ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲಸಿಕೆ ಪಡೆದುಕೊಂಡ ನಂತರವೂ ಕೊರೊನಾ ಸೋಂಕಿತರಾದವರು ಎಷ್ಟು ಮಂದಿ?

|
Google Oneindia Kannada News

ನವದೆಹಲಿ, ಏಪ್ರಿಲ್ 21: ಕೊರೊನಾ ಸೋಂಕಿನ ವಿರುದ್ಧ ಹೋರಾಡಲು ಜನರು ಕೊರೊನಾ ಲಸಿಕೆಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಆದರೆ ಲಸಿಕೆ ಪಡೆದುಕೊಂಡ ನಂತರವೂ ಸೋಂಕಿಗೆ ತುತ್ತಾಗುತ್ತಿರುವುದು ಜನರ ಭೀತಿಯನ್ನು ಹೆಚ್ಚಿಸಿದೆ.

ಎರಡು ಡೋಸ್‌ಗಳ ಲಸಿಕೆ ಪಡೆದುಕೊಂಡ ನಂತರವೂ ಕೊರೊನಾ ಪಾಸಿಟಿವ್ ಬರುತ್ತಿರುವುದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಈ ಸಂಗತಿಗಳಿಂದ ಲಸಿಕೆ ತೆಗೆದುಕೊಳ್ಳಲು ಜನರು ಹಿಂದೇಟು ಹಾಕುತ್ತಿದ್ದಾರೆ.

ಎರಡನೇ ಅಲೆಯಲ್ಲಿ ದುಪ್ಪಟ್ಟಾಗಲಿದೆ ದೇಶದ ಸಕ್ರಿಯ ಪ್ರಕರಣಗಳ ಸಂಖ್ಯೆಎರಡನೇ ಅಲೆಯಲ್ಲಿ ದುಪ್ಪಟ್ಟಾಗಲಿದೆ ದೇಶದ ಸಕ್ರಿಯ ಪ್ರಕರಣಗಳ ಸಂಖ್ಯೆ

ಈ ಕುರಿತು ಮಾತನಾಡಿರುವ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಮಹಾನಿರ್ದೇಶಕ ಬಲರಾಮ್ ಭಾರ್ಗವ, "ಇದುವರೆಗೂ ಲಸಿಕೆ ಪಡೆದುಕೊಂಡು ನಂತರ ಸೋಂಕಿಗೆ ತುತ್ತಾದವರ ಸಂಖ್ಯೆ ಅತಿ ಕಡಿಮೆಯಿದೆ" ಎಂದಿದ್ದಾರೆ.

How Many People Infected Corona Positive After Vaccinaion

ಸರ್ಕಾರದ ಮಾಹಿತಿ ಪ್ರಕಾರ, ದೇಶದಲ್ಲಿ ಸುಮಾರು 0.04% ಜನರು ಕೊವ್ಯಾಕ್ಸಿನ್ ಲಸಿಕೆಯ ಎರಡನೇ ಡೋಸ್ ಪಡೆದ ನಂತರ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. 0.03% ಮಂದಿ ಕೋವಿಶೀಲ್ಡ್‌ ಲಸಿಕೆಯ ಎರಡನೇ ಡೋಸ್ ಪಡೆದ ನಂತರ ಸೋಂಕಿಗೆ ತುತ್ತಾಗಿದ್ದಾರೆ. ಕೋವಿಶೀಲ್ಡ್‌ ಲಸಿಕೆ ಪಡೆದ 10,03,02,745 ಮಂದಿಯಲ್ಲಿ 17,145 ಮಂದಿ ಸೋಂಕಿಗೆ ತುತ್ತಾಗಿದ್ದಾರೆ.

ಕೋವ್ಯಾಕ್ಸಿನ್ ಲಸಿಕೆ ಪಡೆದ 93,56,436 ಮಂದಿಯಲ್ಲಿ 4,208 ಮಂದಿ ಸೋಂಕಿತರಾಗಿದ್ದಾರೆ.

ಕೊರೊನಾ ಲಸಿಕೆ ಪಡೆದ ನಂತರ ತಕ್ಷಣವೇ ಸೋಂಕಿನಿಂದ ರಕ್ಷಿಸಿಕೊಳ್ಳಲು ಸಾಧ್ಯವಿಲ್ಲ. ನಿಮ್ಮ ದೇಹವು ಸೋಂಕಿನ ವಿರುದ್ಧ ಹೋರಾಡಲು ಅವಶ್ಯಕ ಪ್ರತಿರೋಧಕ ಅಂಶಗಳನ್ನು ಸೃಷ್ಟಿಸಲು ಸಮಯ ತೆಗೆದುಕೊಳ್ಳುತ್ತದೆ. ಇದು ಕೆಲವು ದಿನಗಳಿಂದ ಹಿಡಿದು ಕೆಲವು ವಾರಗಳವರೆಗೂ ಆಗಬಹುದು. ಈ ಅವಧಿಯಲ್ಲಿ ಸೋಂಕಿಗೆ ತುತ್ತಾಗುವ ಸಾಧ್ಯತೆ ಇದೆ ಎಂದು ತಜ್ಞರು ತಿಳಿಸಿದ್ದಾರೆ.

ಹೀಗಾಗಿ ಲಸಿಕೆ ಪಡೆದುಕೊಂಡಿದ್ದೇವೆ ಎಂದು ನಿರ್ಲಕ್ಷ್ಯ ತೋರುವುದರ ಬದಲು ಅವಶ್ಯಕ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು. ದೇಹದಲ್ಲಿ ಪ್ರತಿರೋಧಕ ಅಂಶಗಳು ಉತ್ಪತ್ತಿಯಾಗುವ ಮುನ್ನವೇ ಸೋಂಕಿಗೆ ತೆರೆದುಕೊಳ್ಳುವ ಸಾಧ್ಯತೆಯಿದೆ ಎಂದಿದ್ದಾರೆ.

ಭಾರತದಲ್ಲಿ ಸದ್ಯಕ್ಕೆ ಮೂರು ಲಸಿಕೆಗಳ ತುರ್ತು ಬಳಕೆಗೆ ಅನುಮೋದನೆ ನೀಡಲಾಗಿದೆ. ಮೊದಲು ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಲಸಿಕೆಗಳಿಗೆ ಅನುಮತಿ ನೀಡಲಾಗಿದೆ. ಈಚೆಗೆ ರಷ್ಯಾದ ಸ್ಫುಟ್ನಿಕ್ ವಿ ಲಸಿಕೆಗೆ ಅನುಮೋದನೆ ದೊರೆತಿದೆ.

English summary
How many people in india infected corona positive after vaccinaion; here is detail,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X