CBSE Result: 10 ಮತ್ತು 12ನೇ ತರಗತಿ ಫಲಿತಾಂಶ ಪರಿಶೀಲಿಸುವುದು ಹೇಗೆ?
ನವದೆಹಲಿ, ಜೂನ್ 29: ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ಇ) 10ನೇ ಮತ್ತು 12ನೇ ತರಗತಿ ಪರೀಕ್ಷಾ ಫಲಿತಾಂಶ ಬಿಡುಗಡೆ ಯಾವಾಗ ಎನ್ನುವುದಕ್ಕೆ ಉತ್ತರ ಸಿಕ್ಕಿದೆ. ಜುಲೈ 4ರಂದು 10ನೇ ತರಗತಿ ಮತ್ತು ಜುಲೈ 10ರಂದು 12ನೇ ತರಗತಿಯ ಫಲಿತಾಂಶವನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ. ಸಿಬಿಎಸ್ಇ ಅಧಿಕೃತ ವೆಬ್‌ಸೈಟ್ cbseresults.nic.inನಲ್ಲಿ 10ನೇ ತರಗತಿ ಮತ್ತು 12ನೇ ತರಗತಿಯ ಫಲಿತಾಂಶ ಬಿಡುಗಡೆ ಆಗಲಿದೆ.
ಸಿಬಿಎಸ್ಇಯ 10ನೇ ತರಗತಿ ಮತ್ತು 12ನೇ ತರಗತಿ ಪರೀಕ್ಷೆಗಳು 2022ರ ಏಪ್ರಿಲ್ 26ರಂದು ಪ್ರಾರಂಭವಾಯಿತು. ಸಿಬಿಎಸ್ಇ 10 ನೇ ತರಗತಿಯ ಎರಡನೇ ಅವಧಿ ಪರೀಕ್ಷೆ 2022 ಮೇ 24ರಂದು ಮುಕ್ತಾಯವಾಗಿತ್ತು. ಅದೇ ರೀತಿ ಸಿಬಿಎಸ್ಇ 12ನೇ ತರಗತಿಯ 2ನೇ ಅವಧಿ ಪರೀಕ್ಷೆಯು 2022 ಜೂನ್ 15ರಂದು ಮುಕ್ತಾಯಗೊಂಡಿತ್ತು.
ಕಳೆದ ಏಪ್ರಿಲ್ 26 ರಿಂದ ಜೂನ್ 15ರ ನಡುವೆ ಸಿಬಿಎಸ್ಇ ಪರೀಕ್ಷೆಗಳನ್ನು ನಡೆಸಲಾಗಿತ್ತು. 2021-2022ನೇ ಸಾಲಿನಲ್ಲಿ 10ನೇ ತರಗತಿಯ ಪರೀಕ್ಷೆಗಾಗಿ 35 ಲಕ್ಷ ವಿದ್ಯಾರ್ಥಿಗಳು ಹೆಸರು ನೋಂದಣಿ ಮಾಡಿಕೊಂಡಿದ್ದರು. ಆದರೆ ಒಟ್ಟು 21 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಸಿಬಿಎಸ್ಇ ಫಲಿತಾಂಶ ಪರಿಶೀಲಿಸುವ ವಿಧಾನ
* ಅಧಿಕೃತ ವೆಬ್‌ಸೈಟ್‌ಗಳಿಗೆ ಭೇಟಿ ನೀಡಿ- cbse.gov.in, cbseresults.nic.in
* ಸಿಬಿಎಸ್ಇ ಫಲಿತಾಂಶ 2022 ಮೇಲೆ ಕ್ಲಿಕ್ ಮಾಡಿ
* ರೋಲ್ ಸಂಖ್ಯೆಯಂತಹ ಅಗತ್ಯವಿರುವ ರುಜುವಾತುಗಳನ್ನು ನಮೂದಿಸಿ
* ಸಿಬಿಎಸ್ಇ 2022 ಫಲಿತಾಂಶವನ್ನು ಸಲ್ಲಿಸಿ ಮತ್ತು ಡೌನ್‌ಲೋಡ್ ಮಾಡಿಕೊಳ್ಳಬಹುದು
ಎರಡು ವರ್ಷಗಳ ನಂತರ ಆಫ್‌ಲೈನ್‌ನಲ್ಲಿ ಪರೀಕ್ಷೆ; ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಸಂದರ್ಭದಲ್ಲಿ 2020 ರಿಂದ ಎರಡು ವರ್ಷಗಳವರೆಗೂ ಆನ್ ಲೈನ್ ಮೂಲಕ ಪರೀಕ್ಷೆಗಳನ್ನು ನಡೆಸಲಾಗಿತ್ತು. ಎರಡು ವರ್ಷಗಳ ನಂತರದಲ್ಲಿ ಮೊದಲ ಬಾರಿಗೆ 2022ನೇ ಸಾಲಿನಲ್ಲಿ ಆಫ್‌ಲೈನ್ ಪರೀಕ್ಷೆ ನಡೆಸಲಾಗುವುದು ಎಂದು ಘೋಷಿಸಲಾಗಿತ್ತು. ಈ ಬಾರಿ ನಡೆಸಿದ ಆಫ್‌ಲೈನ್ ಪರೀಕ್ಷೆ ಫಲಿತಾಂಶಗಳು ತೀವ್ರ ಕುತೂಹಲ ಕೆರಳಿಸಿದೆ.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ












Click it and Unblock the Notifications