ಬ್ಲ್ಯಾಕ್ ಫಂಗಸ್ ತಡೆಯಲು ಏನು ಮಾಡಬೇಕು; ಏಮ್ಸ್ ನಿರ್ದೇಶಕರ ಮೂರು ಬಹುಮುಖ್ಯ ಸಲಹೆ
ನವದೆಹಲಿ, ಮೇ 21: ಕೊರೊನಾ ಸೋಂಕಿನಿಂದ ಗುಣಮುಖರಾದ ಜನರಲ್ಲಿ ಕಾಣಿಸಿಕೊಳ್ಳುತ್ತಿರುವ ಅಪಾಯಕಾರಿ ಬ್ಲ್ಯಾಕ್ ಫಂಗಸ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕೊರೊನಾ ಸೋಂಕಿನ ನಡುವೆ ಮತ್ತೊಂದು ಆತಂಕ ಸೃಷ್ಟಿಯಾಗಿದೆ.
ಕೊರೊನಾ ವೈರಸ್‌ನಿಂದ ಚೇತರಿಸಿಕೊಂಡ ರೋಗಿಗಳಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣ ಈಗ ದೇಶಾದ್ಯಂತ ದೊಡ್ಡ ಪ್ರಮಾಣದಲ್ಲಿ ಪತ್ತೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬ್ಲ್ಯಾಕ್ ಫಂಗಸ್‌ಅನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಲು ಎಲ್ಲಾ ರಾಜ್ಯಗಳಿಗೂ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಈ ಮ್ಯೂಕರ್‌ಮೈಕೋಸಿಸ್ ಅಥವಾ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಹಲವು ರಾಜ್ಯಗಳಲ್ಲಿ ವರದಿಯಾಗುತ್ತಿದ್ದು, ಇದನ್ನು ತಡೆಗಟ್ಟುವಲ್ಲಿ ಪ್ರಮುಖವಾದ ಮೂರು ಅಂಶಗಳನ್ನು ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಏಮ್ಸ್) ನಿರ್ದೇಶಕ ರಣದೀಪ್ ಗುಲೇರಿಯಾ ಪಟ್ಟಿ ಮಾಡಿದ್ದಾರೆ. ಇವುಗಳನ್ನು ಅನುಸರಿಸಿದರೆ ಬ್ಲ್ಯಾಕ್ ಫಂಗಸ್ ಬರುವುದನ್ನು ತಡೆಗಟ್ಟಬಹುದು ಎಂದಿದ್ದಾರೆ. ಅವು ಯಾವುವು? ಮುಂದೆ ಓದಿ...

ಬ್ಲ್ಯಾಕ್ ಫಂಗಸ್ ತಡೆಗೆ ಪ್ರಮುಖ ಅಂಶಗಳು...
ಬ್ಲ್ಯಾಕ್ ಫಂಗಸ್ ತಡೆಗಟ್ಟುವಲ್ಲಿಈ ಮೂರು ಅಂಶಗಳು ಪ್ರಮುಖವಾಗಿವೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವುದು, ಸ್ಟೆರಾಯ್ಡ್ ಬಳಸುತ್ತಿರುವವರಲ್ಲಿ ನಿಯಮಿತವಾಗಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಪರಿಶೀಲಿಸುವುದು ಹಾಗೂ ಸ್ಟೆರಾಯ್ಡ್ ಯಾವಾಗ ಹಾಗೂ ಎಷ್ಟು ಡೋಸ್‌ಗಳಲ್ಲಿ ನೀಡಬೇಕು ಎಂಬುದರ ಕುರಿತು ನಿಗಾ ವಹಿಸುವುದು ಅತಿ ಅವಶ್ಯಕ. ಇದನ್ನು ಕೊರೊನಾ ಸೋಂಕಿಗೆ ಚಿಕಿತ್ಸೆ ನೀಡುವಾಗ ಅನುಸರಿಸಿದರೆ ಬ್ಲ್ಯಾಕ್ ಫಂಗಸ್ ಬರದಂತೆ ತಡೆಯಬಹುದು ಎಂದು ಸಲಹೆ ನೀಡಿದ್ದಾರೆ.

"2002ರಲ್ಲಿಯೂ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿತ್ತು"
2002ರಲ್ಲಿಯೂ ಬ್ಲ್ಯಾಕ್ ಫಂಗಸ್ ಸೋಂಕು ಕಾಣಿಸಿಕೊಂಡಿತ್ತು. ಇದೀಗ ಕೊರೊನಾದೊಂದಿಗೆ ಅನಿಯಂತ್ರಿತ ಮಧುಮೇಹ ಇರುವವರಲ್ಲಿ ಈ ಸೋಂಕಿನ ಸಾಧ್ಯತೆ ಹೆಚ್ಚಿಗೆ ಕಂಡುಬರುತ್ತಿದೆ ಎಂದು ರಣದೀಪ್ ಗುಲೇರಿಯಾ ತಿಳಿಸಿದ್ದಾರೆ. ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಈ ಸೋಂಕು ದಾಳಿ ಮಾಡುತ್ತಿದೆ. ಸ್ಟೆರಾಯ್ಡ್‌ಗಳ ಹೆಚ್ಚಿನ ಬಳಕೆಯೂ ಇದಕ್ಕೆ ಕಾರಣವಾಗಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸ್ಟೆರಾಯ್ಡ್ ಬಳಕೆ ಬಗ್ಗೆ ಎಚ್ಚರ ವಹಿಸುವಂತೆ ಸೂಚನೆ
ಕೊರೊನಾ ಎರಡನೇ ಅಲೆಯಲ್ಲಿ ಸ್ಟೆರಾಯ್ಡ್‌ಗಳ ಬಳಕೆ ಹೆಚ್ಚಾಗಿದೆ. ಹೆಚ್ಚು ಸ್ಟೆರಾಯ್ಡ್‌ಗಳ ಬಳಕೆ ರಕ್ತದಲ್ಲಿನ ಸಕ್ಕರೆ ಅಂಶ ಹೆಚ್ಚಾಗಲು ಕಾರಣವಾಗಿದೆ. ಇದು ಬ್ಲ್ಯಾಕ್ ಫಂಗಸ್ ಸಾಧ್ಯತೆಯನ್ನು ಹೆಚ್ಚಿಸಿದೆ. ಹೀಗಾಗಿ ರೋಗಿಗಳಿಗೆ ಔಷಧಗಳ ಬಳಕೆ ಕುರಿತು ಹೆಚ್ಚಿನ ನಿಗಾ ವಹಿಸಬೇಕು. ಆಗ ಮಾತ್ರ ಬ್ಲ್ಯಾಕ್ ಫಂಗಸ್ ತಡೆಯಲು ಸಾಧ್ಯ ಎಂದಿದ್ದಾರೆ.

ಬ್ಲ್ಯಾಕ್ ಫಂಗಸ್‌ನಿಂದ 126 ಮಂದಿ ಸಾವು
ಕೊರೊನಾ ಸೋಂಕಿನಿಂದ ಗುಣಮುಖರಾದವರಲ್ಲಿ ಕಾಣಿಸಿಕೊಳ್ಳುತ್ತಿರುವ ಬ್ಲ್ಯಾಕ್ ಫಂಗಸ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬುಧವಾರದವರೆಗಿನ ಅಧಿಕೃತ ಮಾಹಿತಿ ಪ್ರಕಾರ 5,500 ಜನರು ಬ್ಲ್ಯಾಕ್ ಫಂಗಸ್‌ಗೆ ತುತ್ತಾಗಿದ್ದಾರೆ. ಒಟ್ಟು 126 ಜನ ಇದರಿಂದ ಪ್ರಾಣ ಕಳೆದುಕೊಂಡಿದ್ದು ಮಹಾರಾಷ್ಟ್ರವೊಂದರಲ್ಲೇ 90 ಸಾವಿನ ಪ್ರಕರಣಗಳು ದೃಢಪಟ್ಟಿದೆ. ಬ್ಲ್ಯಾಕ್ ಫಂಗಸ್ ಪ್ರಕರಣಗಳ ಚಿಕಿತ್ಸೆಗೆ ಔಷಧಿಗಳ ಕೊರತೆಯೂ ಎದುರಾಗಿದೆ. ಲಿಪೊಸೋಮಲ್ ಆಂಪೋಟೇರಿಸಿನ್ ಬಿ ಎಂಬ ಆ್ಯಾಂಟಿ ಫಂಗಲ್ ಡ್ರಗ್ ಇದಕ್ಕೆ ಅಗತ್ಯವಿರುವ ಔಷಧಿಯಾಗಿದೆ. ಇದರ ಕೊರತೆ ಕೂಡ ಈಗ ಚಿಕಿತ್ಸೆಯ ದೃಷ್ಟಿಯಿಂದ ಸವಾಲಾಗುತ್ತಿದೆ. ಬ್ಲ್ಯಾಕ್ ಫಂಗಸ್ ಪ್ರಕರಣಗಳಿಂದ ಸಾವನ್ನಪ್ಪುತ್ತಿರುವ ರಾಜ್ಯಗಳಲ್ಲಿ ಹರಯಾಣ ಎರಡನೇ ಸ್ಥಾನದಲ್ಲಿದ್ದು ಈವರೆಗೆ 14 ಜನರು ಇಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.
-
Vastu Tips: ಮನೆಯಲ್ಲಿ ಎರಡು ಕನ್ನಡಿಗಳು ಎದುರುಬದರಿನಲ್ಲಿ ಇದೆಯಾ? ತಕ್ಷಣ ಬದಲಿಸಿ -
Mangoes: ಮಾವಿನಹಣ್ಣು ಖರೀದಿ ಮಾಡುವಾಗ 3 ತಪ್ಪು ಮಾಡ್ಬೇಡಿ! ಈ 6 ಟ್ರಿಕ್ಸ್ ತಿಳ್ಕೊಂಡಿರಿ -
ಮನೆಯಲ್ಲಿ ಹಾಗಲಕಾಯಿ ಬೆಳೆಸುತ್ತಿದ್ದೀರಾ? ಹಾಗಾದರೆ 4 ವಾಸ್ತು ನಿಯಮಗಳು ತಿಳಿಯಿರಿ -
Vastu vs Horoscope: ಮನೆ ವಾಸ್ತು ಪರ್ಫೆಕ್ಟ್ ಆದರೂ ಏಕೆ ಕಿರಿಕಿರಿ? ತಿಳಿಯಿರಿ -
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್ -
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್












Click it and Unblock the Notifications