ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ
Hosur Airport: ಕರ್ನಾಟಕದ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ತಮಿಳುನಾಡಿನ ಹೊಸೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ವಿಚಾರವು ಕೆಲವೊಂದು ವಿವಾದ ಸ್ವರೂಪವನ್ನು ಪಡೆದುಕೊಂಡಿದೆ. ಇದೀಗ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ವಿಚಾರವು ಚರ್ಚೆಯ ಮುನ್ನೆಲೆಗೆ ಬಂದಿದೆ.
ಇದೇ ಸಂದರ್ಭದಲ್ಲಿ ಹೊಸೂರಿನಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ಕೃಷಿ ಭೂಮಿಯನ್ನು ಸ್ವಾಧೀನ ಪಡೆಸಿಕೊಳ್ಳುವುದಕ್ಕೆ ತಮಿಳುನಾಡು ಸರ್ಕಾರ ಮುಂದಾಗಿದೆ. ಆದರೆ, ಇದಕ್ಕೆ ಅಲ್ಲಿನ ಕನ್ನಡ, ತೆಲುಗು ಹಾಗೂ ತಮಿಳು ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ಹೊಸೂರು ವಿಮಾನ ನಿಲ್ದಾಣ ನಿರ್ಮಾಣ ಭೂಸ್ವಾಧೀನ ವಿವಾದಕ್ಕೆ ಸಂಬಂಧಿಸಿದಂತೆ ಹೊಸೂರಿನಲ್ಲಿರುವ ಕನ್ನಡಿಗರೊಂದಿಗೆ ತಮಿಳುನಾಡಿನ ಶಾಸಕ ಕನ್ನಡಲ್ಲೇ ಮಾತನಾಡಿರುವ ವಿಡಿಯೋ ಇದೀಗ ವೈರಲ್ ಆಗುತ್ತಿದೆ.

ಬೆಂಗಳೂರಿಗೆ ಪೈಪೋಟಿ ನೀಡುವ ಉದ್ದೇಶದಿಂದ ಬೆಂಗಳೂರಿನ ಗಡಿಭಾಗದ ಹಾಗೂ ತಮಿಳುನಾಡಿನ ಹೊಸೂರಿನಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದಕ್ಕೆ ತಮಿಳುನಾಡು ಸರ್ಕಾರವು ಮುಂದಾಗಿತ್ತು. ಆದರೆ, ಇದಕ್ಕೆ ಹಲವು ಅಡೆತಡೆಗಳು ಎದುರಾಗಿವೆ. ಮುಖ್ಯವಾಗಿ ಈ ಭಾಗದಲ್ಲಿ ಭೂಸ್ವಾಧೀನ ಪ್ರಕ್ರಿಯೆಗೆ ತೊಡಕಾಗಿದೆ. ಈ ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ 2,979 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಉದ್ದೇಶಿಸಲಾಗಿದೆ. ಈ ಭಾಗದಲ್ಲಿನ 12 ಗ್ರಾಮಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ನಡೆಸಲು ಮುಂದಾಗಿತ್ತು. ಆದರೆ ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಹೊಸೂರು ಮತ್ತು ಶೂಲಗಿರಿ ತಾಲ್ಲೂಕುಗಳ ಒಟ್ಟು 12 ಗ್ರಾಮಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ.
ಕನ್ನಡದಲ್ಲಿ ಮಾತನಾಡಿದ ತಮಿಳು ಶಾಸಕ
ಇನ್ನು ಹೊಸೂರಿನಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಭೂಸ್ವಾಧೀನ ತೊಡಕಾಗಿದ್ದು, ಈ ಭಾಗದ ಕನ್ನಡ ರೈತರೊಂದಿಗೆ ಕನ್ನಡದಲ್ಲೇ ತಮಿಳುನಾಡಿನ ಶಾಸಕ ಮಾತನಾಡಿರುವ ವಿಡಿಯೋ ವೈರಲ್ ಆಗಿದೆ. ಈ ಭಾಗದಲ್ಲಿ ಯಾವುದೇ ಕಾರಣಕ್ಕೂ ಭೂಸ್ವಾಧೀನ ಮಾಡಲು ಬಿಡುವುದಿಲ್ಲ. ಒಂದೊಮ್ಮೆ ಈ ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾದರೆ ನಾನು ರಾಜಕೀಯಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ತಮಿಳುನಾಡಿನ ಶಾಸಕ ಕನ್ನಡದಲ್ಲೇ ಹೇಳಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ತಮಿಳುನಾಡಿನ ಹೊಸೂರಿನ ಶಾಸಕ ವೈ. ಪ್ರಕಾಶ್ ಕನ್ನಡದಲ್ಲಿ ಮಾತನಾಡಿರುವ ವಿಡಿಯೋ ವೈರಲ್ ಆಗುತ್ತಿದೆ. ವಿಶೇಷವೆಂದರೆ ಇವರು ಆಡಳಿತರೂಢ ಡಿಎಂಕೆ ಪಕ್ಷದಿಂದ ಶಾಸಕರಾಗಿದ್ದಾರೆ.
ಹೊಸೂರಿನಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎನ್ನುವ ವಿಚಾರವನ್ನು ತಮಿಳುನಾಡಿನ ಆಡಳಿತರೂಢ ಡಿಎಂಕೆ ಪಕ್ಷವು ಪ್ರತಿಷ್ಠೆಯಾಗಿ ಪರಿಗಣಿಸಿದೆ. ಆದರೆ ಹೊಸೂರಿನ ಶಾಸಕರು ನಾನು ಜನರೊಂದಿಗೆ ನಿಲ್ಲುತ್ತೇನೆ. ನಿಮ್ಮ ವಿರೋಧದ ನಡುವೆ ಈ ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗುವುದಕ್ಕೆ ಸಾಧ್ಯವಿಲ್ಲ. ನಾನು ಈ ಭಾಗದ ಜನ ಹಾಗೂ ರೈತರೊಂದಿಗೆ ಇದ್ದೇನೆ ಎಂದು ಭರವಸೆ ನೀಡಿದ್ದಾರೆ.
Hosur Airport ವೈರಲ್ ವಿಡಿಯೋದಲ್ಲಿ ಏನಿದೆ
ವೈರಲ್ ಆಗಿರುವ ವಿಡಿಯೋದಲ್ಲಿ ನಾನು ಆಡಳಿತರೂಢ ಪಕ್ಷದ ಶಾಸಕನಾಗಿದ್ದೂ ನಾನು ತಮಿಳುನಾಡಿನ ಮುಖ್ಯಮಂತ್ರಿಗಳೊಂದಿಗೆ ನಿಮ್ಮನ್ನು (ರೈತರನ್ನು) ಭೇಟಿ ಮಾಡಿಸಿದೆ. ದೊಡ್ಡ ಸಮಾವೇಶ ನಡೆಯುವ ಸಂದರ್ಭದಲ್ಲೇ ರೈತರು ಪ್ರತಿಭಟನೆ ಮಾಡಿದ್ದಾರೆ. ಇದು ಅವಶ್ಯಕತೆ ಇರಲಿಲ್ಲ. ಈ ಭಾಗದಲ್ಲಿ ಪರಿಹಾರ ಮಾಡಿಕೊಡಬೇಕು / ಭೂಸ್ವಾಧೀನ ಸಮಸ್ಯೆ ಆಗದಂತೆ ನೋಡಿಕೊಳ್ಳುವ ಬದ್ಧತೆ ನನದು ಎಂದು ಅವರು ಹೇಳಿದ್ದಾರೆ.
ನಾವು ರೈತರ ಜಮೀನು ಒಂದೇ ಒಂದು ಭಾಗವನ್ನೂ ಸ್ವಾಧೀನ ಪಡಿಸಿಕೊಂಡಿಲ್ಲ. ಮುಂದೆಯೂ ಸ್ವಾಧೀನ ಮಾಡಿಕೊಳ್ಳುವುದಿಲ್ಲ ಎಂದು ಹೊಸೂರು ಶಾಸಕ ವೈ ಪ್ರಕಾಶ್ ಅವರು ಕನ್ನಡದಲ್ಲೇ ಹೇಳಿದ್ದಾರೆ.
The beauty of belt in and around Bengaluru, in hosur, where a unqiue dialect of Telugu, & Kannada are spoken by locals, its a thing you won't find elsewhere
— Karthik Reddy (@bykarthikreddy) March 12, 2026
Here is Hosur MLA (Tamil Nadu), explaining in fluent local telugu and kannada to farmers on airport and land issue pic.twitter.com/zDQR5AyK39
ಅಲ್ಲದೆ ಇದೇ ಸಂದರ್ಭದಲ್ಲಿ ಹೊಸೂರಿನ ಶಾಸಕ ವೈ. ಪ್ರಕಾಶ್ ಅವರು ಇದೇ ಸಂದರ್ಭದಲ್ಲಿ ತೆಲುಗು ಭಾಷೆಯಲ್ಲಿ ಮಾತನಾಡಿರುವುದು ಸಹ ಇದೆ. ಶಾಸಕ ಭಾಷಾ ಪ್ರೀತಿ ಹಾಗೂ ಪರಿಸ್ಥಿತಿಯನ್ನು ನಿಭಾಯಿಸಿರುವ ರೀತಿಗೆ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
-
Bengaluru Second Airport: 5 ತಿಂಗಳಲ್ಲಿ ಬೆಂಗಳೂರು 2ನೇ ವಿಮಾನ ನಿಲ್ದಾಣ ಸ್ಥಳ ಫೈನಲ್: 3 ತಾಣಗಳಿಗೆ ಕಾರ್ಯಸಾಧ್ಯತಾ ವರದಿ -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Free Biryani: ಒಂದು ಸಿಲಿಂಡರ್ ಕೊಡಿ, ತಿಂಗಳು ಪೂರ್ತಿ ಉಚಿತ ಬಿರಿಯಾನಿ ತಿನ್ನಿ: ಹೊಸೂರು ಹೋಟೆಲ್ನಿಂದ ಭರ್ಜರಿ ಆಫರ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ













Click it and Unblock the Notifications