School Holiday: ಈ ರಾಜ್ಯದಲ್ಲಿ ಎಲ್ಲಾ ಶಾಲೆಗಳಿಗೆ ಜೂನ್ 30ರವರೆಗೆ ರಜೆ ಘೋಷಣೆ

School Holiday: ದೇಶದ ಹಲವೆಡೆ ಈ ವರ್ಷದ ಆರಂಭದಿಂದಲೂ ಒಂದಲ್ಲ ಒಂದು ಕಾರಣಕ್ಕೆ ಬ್ಯಾಂಕ್, ಶಾಲಾ, ಕಾಲೇಜುಗಳಿಗೆ ಸಾಲು ರಜೆಗಳೇ ಸಿಕ್ಕಿವೆ. ಇದೀಗ ಈ ಭಾಗಗಳ ಶಾಲೆಗಳಿಗೆ ಜೂನ್ 30ರವರೆಗೆ ಅಂದರೆ ಒಂದು ತಿಂಗಳ ಕಾಲ ರಜೆ ಘೋಷಣೆ ಮಾಡಲಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಹಬ್ಬದೂಟ ಬಡಿಸಿದಂತಾಗಿದೆ. ಹಾಗಾದ್ರೆ ಎಲ್ಲಿ, ಕಾರಣ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ದೇಶದ ಹಲವು ಭಾಗಗಳಲ್ಲಿ ಬೇಸಿಗೆ ರಜೆ ಮುಗಿದು ಶಾಲೆಗಳು ಪುನರಾರಂಭಗೊಳ್ಳುತ್ತಿರುವ ಬೆನ್ನಲ್ಲೇ ಶಾಲಾ ವಿದ್ಯಾರ್ಥಿಗಳಿಗೆ ಸರ್ಕಾರವೊಂದು ಬಿಗ್ ರಿಲೀಫ್ ನೀಡಿದೆ. ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಬಿಸಿಲಿನ ತಾಪ ಹಾಗೂ ಹವಾಮಾನ ವೈಪರೀತ್ಯವನ್ನು ಗಮನದಲ್ಲಿಟ್ಟುಕೊಂಡು ಜೂನ್ 1 ರಿಂದ ಜೂನ್ 30ರವರೆಗೆ ಇಡೀ ತಿಂಗಳು ಶಾಲೆಗಳಿಗೆ ರಜೆ ಘೋಷಿಸಿ ಪಂಜಾಬ್ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

Holiday declared for schools in these State of India Till June 30 2026 Know Complete details

ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಸೂಚನೆ

ಪಂಜಾಬ್ ಶಿಕ್ಷಣ ಇಲಾಖೆ ಹೊರಡಿಸಿರುವ ಈ ಮಹತ್ವದ ಆದೇಶವು ಕೇವಲ ಸರ್ಕಾರಿ ಸಂಸ್ಥೆಗಳಿಗೆ ಮಾತ್ರ ಸೀಮಿತವಾಗಿಲ್ಲ. ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸರ್ಕಾರಿ ಶಾಲೆಗಳು, ಸರ್ಕಾರಿ ಅನುದಾನಿತ ಶಾಲೆಗಳು ಹಾಗೂ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳಿಗೂ ಇದು ಕಡ್ಡಾಯವಾಗಿ ಅನ್ವಯಿಸಲಿದೆ. ಯಾವುದೇ ಕಾರಣಕ್ಕೂ ಜೂನ್ ತಿಂಗಳಿನಲ್ಲಿ ಶಾಲೆಗಳನ್ನು ನಡೆಸುವಂತಿಲ್ಲ ಎಂದು ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ರಜೆ ನೀಡಲು ಮುಖ್ಯ ಕಾರಣವೇನು?

ಪ್ರಸ್ತುತ ದೇಶದ ಉತ್ತರ ಭಾಗದ ಹಲವು ರಾಜ್ಯದಲ್ಲಿ ತಾಪಮಾನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಳ ಆಗುತ್ತಿದೆ. ಕಳೆದ ಕೆಲವು ದಿನಗಳಲ್ಲಿ ಪಂಜಾಬ್‌ನ ಕೆಲವು ಜಿಲ್ಲೆಗಳಲ್ಲಿ ಬಿಸಿಲಿನ ಬೇಗೆ ಕೊಂಚ ಕಡಿಮೆಯಾಗಿದ್ದರೂ, ಜೂನ್ ತಿಂಗಳಿನಲ್ಲಿ ಮತ್ತೆ ಏರಿಕೆಯಾಗುವ ಸಾಧ್ಯತೆ ದಟ್ಟವಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಜೂನ್ ತಿಂಗಳಲ್ಲಿ ಸಾರ್ವಜನಿಕರು ತೀವ್ರವಾದ ಬಿಸಿಗಾಳಿ ಎದುರಿಸಬೇಕಾಗಬಹುದು.

ಮಕ್ಕಳ ಹಿತದೃಷ್ಟಿಯಿಂದ ರಜೆ ಘೋಷಣೆ

ಈಗಾಗಲೇ ಹವಾಮಾನ ಇಲಾಖೆಯು ರಾಜ್ಯದ ಹಲವಾರು ಜಿಲ್ಲೆಗಳಿಗೆ ಈ ಸಂಬಂಧ ಮುನ್ನೆಚ್ಚರಿಕೆ ಸಂದೇಶಗಳನ್ನು ರವಾನೆ ಮಾಡಿದೆ. ಇಂತಹ ರಣಬಿಸಿಲಿನಲ್ಲಿ ಮಕ್ಕಳು ಶಾಲೆಗೆ ಹೋಗಿ ಬರುವುದು ಅವರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಬಹುದು. ಆದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಸುರಕ್ಷತೆಗೆ ಮೊದಲ ಆದ್ಯತೆ

ಹೆಚ್ಚುತ್ತಿರುವ ತಾಪಮಾನ ಮತ್ತು ಉಷ್ಣಾಂಶವು ವಿದ್ಯಾರ್ಥಿಗಳಿಗೆ ಶಾಲೆಗೆ ಹೋಗುವಾಗ ಮತ್ತು ಮರಳಿ ಮನೆಗೆ ಬರುವ ಪ್ರಯಾಣದ ಸಮಯದಲ್ಲಿ ತೀವ್ರ ದೈಹಿಕ ತೊಂದರೆಗಳನ್ನು ಉಂಟುಮಾಡಬಹುದು ಎಂದು ಇಲಾಖೆ ಆತಂಕ ವ್ಯಕ್ತಪಡಿಸಿದೆ. ಆದ್ದರಿಂದ ಇಂತಹ ಸಂದರ್ಭಗಳಲ್ಲಿ ರಾಜ್ಯ ಸರ್ಕಾರವು ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಗೆ ಮೊದಲ ಆದ್ಯತೆ ನೀಡಿದೆ.

ಈ ಆದೇಶವನ್ನು ರಾಜ್ಯದಾದ್ಯಂತ ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಶಿಕ್ಷಣ ಇಲಾಖೆಯು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಆದೇಶದ ಪ್ರತಿಗಳನ್ನು ಶಾಲಾ ಶಿಕ್ಷಣ ಸಚಿವರು, ಇಲಾಖೆಯ ಹಿರಿಯ ಅಧಿಕಾರಿಗಳು, ನಿರ್ದೇಶಕರು ಹಾಗೂ ಎಲ್ಲಾ ಜಿಲ್ಲಾ ಮತ್ತು ಉಪ ಜಿಲ್ಲಾ ಶಿಕ್ಷಣ ಅಧಿಕಾರಿಗಳ ಕಚೇರಿಗಳಿಗೆ ಕಳುಹಿಸಿಕೊಡಲಾಗಿದೆ. ನಿಯಮ ಮೀರುವ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಒಟ್ಟಿನಲ್ಲಿ ಹೇಳುವುದಾದರೆ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಜೂನ್ ಆರಂಭವಾಗುತ್ತಿದ್ದಂತೆ ಶಾಲೆಗಳು ಎಂದಿನಂತೆ ಆರಂಭವಾಗುತ್ತಿದ್ದರೆ, ಪಂಜಾಬ್‌ನ ವಿದ್ಯಾರ್ಥಿಗಳಿಗೆ ಮಾತ್ರ ಬಿಸಿಲಿನ ಕಾರಣದಿಂದಾಗಿ ಮತ್ತೊಂದು ತಿಂಗಳು ರಜೆಯ ಹಬ್ಬದೂಟವನ್ನೇ ಬಡಿಸಿದಂತಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+