Get Updates
Get notified of breaking news, exclusive insights, and must-see stories!

Massive Flood: ಭಾರೀ ಮೇಘಸ್ಫೋಟಕ್ಕೆ ಕೊಚ್ಚಿ ಹೋದ ಮನೆಗಳು: ಜೀವ ಉಳಿಸಿಕೊಳ್ಳಲು ಪರದಾಟ: IMD ಎಚ್ಚರಿಕೆ ಏನು?

Massive Flood: ದೇಶದ ಹಲವು ರಾಜ್ಯಗಳಲ್ಲಿ ಮುಂಗಾರು ಚುರುಕು ಪಡೆದಿದೆ. ಈ ನಡುವೆಯೇ ಇದೀಗ ಉತ್ತರಾಖಂಡದ ಉತ್ತರಕಾಶಿಯಲ್ಲಿ ಜಲಪ್ರಳಯದಿಂದ ಬಹುದೊಡ್ಡ ದುರಂತವೇ ನಡೆದಿದೆ. ಹಾಗಾದ್ರೆ ಎಲ್ಲಿ ಏನೆಲ್ಲಾ ಅವಾಂತಗಳು ಆಗಿವೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಉತ್ತರಕಾಶಿ ಜಿಲ್ಲೆಯ ಧರಾಲಿ ಗ್ರಾಮದಲ್ಲಿ ಇಂದು (ಆಗಸ್ಟ್ 5) ಭಾರೀ ಮೇಘಸ್ಫೋಟ ಸಂಭವಿಸಿ ಪ್ರವಾಹದಲ್ಲಿ ಮನೆಗಳು ಕೊಚ್ಚಿಕೊಂಡು ಹೋದ ದುರಂತ ನಡೆದಿದೆ. ಈಗಲೂ ಸಹ ಭೂಕುಸಿತ ಮುಂದುವರೆದ ಪರಿಣಾಮ ಈ ಭಾಗದ ಜನರು ಅಕ್ಷರಸಃ ನಲುಗಿಹೋಗಿದ್ದಾರೆ. ಪ್ರಾಣ ಉಳಿದರೆ, ಹೆಚ್ಚಾದೀತು ಎನ್ನುವಷ್ಟರ ಮಟ್ಟಿಗೆ ಹೀಗೆ ಮೇಘಸ್ಫೋಟ ಸಂಭವಿಸಿದೆ. ಇನ್ನೂ ಹವಾಮಾನ ಇಲಾಖೆ ಪ್ರಕಾರ ಈ ಭಾಗದಲ್ಲಿ ಭಾರೀ ಮಳೆ ಮುಂದುವರೆಯಲಿದೆ ಎಂದು ಎಚ್ಚರಿಕೆ ನೀಡಿದೆ.

Houses flooded due to heavy rains in Uttarakhand What are the IMD alert

ಜಲಪ್ರಳಯದಿಂದ ಧರಾಲಿ ಗ್ರಾಮದಲ್ಲಿ ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿದ ಪರಿಣಾಮ ಮನೆ-ಮಠಗಳು, ರಸ್ತೆಗಳು ಕೊಚ್ಚಿಹೋಗಿವೆ. ಇದರಿಂದ ಜನಜೀವನ ಹೇಳತೀರದಂತಾಗಿದೆ. ಯಾವುದೇ ಮೂಲಭೂತ ಸೌಕರ್ಯಗಳು ದೊರೆಯಂತೆ ಆಗಿದೆ. ಈ ಮೇಘಸ್ಫೋಟದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿವೆ.

ಭಾರೀ ಮಳೆಯಿಂದ ಗಂಗಾ ನದಿ ಉಕ್ಕಿ ಹರಿದ ಪರಿಣಾಮ ಧರಾಲಿ ಗ್ರಾಮ ಸಂಪೂರ್ಣ ಮುಳುಗಡೆ ಆಗಿದೆ. ಪರಿಣಾಮ ಇಲ್ಲಿನ ಹಲವು ಜನರು ನಾಪತ್ತೆಯಾಗಿದ್ದಾರೆ ಎನ್ನಲಾಗುತ್ತಿದ್ದು, ಇನ್ನೂ ಬಹುತೇಕ ಮಂದಿ ಜೀವ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ಮತ್ತೊಂದೆಡೆ ಗ್ರಾಮದಲ್ಲಿ ಸಿಲುಕಿಕೊಂಡಿರುವ ಜನರನ್ನು ರಕ್ಷಣೆ ಮಾಡಲು ತುರ್ತು ಕಾರ್ಯಾಚರಣೆ ಮುಂದುವರೆದಿದೆ. ಈಗಾಗಲೇ ಇಲ್ಲಿನ ರಸ್ತೆ ಸಂಪರ್ಕಗಳು ಸಂಪೂರ್ಣ ಕಡಿತಗೊಂಡಿವೆ ಎಂದು ತಿಳಿದುಬಂದಿದೆ.

ಜಲಪ್ರಳಯದಿಂದ ಗಂಗೋತ್ರಿ ರಾಷ್ಟ್ರೀಯ ಹೆದ್ದಾರಿಯ ಕೆಲವು ಭಾಗಗಳು ಮುಚ್ಚಿಹೋಗಿದ್ದು, ಚಾರ್ ಧಾಮ ಯಾತ್ರೆಯ ಭಕ್ತರು ತೊಂದರೆ ಒಳಗಾಗಿದ್ದಾರೆ. ಈ ಹಿನ್ನೆಲೆ ಭಕ್ತರು ಸುರಕ್ಷಿತ ಸ್ಥಳಗಳಿಗೆ ಹೋಗಿ ತಂಗಲು ಸೂಚನೆ ನೀಡಲಾಗಿದೆ. ಎಸ್‌ಡಿಆರ್‌ಎಫ್‌, ಎನ್‌ಡಿಆರ್‌ಎಫ್‌ ಹಾಗೂ ಸ್ಥಳೀಯ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ದುರಂತದ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಉತ್ತರಕಾಶಿ ಜಿಲ್ಲಾಡಳಿತ ತುರ್ತು ಸ್ಥಿತಿಯನ್ನು ಘೋಷಣೆ ಮಾಡಿದೆ. ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರಕ್ಕೆ ಭೇಟಿ ನೀಡಿ, ರಕ್ಷಣಾ ಕಾರ್ಯವನ್ನು ತ್ವರಿತಗೊಳಿಸುವಂತೆ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ.

ಹವಾಮಾನ ಇಲಾಖೆ ಎಚ್ಚರಿಕೆ ಏನು?: ಉತ್ತರಾಖಂಡದ ಹಲವು ಜಿಲ್ಲೆಗಳಲ್ಲಿ ಮುಂದಿನ ಹಲವು ದಿನಗಳ ಕಾಲ ಭಾರೀ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಉತ್ತರಕಾಶಿ, ರುದ್ರಪ್ರಯಾಗ, ಚಮೋಲಿ ಮತ್ತು ತೆಹ್ರಿ ಜಿಲ್ಲೆಗಳಲ್ಲಿ ರಣಭೀಕರ ಮಳೆಯಾಗಲಿದ್ದು, ಪ್ರವಾಹದ ಮುನ್ಸೂಚನೆ ನೀಡಿದೆ. ಆದ್ದರಿಂದ ಈ ಭಾಗಗಳಲ್ಲಿ ಜನರು ಮುಂಜಾಗ್ರತಾ ಕ್ರಮವಾಗಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆಯೂ ಸೂಚನೆ ನೀಡಿದೆ.

ಈಗಾಗಲೇ ದೇಶದ ಹಲವೆಡೆ ಭಾರೀ ಮಳೆಯಿಂದಾಗಿ ದೊಡ್ಡ ದೊಡ್ಡ ಅವಾಂತರಗಳು ಸಂಭವಿಸಿ ಜನರು ಜೀವ ಕಳೆದುಕೊಂಡ ಘಟನೆಗಳು ನಡೆದಿವೆ. ಇದೀಗ ಮತ್ತೆ ಮುಂಗಾರು ಚುರುಕು ಪಡೆದಿದ್ದು, ಮುಂದಿನ ದಿನಗಳಲ್ಲಿ ಮತ್ತೇನು ಕಾದಿದೆಯೋ ಎನ್ನುವ ಆತಂಕದಲ್ಲಿ ಜನರಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+