ಮಕ್ಕಳ ಮೇಲೆ ಕೊರೊನಾ ಮೂರನೇ ಅಲೆ ಪ್ರಭಾವ; ಏನೇನು ಮಾಡಬೇಕಿದೆ?

ನವದೆಹಲಿ, ಜುಲೈ 22: ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ ಎಂದು ಕೆಲವು ತಜ್ಞರು ಎಚ್ಚರಿಕೆ ನೀಡಿದ್ದರೆ, ಮತ್ತೂ ಕೆಲವರು ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿರುವುದರಿಂದ ಸೋಂಕಿಗೆ ತುತ್ತಾಗುವ ಸಾಧ್ಯತೆ ಕಡಿಮೆ ಎಂದು ಹೇಳುತ್ತಿದ್ದಾರೆ. ಆದರೆ ಈ ಚರ್ಚೆಗಳ ನಡುವೆ ದೇಶದಲ್ಲಿ ಕೊರೊನಾ ಮೂರನೇ ಅಲೆಗೆ ಏನೇನು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ?

ಮಕ್ಕಳಿಗೆ ಕೊರೊನಾ ಸೋಂಕಿನ ಅಪಾಯ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಏನೇನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ? ಮಕ್ಕಳಿಗೆ ಸೋಂಕು ತಗುಲುವ ಪ್ರಮಾಣ ಎಷ್ಟಿದೆ? ಹೀಗೆ ಹಲವು ವಿಷಯಗಳ ಕುರಿತು ನವದೆಹಲಿಯ ಮಕ್ಕಳ ತಜ್ಞ ಡಾ. ಪ್ರವೀಣ್ ಕುಮಾರ್ ಕೆಲವು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಮಕ್ಕಳ ಮೇಲೆ ಕೊರೊನಾ ಪ್ರಭಾವ, ಮಕ್ಕಳ ರಕ್ಷಣೆಗೆ ತೆಗೆದುಕೊಳ್ಳಬೇಕಾದ ಕ್ರಮಗಳು... ಇನ್ನಿತರೆ ವಿಷಯಗಳ ಕುರಿತು ಮಾತನಾಡಿದ್ದಾರೆ. ಮುಂದೆ ಓದಿ...

 ಮಕ್ಕಳ ದೈಹಿಕ, ಮಾನಸಿಕ ಸ್ಥಿತಿಗತಿ ಮೇಲೆ ಪರಿಣಾಮ

ಮಕ್ಕಳ ದೈಹಿಕ, ಮಾನಸಿಕ ಸ್ಥಿತಿಗತಿ ಮೇಲೆ ಪರಿಣಾಮ

ಕೊರೊನಾ ಸಾಂಕ್ರಾಮಿಕ ಮಕ್ಕಳ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರಿದೆ. ಕಳೆದ ಒಂದು ವರ್ಷದಿಂದಲೂ ಮಕ್ಕಳು ಶಾಲೆ ಬಿಟ್ಟು ಮನೆಯಲ್ಲೇ ಇರುವುದರಿಂದ ಹಾಗೂ ಕುಟುಂಬ ಸದಸ್ಯರು ಅನಾರೋಗ್ಯಕ್ಕೆ ತುತ್ತಾಗಿರುವುದು, ಪೋಷಕರಲ್ಲಿನ ಒತ್ತಡ ಮಕ್ಕಳ ಮೇಲೆ ಮಾನಸಿಕ ಪರಿಣಾಮಗಳನ್ನು ತಂದೊಡ್ಡಿದೆ.

ಹೀಗಾಗಿ ಅವರಿಗೆ ದೈಹಿಕ ಸದೃಢತೆಯೊಂದಿಗೆ ಮಾನಸಿಕವಾಗಿಯೂ ಬಲ ನೀಡಬೇಕಿದೆ. ಮಕ್ಕಳ ಭಾವನೆಗಳನ್ನು ಅರ್ಥ ಮಾಡಿಕೊಂಡು ಅವರಿಗೆ ಒತ್ತಡವಾಗದಂತೆ ನೋಡಿಕೊಳ್ಳಬೇಕಿದೆ. ಇದು ಅವರ ದೈಹಿಕ ಆರೋಗ್ಯಕ್ಕೂ ಪೂರವಾಗಿರುತ್ತದೆ ಎಂದಿದ್ದಾರೆ.
 ಮಕ್ಕಳ ಮೇಲೆ ಮುಂದಿನ ಅಲೆ ಪರಿಣಾಮ ಬೀರುತ್ತದೆಯೇ?

ಮಕ್ಕಳ ಮೇಲೆ ಮುಂದಿನ ಅಲೆ ಪರಿಣಾಮ ಬೀರುತ್ತದೆಯೇ?

ಕೊರೊನಾ ಸೋಂಕು ದಿನಕ್ಕೊಂದು ರೂಪ ತಾಳುತ್ತಿದೆ. ಹೀಗಾಗಿ ಸೋಂಕಿನ ಕುರಿತು ಯಾವುದೇ ನಿರ್ಧಾರಕ್ಕೆ ಬರುವುದು ಅಸಾಧ್ಯವಾಗಿದೆ. ಮುಂದಿನ ಅಲೆ ಮಕ್ಕಳ ಮೇಲೆ ಪರಿಣಾಮ ಬೀರುತ್ತದೋ ಹೌದೋ ಎಂಬ ಅನುಮಾನದ ನಡುವೆ ಎಚ್ಚರಿಕೆಯಿಂದಿರುವುದು ಅವಶ್ಯಕವೆನಿಸಿದೆ. ಮಕ್ಕಳಿಗೆ ಇನ್ನೂ ಲಸಿಕೆ ನೀಡಿಲ್ಲವಾದ ಕಾರಣ ಅಪಾಯವನ್ನು ಅಲ್ಲಗಳೆಯುವಂತಿಲ್ಲ.

ಹೀಗಾಗಿ ಮಕ್ಕಳನ್ನು ಸೋಂಕಿನಿಂದ ರಕ್ಷಿಸುವುದು ಅವಶ್ಯಕವಾಗಿದೆ. ಮಕ್ಕಳಿಗೂ ಕೊರೊನಾ ನಿಯಮ ಪಾಲನೆಗಳನ್ನು ಅಭ್ಯಾಸ ಮಾಡಬೇಕಿದೆ. ಈ ಮೂಲಕ ಮಕ್ಕಳಿಗೆ ಸೋಂಕು ತಗುಲುವ ಅಪಾಯವನ್ನು ಕಡಿಮೆಗೊಳಿಸಬಹುದು. ಈಗ ಗರ್ಭಿಣಿಯರಿಗೆ ಹಾಗೂ ಹಾಲುಣಿಸುವ ತಾಯಂದಿರಿಗೆ ಲಸಿಕೆ ನೀಡಲಾಗುತ್ತಿದ್ದು, ಲಸಿಕೆ ಪಡೆದ ತಾಯಂದಿರ ಎಳೆ ಮಕ್ಕಳಿಗೆ ಸೋಂಕು ತಗಲುವ ಪ್ರಮಾಣ ಕಡಿಮೆಯಿರಬಹುದು ಎಂದು ಅಂದಾಜಿಸಲಾಗಿದೆ.
 ಕೊರೊನಾ ಎರಡನೇ ಅಲೆ ಪ್ರಭಾವ ಮಕ್ಕಳ ಮೇಲೆ ಹೇಗಿತ್ತು?

ಕೊರೊನಾ ಎರಡನೇ ಅಲೆ ಪ್ರಭಾವ ಮಕ್ಕಳ ಮೇಲೆ ಹೇಗಿತ್ತು?

ದೊಡ್ಡವರಷ್ಟೇ ಅಲ್ಲ, ಮಕ್ಕಳ ಮೇಲೆ ಕೂಡ ಕೊರೊನಾ ಎರಡನೇ ಅಲೆ ಪ್ರಭಾವ ಬೀರಿತ್ತು. ಮೊದಲ ಅಲೆಗೆ ಹೋಲಿಸಿದರೆ ಎರಡನೇ ಅಲೆಯಲ್ಲಿ ಸೋಂಕಿಗೆ ಒಳಗಾದ ಮಕ್ಕಳ ಸಂಖ್ಯೆ ಹೆಚ್ಚಾಗಿದ್ದುದಾಗಿ ತಿಳಿದುಬಂದಿದೆ. ಆದರೆ ವಯಸ್ಕರೊಂದಿಗೆ ಹೋಲಿಸಿದರೆ ಸೋಂಕಿನ ಪ್ರಮಾಣ ಮಕ್ಕಳಲ್ಲಿ ಕಡಿಮೆ ಇದೆ ಎನ್ನಲಾಗಿದೆ. ಜೊತೆಗೆ ಕೊರೊನಾ ಸೋಂಕಿನಿಂದ ಗುಣಮುಖರಾದ ನಂತರ ಮಕ್ಕಳಲ್ಲಿ ಗ್ಯಾಸ್ಟ್ರಿಕ್, ತಲೆ ನೋವು, ಉಸಿರಾಟ ಸಮಸ್ಯೆ, ಮರೆವು ಕಂಡುಬರುತ್ತಿದೆ.

 ಮಕ್ಕಳಿಗಾಗಿ ಆಸ್ಪತ್ರೆಗಳಲ್ಲಿ ಹಾಸಿಗೆ ಮೀಸಲಿಡಲು ಕೇಂದ್ರದ ಸೂಚನೆ

ಮಕ್ಕಳಿಗಾಗಿ ಆಸ್ಪತ್ರೆಗಳಲ್ಲಿ ಹಾಸಿಗೆ ಮೀಸಲಿಡಲು ಕೇಂದ್ರದ ಸೂಚನೆ

ಕೊರೊನಾ ಮೂರನೇ ಅಲೆ ಎಚ್ಚರಿಕೆ ಹಿನ್ನೆಲೆಯಲ್ಲಿ ಆರೋಗ್ಯ ಮೂಲಸೌಕರ್ಯದೆಡೆಗೆ ಗಮನ ಹರಿಸಬೇಕು, ಮಕ್ಕಳ ಆರೈಕೆ ಕೇಂದ್ರ ಹಾಗೂ ಸಾಕಷ್ಟು ಆಮ್ಲಜನಕ ಲಭ್ಯತೆಯನ್ನು ಖಾತ್ರಿಪಡಿಸಿಕೊಳ್ಳಬೇಕು ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವಾಲಯ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ. ಮಕ್ಕಳಲ್ಲಿನ ಕೊರೊನಾ ಸೋಂಕು ನಿರ್ವಹಣೆ ಅಗತ್ಯಗಳಿಗೆ ಸ್ಪಂದಿಸಲು 736 ಜಿಲ್ಲೆಗಳಲ್ಲಿ ಮಕ್ಕಳ ಆರೈಕೆ ಘಟಕ ಸ್ಥಾಪಿಸಲು ರಾಜ್ಯಗಳಿಗೆ ಬೆಂಬಲ ನೀಡುವುದಾಗಿ ತಿಳಿಸಿದೆ.

Recommended Video

    ಕ್ರಿಕೆಟ್ ನೋಡುವಾಗ ಪ್ರೇಯಸಿಗೆ ಪ್ರಪೋಸ್ ಮಾಡಿದ ಮತ್ತೊಬ್ಬ ಯುವಕ | Oneindia Kannada
     ಮಕ್ಕಳಿಗೆ ಶಾಲೆಗಳನ್ನು ತೆರೆಯುವ ಆಲೋಚನೆ

    ಮಕ್ಕಳಿಗೆ ಶಾಲೆಗಳನ್ನು ತೆರೆಯುವ ಆಲೋಚನೆ

    ಕೆಲವು ದಿನಗಳಿಂದ ದೇಶದಲ್ಲಿ ಕೊರೊನಾ ಪ್ರಕರಣಗಳು ತಗ್ಗುತ್ತಿವೆ. ಕೊರೊನಾ ಎರಡನೇ ಅಲೆ ಪ್ರಭಾವ ಕ್ಷೀಣಿಸುತ್ತಿದೆ. ಹಲವೆಡೆ ಉನ್ನತ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಅವಕಾಶ ನೀಡಲಾಗುತ್ತಿದೆ. ಇದೀಗ ಶಾಲೆಗಳನ್ನು ಕೂಡ ತೆರೆಯುವ ಕುರಿತು ಸರ್ಕಾರ ಯೋಚಿಸಬೇಕಿದೆ ಎಂದು ದೆಹಲಿಯ ಏಮ್ಸ್‌ ನಿರ್ದೇಶಕ ರಣದೀಪ್ ಗುಲೇರಿಯಾ ಹೇಳಿದ್ದಾರೆ. ಭಾರತದಲ್ಲಿ ಮಕ್ಕಳು ಈಗಾಗಲೇ ಕೊರೊನಾ ವೈರಸ್‌ಗೆ ಒಡ್ಡಿಕೊಂಡಿದ್ದಾರೆ ಹಾಗೂ ಅವರಲ್ಲಿ ಅನೇಕರಿಗೆ ನೈಸರ್ಗಿಕವಾಗಿ ರೋಗನಿರೋಧಕ ಶಕ್ತಿ ಅಭಿವೃದ್ಧಿಯಾಗಿದೆ. ಭಾರತದಲ್ಲಿ ದೊಡ್ಡವರಿಗೆ ಹೋಲಿಸಿದರೆ ಮಕ್ಕಳಲ್ಲಿ ಸೆರೊ ಪಾಸಿಟಿವಿಟಿ ದರ ಹೆಚ್ಚಾಗಿದೆ ಎಂಬುದನ್ನು ಸಮೀಕ್ಷೆಗಳು ಕೂಡ ಸಾಕ್ಷೀಕರಿಸಿವೆ. ಹೀಗಾಗಿ ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ ಎಂಬುದರ ಬಗ್ಗೆ ಸ್ಪಷ್ಟತೆ ದೊರೆತಿಲ್ಲ. ಆದರೆ ಮಾಸ್ಕ್‌, ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಮೂಲಕ ಶಾಲೆಗಳನ್ನು ತೆರೆಯಬಹುದಾಗಿದೆ ಎಂದು ಹೇಳಿದ್ದಾರೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+