ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

CBSE Result: 10 ಮತ್ತು 12ನೇ ತರಗತಿ ಫಲಿತಾಂಶ ಪರಿಶೀಲಿಸುವುದು ಹೇಗೆ?

|
Google Oneindia Kannada News

ನವದೆಹಲಿ, ಜೂನ್ 29: ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ಇ) 10ನೇ ಮತ್ತು 12ನೇ ತರಗತಿ ಪರೀಕ್ಷಾ ಫಲಿತಾಂಶ ಬಿಡುಗಡೆ ಯಾವಾಗ ಎನ್ನುವುದಕ್ಕೆ ಉತ್ತರ ಸಿಕ್ಕಿದೆ. ಜುಲೈ 4ರಂದು 10ನೇ ತರಗತಿ ಮತ್ತು ಜುಲೈ 10ರಂದು 12ನೇ ತರಗತಿಯ ಫಲಿತಾಂಶವನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ. ಸಿಬಿಎಸ್ಇ ಅಧಿಕೃತ ವೆಬ್‌ಸೈಟ್ cbseresults.nic.inನಲ್ಲಿ 10ನೇ ತರಗತಿ ಮತ್ತು 12ನೇ ತರಗತಿಯ ಫಲಿತಾಂಶ ಬಿಡುಗಡೆ ಆಗಲಿದೆ.

ಸಿಬಿಎಸ್ಇಯ 10ನೇ ತರಗತಿ ಮತ್ತು 12ನೇ ತರಗತಿ ಪರೀಕ್ಷೆಗಳು 2022ರ ಏಪ್ರಿಲ್ 26ರಂದು ಪ್ರಾರಂಭವಾಯಿತು. ಸಿಬಿಎಸ್ಇ 10 ನೇ ತರಗತಿಯ ಎರಡನೇ ಅವಧಿ ಪರೀಕ್ಷೆ 2022 ಮೇ 24ರಂದು ಮುಕ್ತಾಯವಾಗಿತ್ತು. ಅದೇ ರೀತಿ ಸಿಬಿಎಸ್ಇ 12ನೇ ತರಗತಿಯ 2ನೇ ಅವಧಿ ಪರೀಕ್ಷೆಯು 2022 ಜೂನ್ 15ರಂದು ಮುಕ್ತಾಯಗೊಂಡಿತ್ತು.

ಸಿಬಿಎಸ್ಇ 10ನೇ ತರಗತಿ ಫಲಿತಾಂಶ ಯಾವಾಗ ಪ್ರಕಟವಾಗುತ್ತೆ? ಸಿಬಿಎಸ್ಇ 10ನೇ ತರಗತಿ ಫಲಿತಾಂಶ ಯಾವಾಗ ಪ್ರಕಟವಾಗುತ್ತೆ?

ಕಳೆದ ಏಪ್ರಿಲ್ 26 ರಿಂದ ಜೂನ್ 15ರ ನಡುವೆ ಸಿಬಿಎಸ್ಇ ಪರೀಕ್ಷೆಗಳನ್ನು ನಡೆಸಲಾಗಿತ್ತು. 2021-2022ನೇ ಸಾಲಿನಲ್ಲಿ 10ನೇ ತರಗತಿಯ ಪರೀಕ್ಷೆಗಾಗಿ 35 ಲಕ್ಷ ವಿದ್ಯಾರ್ಥಿಗಳು ಹೆಸರು ನೋಂದಣಿ ಮಾಡಿಕೊಂಡಿದ್ದರು. ಆದರೆ ಒಟ್ಟು 21 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

How to Check Cbse Class 10, 12 Result 2022: Read Here to Know More

ಸಿಬಿಎಸ್ಇ ಫಲಿತಾಂಶ ಪರಿಶೀಲಿಸುವ ವಿಧಾನ

* ಅಧಿಕೃತ ವೆಬ್‌ಸೈಟ್‌ಗಳಿಗೆ ಭೇಟಿ ನೀಡಿ- cbse.gov.in, cbseresults.nic.in

* ಸಿಬಿಎಸ್ಇ ಫಲಿತಾಂಶ 2022 ಮೇಲೆ ಕ್ಲಿಕ್ ಮಾಡಿ

* ರೋಲ್ ಸಂಖ್ಯೆಯಂತಹ ಅಗತ್ಯವಿರುವ ರುಜುವಾತುಗಳನ್ನು ನಮೂದಿಸಿ

* ಸಿಬಿಎಸ್ಇ 2022 ಫಲಿತಾಂಶವನ್ನು ಸಲ್ಲಿಸಿ ಮತ್ತು ಡೌನ್‌ಲೋಡ್ ಮಾಡಿಕೊಳ್ಳಬಹುದು

ಎರಡು ವರ್ಷಗಳ ನಂತರ ಆಫ್‌ಲೈನ್‌ನಲ್ಲಿ ಪರೀಕ್ಷೆ; ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಸಂದರ್ಭದಲ್ಲಿ 2020 ರಿಂದ ಎರಡು ವರ್ಷಗಳವರೆಗೂ ಆನ್ ಲೈನ್ ಮೂಲಕ ಪರೀಕ್ಷೆಗಳನ್ನು ನಡೆಸಲಾಗಿತ್ತು. ಎರಡು ವರ್ಷಗಳ ನಂತರದಲ್ಲಿ ಮೊದಲ ಬಾರಿಗೆ 2022ನೇ ಸಾಲಿನಲ್ಲಿ ಆಫ್‌ಲೈನ್‌ ಪರೀಕ್ಷೆ ನಡೆಸಲಾಗುವುದು ಎಂದು ಘೋಷಿಸಲಾಗಿತ್ತು. ಈ ಬಾರಿ ನಡೆಸಿದ ಆಫ್‌ಲೈನ್‌ ಪರೀಕ್ಷೆ ಫಲಿತಾಂಶಗಳು ತೀವ್ರ ಕುತೂಹಲ ಕೆರಳಿಸಿದೆ.

English summary
How to check Central Board of Secondary Education (CBSE) Class 10, 12 Result 2022: Read here to know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X