School Holiday: ಫೆಬ್ರವರಿ 20ರ ವರೆಗೂ ಶಾಲೆಗಳಿಗೆ ರಜೆ
School Holiday: ಹಬ್ಬಗಳ ಸಂದರ್ಭದಲ್ಲಿ ಹಾಗೂ ವಿಶೇಷ ಕಾರ್ಯಕ್ರಮಗಳ ವೇಳೆ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗುತ್ತದೆ. 2025ರ ಜನವರಿ ಆರಂಭದಿಂದ ಇಲ್ಲಿಯವರೆಗೂ ಕೆಲವು ರಾಜ್ಯಗಳಲ್ಲಿ ಸಾಲು ರಜೆಗಳನ್ನೇ ನೀಡಲಾಗಿದೆ. ಹಾಗೆಯೇ ಈ ದೇಶದ ಭಾಗಗಳಲ್ಲಿನ ಶಾಲೆಗಳಿಗೆ ಫೆಬ್ರವರಿ 20ರ ರವರೆಗೆ ರಜೆ ಘೋಷಣೆ ಮಾಡಲಾಗಿದೆ. ಹಾಗಾದಾರೆ ಎಲ್ಲೆಲ್ಲಿ ಹಾಗೂ ಕಾರಣ ಏನೆಂದು ಇಲ್ಲಿ ತಿಳಿಯಿರಿ.
ಸರ್ಕಾರಿ ರಜೆ ಹೊರತುಪಡಿಸಿ ಈಗಾಗಲೇ ವಿವಾದಾತ್ಮಕ ಹೇಳಿಕೆಗಳ ವಿರುದ್ಧ ಹೋರಾಟ ಹಿನ್ನೆಲೆ ಕರ್ನಾಟದ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಇನ್ನೂ ಕೆಲವು ರಾಜ್ಯಗಳಲ್ಲಿ ಚಳಿಗಾಲದ ವೇಳೆ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ರಜೆ ಘೋಷಿಸಲಾಗಿತ್ತು. ಆದರೆ, ಇದೀಗ ಬೇರೆಯದ್ದೇ ಕಾರಣಕ್ಕೆ ಹಲವು ರಾಜ್ಯಗಳಲ್ಲಿ ಫೆಬ್ರವರಿ 20ರ ವರೆಗೆ ಶಾಲೆಗಳ ರಜೆಯನ್ನು ವಿಸ್ತರಿಸಲಾಗಿದೆ.

ಇದೀಗ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಪ್ರತಿ ನಿತ್ಯವೂ ಕೊಟ್ಯಾಂತರ ಮಂದಿ ಭೇಟಿ ಕೊಡುತ್ತಿದ್ದಾರೆ. ಹೀಗೆ ಭಾರೀ ಸಂಖ್ಯೆಯಲ್ಲಿ ಬರುವ ಭಕ್ತರ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ಪ್ರಯಾಗ್‌ರಾಜ್ ಜಿಲ್ಲಾಡಳಿತ ಈ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ಅನ್ವಹಿಸುವಂತೆ ರಜೆಯ ಆದೇಶವನ್ನು ಹೊರಡಿಸಿದೆ.
ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ 2025ರ ಮಹಾಕುಂಭ ಮೇಳದಲ್ಲಿ ಭಾಗವಹಿಸಲು ಪ್ರತಿದಿನ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮನಿಸುತ್ತಲೇ ಇದ್ದಾರೆ. ಹೀಗೆ ಭಕ್ತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಈ ಧಾರ್ಮಿಕ ನಗರದ ಸಂಚಾರ ಮತ್ತು ಇತರ ವ್ಯವಸ್ಥೆಗಳ ಮೇಲೆ ದೊಡ್ಡ ಪ್ರಮಾಣದಲ್ಲಿ ಪರಿಣಾಮ ಬೀರುತ್ತಿದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಈ ಭಾಗದ ಶಾಲೆಗಳಿಗೆ ರಜೆಯನ್ನು ಫೆಬ್ರವರಿ 20ರ ವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಫೆಬ್ರವರಿ 26ರ ವರೆಗೆ ಮಹಾಕುಂಭ ಮೇಳ ನಡೆಯುತ್ತಿದ್ದು, ಪ್ರತಿದಿನ ಭಕ್ತರ ಸಂಖ್ಯೆ ಹೆಚ್ಚುತ್ತಲೇ ಇದೆ. ಈ ಹಿನ್ನೆಲೆ ಇಲ್ಲಿನ ಜಿಲ್ಲಾಡಳಿತವು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ. ಆ ಪ್ರಕಾರ, ಪ್ರಯಾಗ್‌ರಾಜ್‌ನಲ್ಲಿ ಫೆಬ್ರವರಿ 20ರ ವರೆಗೆ 8ನೇ ತರಗತಿವರರಗಿನ ಎಲ್ಲಾ ಶಾಲೆಗಳು ಮುಚ್ಚಲ್ಪಡುತ್ತವೆ. ಆದರೆ ಆನ್‌ಲೈನ್ ತರಗತಿಗಳು ನಡೆಯುತ್ತವೆ ಎಂದು ತಿಳಿಸಿದೆ.
ಪ್ರಯಾಗ್‌ರಾಜ್ ಜಿಲ್ಲಾಡಳಿತವು ಫೆಬ್ರವರಿ 20ರ ವರೆಗೆ 8ನೇ ತರಗತಿವರಗೆ ಶಾಲೆಗಳನ್ನು ಮುಚ್ಚುವಂತೆ ಆದೇಶ ಹೊರಡಿಸಿದೆ. ಆದರೆ, ಈ ಸಮಯದಲ್ಲಿ ಆನ್‌ಲೈನ್‌ನಲ್ಲಿ ತರಗತಿಗಳನ್ನು ನಡೆಸಲಾಗುತ್ತದೆ. ಈ ಆದೇಶವನ್ನು ಶಿಕ್ಷಣ ಅಧಿಕಾರಿ ಪ್ರಮೀಣ್ ಕುಮಾರ್ ತಿವಾರಿ ಹೊರಡಿಸಿದ್ದು, ಇದು ಇಲ್ಲಿನ ಎಲ್ಲಾ ಮಂಡಳಿಗಳ ಶಾಲೆಗಳಿಗೆ ಅನ್ವಯಿಸುತ್ತದೆ ಅಂತಲೂ ತಿಳಿಸಿದ್ದಾರೆ.
ಸರ್ಕಾರಿ ಆದೇಶದ ಪ್ರಕಾರ, 8ನೇ ತರಗತಿವರೆಗಿನ ಶಾಲೆಗಳು ಮುಚ್ಚಿದ ನಂತರ, ಆನ್‌ಲೈನ್‌ನಲ್ಲಿ ಶಿಕ್ಷಕರು ಶಾಲೆಯ ಸಮಯಕ್ಕೆ ಸರಿಯಾಗಿ ಹಾಜರಿರಬೇಕು ಎಂದು ತಿಳಿಸಿದೆ. ಈ ಹಿಂದೆ ಮಹಾ ಕುಂಭಮೇಳವನ್ನು ಗಮನದಲ್ಲಿಟ್ಟುಕೊಂಡು, ಪ್ರಯಾಗ್‌ರಾಜ್ ಜಿಲ್ಲಾಡಳಿತವು 1ರಿಂದ 8ನೇ ತರಗತಿವರೆಗಿನ ಶಾಲೆಗಳನ್ನು ಫೆಬ್ರವರಿ 16ರ ವರೆಗೆ ಮುಚ್ಚುವಂತೆ ಆದೇಶ ಹೊರಡಿಸಿತ್ತು. ಇದೀಗ ಈ ರಜೆಯನ್ನು ಫೆಬ್ರವರಿ 20ರ ವರೆಗೆ ಅಂದರೆ ಮುಂದಿ 4 ದಿನಗಳವರೆಗೆ ವಿಸ್ತರಿಸಲಾಗಿದೆ.
ಪ್ರಯಾಗ್‌ರಾಜ್‌ನಲ್ಲಿ ಹದಗೆಡುತ್ತಿರುವ ಸಂಚಾರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು, ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಇಲ್ಲಿನ ದಟ್ಟಣೆ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಯಾವುದೇ ಪರಿಸ್ಥಿತಿಯಲ್ಲೂ ಜನದಟ್ಟಣೆ ಉಂಟಾಗಬಾರದು ಎಂದು ಸಿಎಂ ಯೋಗಿ ಆದಿತ್ಯಾನಾಥ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ.












Click it and Unblock the Notifications