ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ಏಮ್ಸ್‌ಗೆ ದಾಖಲು

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 13 : ಕೇಂದ್ರ ಗೃಹ ಸಚಿವ, ಹಿರಿಯ ಬಿಜೆಪಿ ನಾಯಕ ಅಮಿತ್ ಶಾ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಗಸ್ಟ್ ತಿಂಗಳಿನಲ್ಲಿಯೂ ಅವರು ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು.

55 ವರ್ಷದ ಅಮಿತ್ ಶಾ ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೋಮವಾರದಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಲಿದೆ.

ಗೃಹ ಸಚಿವ ಅಮಿತ್ ಶಾ ಏಮ್ಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಗೃಹ ಸಚಿವ ಅಮಿತ್ ಶಾ ಏಮ್ಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್

ಕೋವಿಡ್ ಸೋಂಕು ತಗುಲಿದ ಹಿನ್ನಲೆಯಲ್ಲಿ ಅಮಿತ್ ಶಾ ದೆಹಲಿಯ ಖಾಸಗಿ ಆಸ್ಪತ್ರೆಗೆ ಆಗಸ್ಟ್‌ 2ರಂದು ದಾಖಲಾಗಿದ್ದರು. ಆಗಸ್ಟ್ 14ರಂದು ತಾವು ಗುಣಮುಖರಾಗಿದ್ದು, ಹೋಂ ಐಸೋಲೇಷನ್‌ನಲ್ಲಿ ಕೆಲವು ದಿನ ಇರುವುದಾಗಿ ಅವರು ಟ್ವೀಟ್ ಮಾಡಿದ್ದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಕೊರೊನಾ ವರದಿ ನೆಗೆಟಿವ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೊರೊನಾ ವರದಿ ನೆಗೆಟಿವ್

ವಿಡಿಯೋ ಕಾನ್ಪರೆನ್ಸ್ ಮೂಲಕ ಪ್ರಮುಖ ಸಭೆಗಳಲ್ಲಿ ಮಾತ್ರ ಅಮಿತ್ ಶಾ ಪಾಲ್ಗೊಂಡಿದ್ದರು. ಯಾರೂ ಸಹ ಅಮಿತ್ ಶಾರನ್ನು ಭೇಟಿ ಮಾಡಿರಲಿಲ್ಲ. ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ಅಮಿತ್ ಶಾ ಅವರನ್ನು ಪುನಃ ಆಸ್ಪತ್ರೆಗೆ ದಾಖಲಾಗಿದ್ದರು.

ಕೊವಿಡ್‌ನಿಂದ ಚೇತರಿಸಿಕೊಂಡಿದ್ದ ಅಮಿತ್ ಶಾ ಮತ್ತೆ ಆಸ್ಪತ್ರೆಗೆ ದಾಖಲುಕೊವಿಡ್‌ನಿಂದ ಚೇತರಿಸಿಕೊಂಡಿದ್ದ ಅಮಿತ್ ಶಾ ಮತ್ತೆ ಆಸ್ಪತ್ರೆಗೆ ದಾಖಲು

ಕೋವಿಡ್ ಸೋಂಕು ತಗುಲಿತ್ತು

ಕೋವಿಡ್ ಸೋಂಕು ತಗುಲಿತ್ತು

ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕೋವಿಡ್ ಸೋಂಕು ತಗುಲಿತ್ತು. ಆಗಸ್ಟ್ ರ 2ರಂದು ಅವರು ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆಗಸ್ಟ್ 14ರಂದು ಗುಣಮುಖರಾಗಿ ಬಿಡುಗಡೆ ಹೊಂದಿದ್ದರು, ಬಳಿಕ ಹೋಂ ಐಸೊಲೇಷನ್‌ನಲ್ಲಿದ್ದರು.

ಆಗಸ್ಟ್ 18ರಂದು ಆಸ್ಪತ್ರೆಗೆ ದಾಖಲು

ಆಗಸ್ಟ್ 18ರಂದು ಆಸ್ಪತ್ರೆಗೆ ದಾಖಲು

ಅಮಿತ್ ಶಾ ಅವರು ಆಯಾಸ, ಮೈ ಕೈ ನೋವಿನ ಹಿನ್ನಲೆಯಲ್ಲಿ ಆಗಸ್ಟ್ 18ರಂದು ಮತ್ತೆ ಆಸ್ಪತ್ರೆಗೆ ದಾಖಲಾದರು. 13 ದಿನಗಳ ಕಾಲ ಚಿಕಿತ್ಸೆ ಪಡೆದ ಬಳಿಕ ಅವರು ಆಗಸ್ಟ್ 31ರಂದು ಡಿಸ್ಚಾರ್ಜ್ ಆಗಿದ್ದರು.

ಮತ್ತೆ ಆಸ್ಪತ್ರೆಗೆ ದಾಖಲು

ಮತ್ತೆ ಆಸ್ಪತ್ರೆಗೆ ದಾಖಲು

ಸೆ. 12ರ ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ಅಮಿತ್ ಶಾ ಅವರನ್ನು ಪುನಃ ಏಮ್ಸ್‌ಗೆ ದಾಖಲು ಮಾಡಲಾಗಿದೆ. ಅಮಿತ್ ಶಾ ಆರೋಗ್ಯದ ಬಗ್ಗೆ ಆಸ್ಪತ್ರೆ ಇದುವರೆಗೂ ಯಾವುದೇ ಮಾಹಿತಿ ನೀಡಿಲ್ಲ.

ಸಂಸತ್ ಅಧಿವೇಶನ ಆರಂಭ

ಸಂಸತ್ ಅಧಿವೇಶನ ಆರಂಭ

ಸೆ. 14ರಿಂದ ಸಂಸತ್‌ನ ಮುಂಗಾರು ಅಧಿವೇಶನ ಆರಂಭವಾಗಲಿದೆ. ಸುಮಾರು 7 ಕೇಂದ್ರ ಸಚಿವರು, 24ಕ್ಕೂ ಹೆಚ್ಚು ಸಂಸದರಿಗೆ ಕೋವಿಡ್ ಸೋಂಕು ತಗುಲಿತ್ತು. ಅವರೆಲ್ಲರೂ ಗುಣಮುಖರಾಗಿದ್ದು, ಈಗ ಚೇತರಿಸಿಕೊಂಡು ಸಂಸತ್ ಅಧಿವೇಶನಕ್ಕೆ ಹಾಜರಾಗುತ್ತಿದ್ದಾರೆ. ರಾಜ್ಯಸಭೆ, ಲೋಕಸಭೆ ಸೇರಿ 785 ಸದಸ್ಯರ ಪೈಕಿ 200ಕ್ಕೂ ಅಧಿಕ ಸದಸ್ಯರು 65 ವರ್ಷ ಮೇಲ್ಪಟ್ಟವರು.

English summary
55 year old union home minister Amit Shah was admitted to Delhi's AIIMS hospital on September 12, 2020 night. He discharged from hospital two weeks ago. He was earlier admitted to hospital after tested positive for Coronavirus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X