Get Updates
Get notified of breaking news, exclusive insights, and must-see stories!

Breaking: ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ: ನಾಸಿಕ್‌ನಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ- 10 ಸಾವು

ಮುಂಬೈ ಜನವರಿ 13: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಬಸ್ಸೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಹತ್ತು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸಿದ್ದು ವಿಚಾರಣೆ ನಡೆಸಿದ್ದಾರೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಪ್ರಾಣಹಾನಿಗೆ ದುಃಖ ವ್ಯಕ್ತಪಡಿಸಿದ್ದು, ಅಪಘಾತದ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ.

ಥಾಣೆ ಜಿಲ್ಲೆಯ ಅಂಬರ್‌ನಾಥ್‌ನಿಂದ ಹೊರಟಿದ್ದ ಖಾಸಗಿ ಐಷಾರಾಮಿ ಬಸ್ ಅಹಮದ್‌ನಗರ ಜಿಲ್ಲೆಯ ಶಿರಡಿಗೆ ತೆರಳುತ್ತಿತ್ತು. ಮುಂಬೈನಿಂದ ಸುಮಾರು 180 ಕಿಮೀ ದೂರದಲ್ಲಿರುವ ನಾಸಿಕ್‌ನ ಸಿನ್ನಾರ್ ತಹಸಿಲ್‌ನ ಪಥರೆ ಶಿವರ್ ಬಳಿ ಬೆಳಿಗ್ಗೆ 6.30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾಥಮಿಕ ವರದಿಗಳ ಪ್ರಕಾರ, ಮೃತರಲ್ಲಿ ಏಳು ಮಹಿಳೆಯರು, ಇಬ್ಬರು ಸಣ್ಣ ಹುಡುಗರು ಮತ್ತು ಒಬ್ಬ ಪುರುಷ ಸೇರಿದ್ದಾರೆ. ಗಾಯಾಳುಗಳನ್ನು ಸಿನ್ನಾರ್ ಗ್ರಾಮಾಂತರ ಆಸ್ಪತ್ರೆ ಮತ್ತು ಸಿನ್ನಾರ್‌ನಲ್ಲಿರುವ ಯಶವಂತ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Horrible accident in Maharashtra: Bus collides with truck in Nashik - 10 killed

ಘಟನೆಗೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಮೃತರ ಕುಟುಂಬ ಸದಸ್ಯರಿಗೆ ತಲಾ ₹ 5 ಲಕ್ಷ ಧನಸಹಾಯ ಘೋಷಿಸಿದ್ದಾರೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಅವರ ಕಚೇರಿಯ ಪ್ರಕಟಣೆ ತಿಳಿಸಿದೆ. ಶ್ರೀ ಶಿಂಧೆ ಅವರು ನಾಸಿಕ್ ವಿಭಾಗೀಯ ಆಯುಕ್ತರೊಂದಿಗೆ ಮಾತನಾಡಿ ಗಾಯಾಳುಗಳನ್ನು ತಕ್ಷಣವೇ ಚಿಕಿತ್ಸೆಗಾಗಿ ನಾಸಿಕ್ ಮತ್ತು ಶಿರಡಿಗೆ ಸ್ಥಳಾಂತರಿಸಲು ಮತ್ತು ಅಪಘಾತದ ಕಾರಣಗಳ ಬಗ್ಗೆ ವಿಚಾರಣೆ ನಡೆಸುವಂತೆ ಸೂಚಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+