ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತವನ್ನು 'ಚುಚ್ಚು'ತ್ತಿರುವ ಕೊರೊನಾವೈರಸ್ 'ಮದ್ದಿ'ನ ಸುತ್ತಲು ಒಂದು ವರದಿ!

|
Google Oneindia Kannada News

ನವದೆಹಲಿ, ಮೇ 03: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಗೆ ಇಡೀ ದೇಶವೇ ತತ್ತರಿಸಿ ಹೋಗಿದೆ. ಕೊವಿಡ್-19 ನಿಯಂತ್ರಣಕ್ಕೆ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿರುವುದು ಅಂಕಿ-ಸಂಖ್ಯೆಗಳ ಸಹಿತಿ ಸಾಬೀತಾಗುತ್ತಿದೆ.

ಭಾರತದಲ್ಲಿ ಪ್ರತಿನಿತ್ಯ ದಾಖಲೆ ಮಟ್ಟದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗುತ್ತಿದ್ದು, ಈ ಮಧ್ಯೆ ಲಸಿಕೆ ವಿತರಣೆಗೆ ಆದ್ಯತೆ ನೀಡಲಾಗುತ್ತಿದೆ. ದೇಶದಲ್ಲಿ ಲಸಿಕೆ ಕೊರತೆ ಎದುರಾಗಿದ್ದು, ಕೆಲವೇ ಕೆಲವು ರಾಜ್ಯಗಳಲ್ಲಿ ಮಾತ್ರ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲಾಗುತ್ತಿದೆ.

 ಕೇಂದ್ರ ಸರಕಾರದ ವಿರುದ್ದ ಕೊರೊನಾ ತಜ್ಞರ ಸಮಿತಿಯ ಗಂಭೀರ ಆರೋಪ ಕೇಂದ್ರ ಸರಕಾರದ ವಿರುದ್ದ ಕೊರೊನಾ ತಜ್ಞರ ಸಮಿತಿಯ ಗಂಭೀರ ಆರೋಪ

ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 106 ದಿನಗಳೇ ಕಳೆದು ಹೋಗಿವೆ. ಈ ಅವಧಿಯಲ್ಲಿ ದೇಶದ 15,71,98,207 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ಮೇ 1ರಂದು 18,26,219 ಮಂದಿಗೆ ಲಸಿಕೆ ನೀಡಲಾಗಿದೆ. 11,14,214 ಜನರಿಗೆ ಮೊದಲ ಡೋಸ್ ಹಾಗೂ 7,12,005 ಎರಡನೇ ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಈ ರಾಜ್ಯಗಳಲ್ಲಿ ಮಾತ್ರ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ

ಈ ರಾಜ್ಯಗಳಲ್ಲಿ ಮಾತ್ರ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ

ಭಾರತದ 11 ರಾಜ್ಯಗಳಲ್ಲಿ ಮಾತ್ರ 18 ವರ್ಷ ಮೇಲ್ಪಟ್ಟ 44 ವರ್ಷದೊಳಗಿನ ಜನರಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗುತ್ತಿದೆ. ಈವರೆಗೂ 86,023 ಜನರಿಗೆ ಲಸಿಕೆ ನೀಡಲಾಗಿದ್ದು, ಈ ಪೈಕಿ ಛತ್ತೀಸ್ ಗಢ 987, ನವದೆಹಲಿ 1,472, ಗುಜರಾತ್ 51,622, ಜಮ್ಮು ಮತ್ತು ಕಾಶ್ಮೀರ 201, ಕರ್ನಾಟಕ 649, ಮಹಾರಾಷ್ಟ್ರ 12,525, ಒಡಿಶಾ 97, ಪಂಜಾಬ್ 298, ರಾಜಸ್ಥಾನ 1853, ತಮಿಳುನಾಡು 527, ಹಾಗೂ ಉತ್ತರ ಪ್ರದೇಶದಲ್ಲಿ 15,792 ಮಂದಿಗೆ ಲಸಿಕೆ ನೀಡಲಾಗಿದೆ.

ಕಾರ್ಮಿಕರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ

ಕಾರ್ಮಿಕರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ

ಭಾರತದಲ್ಲಿ ಈವರೆಗೂ 94,28,490 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 62,65,397 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,27,57,529 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 69,22,093 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 5,32,80,976 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 40,08,078 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 5,26,18,135 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 1,14,49,310 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಮೂರು ಮಾದರಿ ಲಸಿಕೆ ವಿತರಣೆಗೆ ಅವಕಾಶ ನೀಡಿದ ಸರ್ಕಾರ

ಮೂರು ಮಾದರಿ ಲಸಿಕೆ ವಿತರಣೆಗೆ ಅವಕಾಶ ನೀಡಿದ ಸರ್ಕಾರ

ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಇದರ ಮಧ್ಯೆ ಮಾಸ್ಕೋ, ರಷ್ಯಾದಲ್ಲಿ ಗಮಲೇಯ ನ್ಯಾಷನಲ್ ರಿಸರ್ಚ್ ಇನ್ಸ್ ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಅಭಿವೃದ್ಧಿಪಡಿಸಿದ ಸ್ಪುಟ್ನಿಕ್-ವಿ ಲಸಿಕೆ ವಿತರಿಸುವುದಕ್ಕೂ ಅನುಮೋದನೆ ನೀಡಲಾಗಿದೆ.

ದೇಶದಲ್ಲಿ ಕೊರನಾವೈರಸ್ ಅಂಕಿ-ಸಂಖ್ಯೆಗಳು

ದೇಶದಲ್ಲಿ ಕೊರನಾವೈರಸ್ ಅಂಕಿ-ಸಂಖ್ಯೆಗಳು

ಕೊರೊನಾವೈರಸ್ ಸಾಂಕ್ರಾಮಿಕ ಅಲೆಯು ಭಾರತೀಯರನ್ನು ಬೆಚ್ಚಿ ಬೀಳುವಂತೆ ಮಾಡಿದೆ. ಕಳೆದ 24 ಗಂಟೆಗಳಲ್ಲಿ 3,68,147 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿದ್ದು, ಒಂದೇ ದಿನ 3417 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದೇ ಅವಧಿಯಲ್ಲಿ 3,00,732 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 1,99,25,604 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 16,29,3003 ಸೋಂಕಿತರು ಈವರೆಗೂ ಗುಣಮುಖರಾಗಿದ್ದು,2,18,959 ಸೋಂಕಿತರು ಪ್ರಾಣ ಬಿಟ್ಟಿದ್ದಾರೆ. ಉಳಿದಂತೆ 34,13,642 ಕೊವಿಡ್-19 ಸಕ್ರಿಯ ಪ್ರಕರಣಗಳು ವರದಿಯಾಗಿವೆ.

English summary
How Many Beneficiaries Taken Coronavirus Vaccine Till May 3rd Across India: Here Read Details With Numbers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X