ಸಲಿಂಗಕಾಮː ಅಮೀರ್ ಖಾನ್ ಗೆ ಲೀಗಲ್ ನೋಟಿಸ್
ಮುಂಬೈ, ನ. 3: ಸತ್ಯಮೇವ ಜಯತೆ ಕಾರ್ಯಕ್ರಮದಲ್ಲಿ ಸಲಿಂಗಕಾಮವನ್ನು ಪ್ರಚೋದಿಸಿದ್ದಾರೆ ಎಂಬ ಆರೋಪದಡಿ ಬಾಲಿವುಡ್ ಸೂಪರ್ ಸ್ಟಾರ್ ಅಮೀರ್ ಖಾನ್ಗೆ ಚಂಢೀಗಡ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.
ಅಕ್ಟೋಬರ್ 19 ರಂದು ಖಾಸಗಿ ವಾಹಿನಿಯೊಂದರಲ್ಲಿ ಪ್ರಸಾರವಾದ ಸತ್ಯಮೇವ ಜಯತೆ ಶೋ ಗೆ ಸಂಬಂಧಿಸಿ ನೋಟಿಸ್ ನೀಡಲಾಗಿದೆ. ಅಮೀರ್ ಖಾನ್ ತಮ್ಮ ನಿರೂಪಣೆಯಲ್ಲಿ ಮೂಡಿಬಂದ ಸತ್ಯಮೇವ ಜಯತೆ ಶೋ ನಲ್ಲಿ ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘಿಸಿ ಮಾತನಾಡಿದ್ದಾರೆ ಎಂದು ವಕೀಲರೊಬ್ಬರು ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ.[ಮೋದಿ ಟೀಕಿಸಿದ್ದ ಅಮೀರ್ ಹೊಡೆದ್ರು 'ಯೂ ಟರ್ನ್']

ವಕೀಲರಾದ ಮನ್ ದೀಪ್ ಕೌರ್ ಎಂಬುವರು ಸಲ್ಲಿಸದ್ದ ದೂರನ್ನು ಆಲಿಸಿದ ನ್ಯಾಯಾಧೀಶ ಜಸ್ವಿಂದರ್ ಸಿಂಗ್ ಅಮೀರ್ ಖಾನ್ ಅವರಿಗೆ ವಿವರಣೆ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ. ಅಮೀರ್ ಖಾನ್ ಮಾತನಾಡುತ್ತ ಸಲಿಂಗ ಕಾಮವನ್ನು ಪ್ರಚೋದಿಸುವ ಹೇಳಿಕೆ ನೀಡಿದ್ದರು. ಅಲ್ಲಿ ತಮ್ಮ ವೈಯಕ್ತಿಕ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದು ಸುಪ್ರೀಂ ಕೋರ್ಟ್ ಆದೇಶದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ದೂರು ಕೌರ್ ದಾಖಲಿಸಿದ್ದರು.[ಈತನಿಗೆ ಸಲಿಂಗ ಕಾಮ ಹೆಮ್ಮೆ ಪಡುವ ವಿಷಯǃ]
ಅಲ್ಲದೇ ತಮ್ಮ ಮಾತಿನ ಮೂಲಕ ಅಮೀರ್ ಖಾನ್ ಸಂವಿಧಾನದ 377 ಕಲಂ ಆಧಾರವಾಗಿಟ್ಟುಕೊಂಡು ಸಲಿಂಗಕಾಮಿಗಳ ಹಕ್ಕುಗಳನ್ನು ಪ್ರತಿಪಾದಿಸಿದ್ದರು. ಈ ಹಿನ್ನೆಲೆಯಲ್ಲಿ ಕೌರ್ ಅಮೀರ್ ಖಾನ್ ಗೆ ಲೀಗಲ್ ನೋಟಿಸ್ ಕಳಿಸಿದ್ದರು. ಆದರೆ ಅಮೀರ್ ಅದಕ್ಕೆ ಯಾವ ಉತ್ತರ ನೀಡಿರಲಿಲ್ಲ. ನಂತರ ಅನಿವಾರ್ಯವಾಗಿ ನ್ಯಾಯಾಲಯದ ಮೊರೆ ಹೋಗಿದ್ದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications