Pahalgam Attack: ಪಹಲ್ಗಾಮ್ ದಾಳಿ ಶಂಕಿತ ಉಗ್ರರ ಮನೆಗಳು ಧ್ವಂಸ
ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ಉಗ್ರರ ಭೇಟೆ ಆರಂಭಿಸಿದೆ. ಭಯೋತ್ಪಾದಕರಿಗೆ ಸಹಾಯ ಮಾಡುವವರ ಹೆಡೆಮುರಿ ಕಟ್ಟುತ್ತಿದ್ದು, ಶನಿವಾರ ಇಬ್ಬರು ಶಂಕಿಯ ಉಗ್ರರ ಮನೆಗಳನ್ನು ಧ್ವಂಸಗೊಳಿಸಲಾಗಿದೆ. ಭಯೋತ್ಪಾದಕ ಮೂಲಸೌಕರ್ಯವನ್ನು ನಾಶಮಾಡುವ ಗುರಿಯೊಂದಿಗೆ ಅಧಿಕಾರಿಗಳು ತೀವ್ರ ದಾಳಿಯ ನಡೆಸುತ್ತಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೊಬ್ಬ ಶಂಕಿತ ಭಯೋತ್ಪಾದಕನ ಮನೆಯ ಮೇಲೆ ಬಾಂಬ್ ದಾಳಿ ನಡೆಸಿದೆ.
26 ಜನರನ್ನು ಬಲಿತೆಗೆದುಕೊಂಡ ಪಹಲ್ಗಾಮ್ ದಾಳಿಯ ಕೆಲವು ದಿನಗಳ ನಂತರ ಭಯೋತ್ಪಾದಕರ ದಮನ ಕಾರ್ಯಾಚರಣೆ ಮುಂದುವರೆದಿದೆ. ಕುಪ್ವಾರಾದ ಕಲಾರೂಸ್‌ನಲ್ಲಿರುವ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಫಾರೂಕ್ ಅಹ್ಮದ್ ತಡ್ವಾ ಅವರ ಮನೆಯ ಮೇಲೆ ಅಧಿಕಾರಿಗಳು ಬಾಂಬ್ ದಾಳಿ ನಡೆಸಿದ್ದಾರೆ.

ಕಳೆದ 48 ಗಂಟೆಗಳಲ್ಲಿ ಆರು ಭಯೋತ್ಪಾದಕರು ಅಥವಾ ಅವರ ಸಹಚರರ ಮನೆಗಳನ್ನು ನೆಲಸಮ ಮಾಡಲಾಗಿದೆ. ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಇತರರ ವಿರುದ್ಧವೂ ಇದೇ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.
ಭಯೋತ್ಪಾದಕರಿಗೆ ಸಿಗುತ್ತಿರುವ ಬೆಂಬಲವನ್ನು ಧ್ವಂಸ ಮಾಡಲು ಶನಿವಾರ ಶ್ರೀನಗರದಲ್ಲಿ 60 ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ವಕ್ತಾರರು ತಿಳಿಸಿದ್ದಾರೆ. ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವ ಯಾವುದೇ ರೀತಿಯ ಸಂಚು ಅಥವಾ ಭಯೋತ್ಪಾದಕ ಚಟುವಟಿಕೆಗಳನ್ನು ಪತ್ತೆಹಚ್ಚಲು ಮತ್ತು ಸಾಕ್ಷಿ ಸಂಗ್ರಹಣೆ ಮಾಡಲು ಶಸ್ತ್ರಾಸ್ತ್ರಗಳು, ದಾಖಲೆಗಳು, ಡಿಜಿಟಲ್ ಸಾಧನಗಳು ಇತ್ಯಾದಿಗಳನ್ನು ವಶಪಡಿಸಿಕೊಳ್ಳಲು ಈ ಕಾರ್ಯಾಚರಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸರ ಈ ಕ್ರಮವು ದೇಶ ವಿರೋಧಿ ಮತ್ತು ಅಪರಾಧ ಕೃತ್ಯಗಳಲ್ಲಿ ತೊಡಗಿರುವ ವ್ಯಕ್ತಿಗಳನ್ನು ಗುರುತಿಸಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಪರಿಸರ ವ್ಯವಸ್ಥೆಯನ್ನು ನಾಶ ಮಾಡುವ ಗುರಿಯನ್ನು ಹೊಂದಿದೆ ಎಂದು ಪೊಲೀಸ್ ವಕ್ತಾರರು ಹೇಳಿದ್ದಾರೆ.
ನಗರದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿಕೊಳ್ಳಲು ಪೊಲೀಸರು ಬದ್ಧರಾಗಿದ್ದಾರೆ. ಹಿಂಸೆ, ಅಡ್ಡಿ ಅಥವಾ ಕಾನೂನುಬಾಹಿರ ಚಟುವಟಿಕೆಗಳ ಕಾರ್ಯಸೂಚಿಯನ್ನು ಮುಂದುವರಿಸುವ ಯಾವುದೇ ವ್ಯಕ್ತಿ ಕಾನೂನಿನಡಿಯಲ್ಲಿ ಕಠಿಣ ಕಾನೂನು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಚ್ಚರಿಕೆ ನೀಡಲಾಗಿದೆ. ಪಹಲ್ಗಾಮ್ ತರಹದ ಯಾವುದೇ ದಾಲಿ ಮರುಕಳಿಸದಂತೆ ಮಾಡಲು ಕಾಶ್ಮೀರ ಕಣಿವೆಯ ಉದ್ದಕ್ಕೂ ಭಯೋತ್ಪಾದಕ ಸಹಚರರು ಮತ್ತು ಅವರ ಸಹಚರರನ್ನು ಭದ್ರತಾ ಪಡೆಗಳು ಬೇಟೆಯಾಡುತ್ತಿವೆ.
ಮಿನಿ ಸ್ವಿಟ್ಜರ್‌ಲ್ಯಾಂಡ್ ಎಂದೇ ಪ್ರಸಿದ್ಧಿ
ಅನಂತ್‌ನಾಗ್ ಜಿಲ್ಲೆಯ ಪಹಲ್ಗಾಮ್‌ನ ಮೇಲ್ಭಾಗದಲ್ಲಿರುವ 'ಮಿನಿ ಸ್ವಿಟ್ಜರ್‌ಲ್ಯಾಂಡ್' ಎಂದು ಕರೆಯಲ್ಪಡುವ ಮತ್ತು ಪ್ರವಾಸಿಗರಿಂದ ಹೆಚ್ಚು ಜನಪ್ರಿಯವಾಗಿರುವ ಬೈಸರನ್‌ನಲ್ಲಿ ಮಂಗಳವಾರ ಭಯೋತ್ಪಾದಕರು ಗುಂಡು ಹಾರಿಸಿ 26 ಜನರನ್ನು ಹತ್ಯೆ ಮಾಡಿದರು. ಈ ಘಟನೆಯು ಕಾಶ್ಮೀರದ ಪ್ರವಾಸೋದ್ಯಮದ ಮೇಲೆ ಭಾರಿ ಹೊಡೆತ ನೀಡುವ ಸಾಧ್ಯತೆ ಇದೆ.
ಭದ್ರತಾ ಪಡೆಗಳು ಗುರುವಾರ ರಾತ್ರಿ ಮನೆಗಳ ಮೇಲೆ ದಾಳಿ ಮಾಡಿದ ನಂತರ ಅಧಿಕಾರಿಗಳು ಅನಂತ್‌ನಾಗ್ ಜಿಲ್ಲೆಯ ಬಿಜ್‌ಬೆಹರಾ ಪ್ರದೇಶದ ಆದಿಲ್ ಥೋಕರ್ ಮತ್ತು ಪುಲ್ವಾಮಾ ಜಿಲ್ಲೆಯ ಟ್ರಾಲ್ ಪ್ರದೇಶದಲ್ಲಿ ಆಸಿಫ್ ಶೇಖ್ ಎಂಬ ಇಬ್ಬರು ಸಕ್ರಿಯ ಭಯೋತ್ಪಾದಕರ ಮನೆಗಳನ್ನು ಸ್ಫೋಟಿಸಿದ್ದಾರೆ.












Click it and Unblock the Notifications