Ahmedabad Plane Crash: ಪತನಗೊಂಡ ಏರ್ ಇಂಡಿಯಾ ವಿಮಾನದಲ್ಲಿ ಯಾವ್ಯಾವ ದೇಶದವರು ಎಷ್ಟು ಪ್ರಯಾಣಿಕರಿದ್ರು?
Ahmedabad Plane Crash: ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಗುರುವಾರ (ಜೂನ್ 12) ಏರ್ ಇಂಡಿಯಾ ವಿಮಾನ ಪತನವಾಗಿದೆ. ಹಾಗಾದ್ರೆ ಈ ವಿಮಾನದಲ್ಲಿ ಯಾವ್ಯಾವ ದೇಶದವರು ಎಷ್ಟು ಮಂದಿ ಪ್ರಯಾಣ ಮಾಡುತ್ತಿದ್ದರು ಎನ್ನುವ ಸಂಪೂರ್ಣ ಮಾಹಿತಿಯನ್ನು ಅಂಕಿಅಂಶಗಳ ಸಹಿತ ಇಲ್ಲಿ ನೀಡಲಾಗಿದೆ ಗಮನಿಸಿ.
ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನದಲ್ಲಿ 242ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣ ಮಾಡುತ್ತುದ್ದರು ಎನ್ನುವ ಮಾಹಿತಿ ಲಭ್ಯವಾಗಿತ್ತು. ಇದರ ಬೆನ್ನಲ್ಲೇ ಇದೀಗ ಯಾವ್ಯಾವ ದೇಶದವರು ಎಷ್ಟು ಮಂದಿ ಪ್ರಯಾಣ ಮಾಡುತ್ತಿದ್ದರು ಎನ್ನುವ ಮಹತ್ವದ ಮಾಹಿತಿ ಸಿಕ್ಕಿದೆ.

ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ AI-171 ಏರ್ ಇಂಡಿಯಾ ವಿಮಾನ ಗುಜರಾತ್‌ನ ಅಹಮದಾಬಾದ್‌ನಲ್ಲಿ ಪತನಗೊಂಡಿದ್ದು, ವಿಮಾನದಲ್ಲಿದ್ದ ಎಲ್ಲರೂ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಲಂಡನ್‌ಗೆ ಹೊರಟಿದ್ದ ಈ ವಿಮಾನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಗಿದ್ದು, ಸುಮಾರು ಮಧ್ಯಾಹ್ನ 1:50ಕ್ಕೆ ಈ ಘಟನೆ ನಡೆದಿದೆ ಎಂದು ಎನ್ನಲಾಗಿದೆ.
ಯಾವ್ಯಾವ ದೇಶದವರು ಎಷ್ಟು ಪ್ರಯಾಣಿಕರಿದ್ರು?
* ಭಾರತೀಯರು - 169 ಜನ
* ಬ್ರಿಟನ್ - 53
* ಕೆನಡಿಯನ್ನರು - 1
* ಪೋರ್ಚುಗೀಸರ - 7
ಯವ್ಯಾವ ವಯಸ್ಸಿನವರು ಎಷ್ಟು ಜನ ಇದ್ರು?
* ವಯಸ್ಕರು - 217 ಮಂದಿ
* ಮಕ್ಕಳು - 11
* ಶಿಶುಗಳು - 2
ಗುಜರಾತ್ ಸಿಎಂ ಹೇಳಿದ್ದೇನು?: ಏರ್ ಇಂಡಿಯಾ ಪ್ರಯಾಣಿಕ ವಿಮಾನ ಅಪಘಾತದ ಘಟನೆಯಿಂದ ನನಗೆ ತೀವ್ರ ದುಃಖ ಆಗಿದೆ. ತಕ್ಷಣದ ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಮತ್ತು ಗಾಯಗೊಂಡ ಪ್ರಯಾಣಿಕರಿಗೆ ಯುದ್ಧೋಪಾದಿಯಲ್ಲಿ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದುಸಿಎಂ ಭೂಪೇಂದ್ರ ಪಟೇಲ್ ಹೇಳಿದರು.
ಗಾಯಗೊಂಡ ಪ್ರಯಾಣಿಕರನ್ನು ಚಿಕಿತ್ಸೆಗೆ ಕರೆದೊಯ್ಯಲು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಎಲ್ಲಾ ವ್ಯವಸ್ಥೆಗಳನ್ನು ಆದ್ಯತೆಯ ಆಧಾರದ ಮೇಲೆ ಖಚಿತಪಡಿಸಿಕೊಳ್ಳಲು ಹಸಿರು ಕಾರಿಡಾರ್ ವ್ಯವಸ್ಥೆ ಮಾಡಲು ಸೂಚಿಸಿದ್ದೇನೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಹ ಈ ಬಗ್ಗೆ ನನ್ನೊಂದಿಗೆ ಮಾತನಾಡಿದ್ದಾರೆ. ಅಲ್ಲದೆ, ಸಂಪೂರ್ಣ ಸಹಕಾರದ ಭರವಸೆ ನೀಡಿದ್ದಾರೆ ಎಂದು ತಮ್ಮ ಟ್ವೀಟರ್‌ನಲ್ಲಿ ಸಿಎಂ ಭೂಪೇಂದ್ರ ಪಟೇಲ್ ಬರೆದುಕೊಂಡಿದ್ದಾರೆ.
ಇನ್ನು ಏರ್ ಇಂಡಿಯಾ ವಿಮಾನ ಅಪಘಾತ ಸ್ಥಳದಲ್ಲಿ ಅವಶೇಷಗಳು ಬಿದ್ದಿವೆ. ಸ್ಥಳಕ್ಕೆ ಆಗಮಿಸಿರುವ ಅಗ್ನಿಶಾಮಕ ಸಿಬ್ಬಂದಿ ಮತ್ತು ಇತರ ಸಂಸ್ಥೆಗಳು ಭರದಿಂದ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿವೆ ಎಂದು ತಿಳಿದುಬಂದಿದೆ. ಮತ್ತೊಂದೆಡೆ ಅಹ್ಮದಾಬಾದ್‌ನಲ್ಲಿ ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನ AI 171ನಲ್ಲಿ ಪ್ರಯಾಣ ಮಾಡುತ್ತಿದ್ದ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ನಿಧನರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ವಿಜಯ್ ರುಪಾನಿ ಅವರು ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನ AI 171ನಲ್ಲಿ 12ನೇ ಪ್ರಯಾಣಿಕರಾಗಿ ಟಿಕೆಟ್ ಕಾಯ್ದಿರಿಸಿದ್ದರು ಎಂದು ತಿಳಿದುಬಂದಿದೆ.












Click it and Unblock the Notifications