School Holiday: ರಣಭೀಕರ ಮಳೆ ಕಂಟಿನ್ಯೂ; ಈ ಭಾಗದಲ್ಲಿನ ಶಾಲೆಗಳಿಗೆ ರಜೆ ಘೋಷಣೆ

School Holiday: ಈ ವರ್ಷದ ಆರಂಭದಿಂದ ಇಲ್ಲಿವರೆಗೂ ಹಲವೆಡೆ ಶಾಲಾ-ಕಾಲೇಜುಗಳಿಗೆ ವಿವಿಧ ಕಾರಣಗಳಿಂದ ಸಾಲು ರಜೆಗಳನ್ನೇ ಘೋಷಣೆ ಮಾಡಲಾಗಿಲಾಗಿದೆ. ಹಾಗೆಯೇ ಇದೀಗ ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ ಹಿನ್ನೆಲೆ ಈ ಭಾಗದಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಜೆ ಘೋಷಣೆ ಮಾಡಲಾಗಿದೆ. ಹಾಗಾದ್ರೆ ಎಷ್ಟು ದಿನ ಹಾಗೂ ಎಲ್ಲಿ ಎಂದು ಇಲ್ಲಿ ತಿಳಿಯಿರಿ.

ಈಗಾಗಲೇ ದೇಶದ ಹಲವೆಡೆ ವಿವಿಧ ಕಾರಣಗಳಿಂದ ಶಾಲೆಗಳಿಗೆ ಸಾಲು ರಜೆಗಳನ್ನೇ ಘೋಷಣೆ ಮಾಡಲಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ರಜೆಯ ಹಬ್ಬದೂಟವೇ ಬಡಿಸಿದಂತಾಗಿದೆ. ಇನ್ನು ಕರ್ನಾಟಕದಲ್ಲಿ 1-10ನೇ ತರಗತಿಗಳ ಪರೀಕ್ಷಗಳು ಮುಗಿದಿದ್ದು, ಬೇಸಿಗೆ ರಜೆಯನ್ನೂ ಸಹ ನೀಡಲಾಗಿದೆ. ಕರ್ನಾಟಕ ಹೊರತುಪಡಿಸಿ ಬೇರೆ ರಾಜ್ಯಗಳಲ್ಲಿ ಇನ್ನೂ ಶಾಲೆಗಳು ನಡೆಯುತ್ತಿವೆ.

Holiday Declared for Schools due to heavy rain

ಚಳಿಗಾಲದ ವೇಳೆ ಹಲವು ರಾಜ್ಯಗಳಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲೆಗಳಿಗೆ ಸಾಲು ರಜೆಗಳನ್ನೇ ಘೋಷಣೆ ಮಾಡಲಾಗಿತ್ತು. ಅದರಲ್ಲೂ ಉತ್ತರ ಭಾರತದ ಹೆಚ್ಚಿನ ರಾಜ್ಯಗಳಲ್ಲಿ ರಜೆ ಘೋಷಿಸಲಾಗಿತ್ತು. ಯಾಕಂದ್ರೆ ಇಲ್ಲಿ ರಣಭೀಕರ ಚಳಿ ಮುಂದುವರೆದಿತ್ತು. ಇದೀಗ ಪ್ರವಾಹ ಭೀತಿ ಹಿನ್ನೆಲೆ ಜಮ್ಮು-ಕಾಶ್ಮೀರದ ಈ ಭಾಗದಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರಾದ ರಾಮಬನ ಜಿಲ್ಲೆಯಲ್ಲಿ ಪ್ರವಾಹದ ಪರಿಸ್ಥಿತಿ ಉಂಟಾಗಿದೆ. 40ಕ್ಕೂ ಹೆಚ್ಚು ಮನೆಗಳು ಕೊಚ್ಚಿ ಹೋಗಿದ್ದು, ಮನೆ ಕಳೆದುಕೊಂಡ ಜನರು ಬೀದಿಗೆ ಬಂದಿದ್ದಾರೆ. ಪ್ರತಿಕೂಲ ಹವಾಮಾನದ ಹಿನ್ನೆಲೆ ಒಂದು ದಿನದ ಮಟ್ಟಿಗೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲೆಗಳನ್ನು ಮುಚ್ಚಲಾಗಿದೆ ಎಂದು ಶಿಕ್ಷಣ ಸಚಿವ ಸಕಿನಾ ಇಟ್ಟೊ ಸಾಮಾಜಿಕ ಜಾಲತಾಣದ ಭಾಗವಾದ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಕಳೆದ 48 ಗಂಟೆಗಳಲ್ಲಿ ಜಿಲ್ಲೆಯಾದ್ಯಂತ ರಣಭೀಕರ ಮಳೆ ಸುರಿಯುತ್ತಿದ್ದು, ಮುಂದಿನ 24 ಗಂಟೆಯೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಆದ್ದರಿಂದ ಶಾಲೆಗಳಿಗೆ ಮುಂದಿನ ಹಲವು ದಿನಗಳ ಕಾಲ ರಜೆಗಳನ್ನು ಮುಂದುವರೆಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಈಗಾಗಲೇ ಭಾರೀ ಮಳೆ ಹಿನ್ನೆಲೆ ಹಲವು ಜಿಲ್ಲಾ ಕೇಂದ್ರದಿಂದ ಸಂಪರ್ಕ ಕಡಿತಗೊಂಡಿದೆ. ಜಮ್ಮು-ಕಾಶ್ಮೀರ-ಶ್ರೀನಗರ ನಡುವಿನ 250 ಕಿಲೋ ಮೀಟರ್ ಹೆದ್ದಾರಿಯನ್ನು ಸಂಪೂರ್ಣವಾಗಿ ಬಂದ್‌ ಮಾಡಲಾಗಿದೆ. ನಿರಾಶ್ರಿತರಿಗೆ ಸರ್ಕಾರಿ ಶಾಲೆಗಳಲ್ಲಿ ವಸತಿ ವ್ಯವಸ್ಥೆ ಮಾಡಲಾಗಿದ್ದು, ಜಿಲ್ಲಾಡಳಿತ ಆಹಾರ ಸೇರಿ ಇತರ ಅಗತ್ಯ ವ್ಯವಸ್ಥೆಗಳನ್ನು ಪೂರೈಸಿದೆ. ಭಾರತೀಯ ಸೇನೆ, ಎಸ್‌ಡಿಆರ್‌ಎಫ್‌, ಸ್ವಯ ಸೇವಕರು ಜನರ ನೆರವಿಗೆ ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+