Breaking: ಮಣಿಪುರದಲ್ಲಿ ಭೀಕರ ರಸ್ತೆ ಅಪಘಾತ: 15 ವಿದ್ಯಾರ್ಥಿಗಳು ಸಾವು
ಮಣಿಪುರ ಡಿಸೆಂಬರ್ 21: ಮಣಿಪುರದ ನೋನಿ ಜಿಲ್ಲೆಯಲ್ಲಿ ಬುಧವಾರ ವಿದ್ಯಾರ್ಥಿಗಳಿದ್ದ ಎರಡು ಬಸ್‌ಗಳು ನಿಯಂತ್ರಣ ತಪ್ಪಿ ಕನಿಷ್ಠ 15 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಮಣಿಪುರದ ನೋನಿ ಜಿಲ್ಲೆಯ ಬಿಸ್ನುಪುರ್-ಖೌಪುಮ್ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದೆ.

ವರದಿಗಳ ಪ್ರಕಾರ, ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಎರಡು ಬಸ್‌ಗಳು ಯಾರಿಪೋಕ್‌ನ ತಂಬಲ್ನು ಹೈಯರ್ ಸೆಕೆಂಡರಿ ಶಾಲೆಗೆ ಸೇರಿದ್ದವು. ಬಸ್ಸುಗಳು ಅಧ್ಯಯನ ಪ್ರವಾಸಕ್ಕಾಗಿ ಖೌಪುಮ್ ಕಡೆಗೆ ಹೋಗುತ್ತಿದ್ದವು ಎಂದು ತಿಳಿದು ಬಂದಿದೆ.
ವಿದ್ಯಾರ್ಥಿಗಳಿದ್ದ ಎರಡು ಬಸ್‌ಗಳು ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿವೆ. ವರದಿಗಳ ಪ್ರಕಾರ ಅಧ್ಯಯನ ಪ್ರವಾಸಕ್ಕಾಗಿ ಖೌಪುಮ್‌ಗೆ ಮಕ್ಕಳನ್ನು ಕರೆದೊಯ್ಯಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಇದೇ ವೇಳೆ ನಿಯಂತ್ರಣ ತಪ್ಪಿ ಎರಡೂ ಬಸ್‌ಗಳು ಪಲ್ಟಿಯಾಗಿವೆ.
ಅಪಘಾತದ ನಂತರ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕಾಗಮಿಸಿದ ಸ್ಥಳೀಯರು ಮಕ್ಕಳನ್ನು ರಕ್ಷಿಸಲು ಸಹಾಯ ಮಾಡಿದ್ದಾರೆ. ತಕ್ಷಣ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಗಾಯಾಳುಗಳೆಲ್ಲರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿದ್ದು ಪ್ರಕರಣದ ತನಿಖೆ ಆರಂಭವಾಗಿದೆ.












Click it and Unblock the Notifications