ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದ ಎಷ್ಟು ರಾಜ್ಯಗಳಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ?

|
Google Oneindia Kannada News

ನವದೆಹಲಿ, ಮೇ 1: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವ ಉದ್ದೇಶದಿಂದ ಮೇ 1ರಿಂದಲೇ ದೇಶಾದ್ಯಂತ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವುದಕ್ಕೆ ಕೇಂದ್ರ ಸರ್ಕಾರದ ಆದೇಶ ಹೊರಡಿಸಿದೆ.

ಕೇಂದ್ರ ಸರ್ಕಾರದ ಆದೇಶದ ಹೊರತಾಗಿ ಲಸಿಕೆ ಅಭಾವದಿಂದಾಗಿ ಕೆಲವೇ ಕೆಲವು ರಾಜ್ಯಗಳ ಕೆಲವೇ ಕೆಲವು ಜಿಲ್ಲೆಗಳಲ್ಲಿ ಮಾತ್ರ ಕೊವಿಡ್-19 ಲಸಿಕೆ ವಿತರಣೆ ಕಾರ್ಯಾರಂಭ ಮಾಡಲಾಗಿದೆ. ಆದರೆ ಮಹಾರಾಷ್ಟ್ರ, ಕೇರಳ, ಪಂಜಾಬ್, ಉತ್ತರಾಖಂಡ್, ಆಂಧ್ರ ಪ್ರದೇಶ, ದೆಹಲಿ ರಾಜ್ಯಗಳಲ್ಲಿ ಕೊರೊನಾವೈರಸ್ ಲಸಿಕೆಯ ಕೊರತೆಯಿಂದಾಗಿ 18 ವರ್ಷ ಮೇಲ್ಪಟ್ಟ ವಯಸ್ಕರಿಗೆ ಮೇ 1ರಿಂದ ಲಸಿಕೆ ನೀಡಲು ಸಾಧ್ಯವಿಲ್ಲ ಎಂದು ಈಗಾಗಲೇ ರಾಜ್ಯ ಸರ್ಕಾರಗಳು ಸ್ಪಷ್ಟಪಡಿಸಿವೆ.

ಭಾರತದಲ್ಲಿ ಪೂರ್ಣ ಲಸಿಕೆ ಪಡೆದವರ ಪ್ರಮಾಣ ಶೇ 1.97 ಭಾರತದಲ್ಲಿ ಪೂರ್ಣ ಲಸಿಕೆ ಪಡೆದವರ ಪ್ರಮಾಣ ಶೇ 1.97

ಕೊರೊನಾವೈರಸ್ ಮಹಾಮಾರಿ ಹೊಡೆತಕ್ಕೆ ತತ್ತರಿಸಿರುವ ವಾಣಿಜ್ಯನಗರಿ ಮುಂಬೈನಲ್ಲಿ ವಾರಾಂತ್ಯದ ನಿಷೇಧಾಜ್ಞೆನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ಇದರ ಜೊತೆ ಲಸಿಕೆ ಕೊರತೆಯಿಂದಾಗಿ ಏಪ್ರಿಲ್ 30ರ ಶುಕ್ರವಾರದಿಂದ ಮೂರು ದಿನಗಳವರೆಗೆ ಲಸಿಕೆ ವಿತರಣೆಯನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ.

ನವದೆಹಲಿಯಲ್ಲಿ ಕೊವಿಡ್-19 ಲಸಿಕೆ ವಿತರಣೆ ವಿಳಂಬ

ನವದೆಹಲಿಯಲ್ಲಿ ಕೊವಿಡ್-19 ಲಸಿಕೆ ವಿತರಣೆ ವಿಳಂಬ

ನವದೆಹಲಿಯಲ್ಲಿ ಅಗತ್ಯವಿರುವಷ್ಟು ಕೊರೊನಾವೈರಸ್ ಲಸಿಕೆ ಪ್ರಮಾಣವಿಲ್ಲದ ಹಿನ್ನೆಲೆ ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವುದಕ್ಕೆ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ. ಕೊವಿಡ್-19 ಲಸಿಕೆಯ ಕೊರತೆ ನೀಗಿಸುವುದಕ್ಕಾಗಿ ಮುಂದಿನ ಎರಡು-ಮೂರು ದಿನಗಳಲ್ಲಿ 3 ಲಕ್ಷ ಡೋಸ್ ಕೊವಿಶೀಲ್ಡ್ ಲಸಿಕೆಯನ್ನು ತರಿಸಿಕೊಳ್ಳಲಾಗುತ್ತದೆ.

ಉತ್ತರ ಪ್ರದೇಶದಲ್ಲಿ 75 ಜಿಲ್ಲೆಗಳ ಪೈಕಿ 7 ಜಿಲ್ಲೆಗಳಲ್ಲಿ ಲಸಿಕೆ

ಉತ್ತರ ಪ್ರದೇಶದಲ್ಲಿ 75 ಜಿಲ್ಲೆಗಳ ಪೈಕಿ 7 ಜಿಲ್ಲೆಗಳಲ್ಲಿ ಲಸಿಕೆ

ಉತ್ತರ ಪ್ರದೇಶದ 75 ಜಿಲ್ಲೆಗಳ ಪೈಕಿ ಕೇವಲ ಏಳು ಜಿಲ್ಲೆಗಳಲ್ಲಿ ಮಾತ್ರ ವಯಸ್ಕರಿಗೆ ಕೊವಿಡ್-19 ಲಸಿಕೆ ವಿತರಣೆಯನ್ನು ಶನಿವಾರದಿಂದ ಆರಂಭಿಸಲಾಗಿದೆ. ಲಕ್ನೋ, ಕಾನ್ಪುರ್, ಪ್ರಯಾಗ್ ರಾಜ್, ವಾರಣಾಸಿ, ಗೋರಖ್ ಪುರ್, ಮೀರತ್ ಮತ್ತು ರಾಯ್ ಬರೇಲಿ ಜಿಲ್ಲೆಗಳಲ್ಲಿ ಲಸಿಕೆ ವಿತರಿಸಲಾಗುತ್ತಿದೆ.

ರಾಜಸ್ಥಾನದ ಎಷ್ಟು ಜಿಲ್ಲೆಗಳಲ್ಲಿ ಲಸಿಕೆ ವಿತರಣೆ?

ರಾಜಸ್ಥಾನದ ಎಷ್ಟು ಜಿಲ್ಲೆಗಳಲ್ಲಿ ಲಸಿಕೆ ವಿತರಣೆ?

ರಾಜಸ್ಥಾನದ ಮೂರು ಜಿಲ್ಲೆಗಳಲ್ಲಿ ಮಾತ್ರ ವಯಸ್ಕರಿಗೆ ಲಸಿಕೆ ವಿತರಣೆ ಆರಂಭಿಸಲಾಗಿದೆ. ಜೈಪುರ್, ಜೋಧಪುರ್, ಅಜ್ಮೀರ್ ಜಿಲ್ಲೆಗಳಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಚವರಿಗೆ ಲಸಿಕೆ ನೀಡಲಾಗುತ್ತಿದೆ. ಇನ್ನು, ಗುಜರಾತಿನ 33 ಜಿಲ್ಲೆಗಳ ಪೈಕಿ ಕೇವಲ 10 ಜಿಲ್ಲೆಗಳಲ್ಲಿ ಮಾತ್ರ ಲಸಿಕೆ ನೀಡಲಾಗುತ್ತಿದೆ. ಕಳೆದ ಶುಕ್ರವಾರ ಸಂಜೆ 1.5 ಲಕ್ಷ ಕೊವ್ಯಾಕ್ಸಿನ್ ಲಸಿಕೆಯು ಒಡಿಶಾಗೆ ತಲುಪಿದ್ದು, ಶನಿವಾರದಿಂದಲೇ ಲಸಿಕೆ ವಿತರಣೆ ಆರಂಭಿಸಲಾಗುವುದು ಎಂದು ಸರ್ಕಾರ ಸ್ಪಷ್ಟನೆ ನೀಡಿದೆ.

ದೇಶದಲ್ಲಿ ಈವರೆಗೂ ಎಷ್ಟು ಜನರಿಗೆ ಲಸಿಕೆ?

ದೇಶದಲ್ಲಿ ಈವರೆಗೂ ಎಷ್ಟು ಜನರಿಗೆ ಲಸಿಕೆ?

ಭಾರತದಲ್ಲಿ ಕೊರೊನಾವೈರಸ್ ಎರಡನೇ ಅಲೆ ವೇಗ ಹೆಚ್ಚುತ್ತಿರುವುದರ ನಡುವೆ ಲಸಿಕೆ ವಿತರಣೆಗೆ ವೇಗ ನೀಡಲಾಗಿದೆ. 105 ದಿನಗಳಲ್ಲಿ 15,49,89,635 ಜನರಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಕೊವಿಡ್-19 ಲಸಿಕೆ ಅಭಿಯಾನ ಆರಂಭವಾಗಿ 105 ದಿನಗಳು ಪೂರ್ಣವಾಗಿದೆ. ಗುರುವಾರ ರಾತ್ರಿ 8 ಗಂಟೆ ವೇಳೆಗೆ 27 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ.

ಕಳೆದ 24 ಗಂಟೆಗಳಲ್ಲಿ 27,44,485 ಜನರಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಈ ಪೈಕಿ 15,69,846 ಮಂದಿಗೆ ಮೊದಲ ಡೋಸ್ ಹಾಗೂ 11,74,639 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ.

English summary
How Many States Begins Coronavirus Vaccination From May 1st In India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X