ಲಕ್ನೋದಲ್ಲಿ ಭೀಕರ ಅಪಘಾತ: ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಟ್ರಕ್- ಆರು ಮಂದಿ ಸಾವು

ಲಕ್ನೋ ಜನವರಿ 23: ಉತ್ತರ ಪ್ರದೇಶದ ಉನ್ನಾವೊ ಜಿಲ್ಲೆಯಲ್ಲಿ ಭೀಕರ ಅಪಘಾತವೊಂದು ಭಾನುವಾರ ಸಂಭವಿಸಿದೆ. ಹೆದ್ದಾರಿಯಲ್ಲಿ ವೇಗವಾಗಿ ಬಂದ ಟ್ರಕ್ ಪಾದಚಾರಿಗಳಿಗೆ ಡಿಕ್ಕಿ ಹೊಡೆದು ಕಾರನ್ನು ನುಜ್ಜುಗುಜ್ಜಾಗಿಸಿದೆ. ಇದರ ಪರಿಣಾಮ ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು ಕೆಲವರು ಗಾಯಗೊಂಡಿದ್ದಾರೆ.

ಟ್ರಕ್‌ಗೆ ಡಿಕ್ಕಿ ಹೊಡೆದ ಕಾರಿನಲ್ಲಿ ಸುಮಾರು ನಾಲ್ಕೈದು ಮಂದಿ ಸಿಲುಕಿಕೊಂಡಿದ್ದರು ಎಂದು ವರದಿಯಾಗಿದೆ. ಕ್ರೇನ್ ಸಹಾಯದಿಂದ ರಕ್ಷಣಾ ಕಾರ್ಯಾಚರಣೆ ಮಾಡಲಾಗಿದೆ. ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗಳಿಗೆ ರವಾನಿಸಿದ್ದಾರೆ.

ಘಟನಾ ಸ್ಥಳದಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಶಶಿ ಶೇಖರ್ ಸಿಂಗ್ ಕೂಡ ಉಪಸ್ಥಿತರಿದ್ದರು. ಲಕ್ನೋ-ಕಾನ್ಪುರ ಹೆದ್ದಾರಿ ಬಳಿಯ ಅಚಲಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

 Horrible accident on Lucknow-Kanpur highway: Truck hit to pedestrians - Six dead

ಮೃತರನ್ನು ಛೋಟ್ಟೆಲಾಲ್ (32), ಶಿವಾಂಗ್ (30), ವಿಮಲೇಶ್ (60), ರಾಮ್‌ಪ್ಯಾರಿ (45) ಮತ್ತು ಆಕೆಯ ಮಗಳು ಶಿವಾನಿ (13) ಎಂದು ಗುರುತಿಸಲಾಗಿದೆ. ಆರನೆಯ ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಜಿಲ್ಲಾ ಆಸ್ಪತ್ರೆಯ ತುರ್ತು ವೈದ್ಯಾಧಿಕಾರಿ ಡಾ ಆಶಿಶ್ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+