಪೋಷಕರ ಚಿಂತೆಯೂ ದೂರ ಆದಂತಾಗಿದೆ.












Click it and Unblock the Notifications