HP Election Result 2022; ಮ್ಯಾಜಿಕ್ ನಂಬರ್ ಸಮೀಪಕ್ಕೆ ಬಂದ ಕಾಂಗ್ರೆಸ್
ನವದೆಹಲಿ, ಡಿಸೆಂಬರ್ 08; ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕ್ಷಣ-ಕ್ಷಣಕ್ಕೂ ಕುತೂಹಲ ಮೂಡಿಸುತ್ತಿದೆ. ಬಿಜೆಪಿ ಸರ್ಕಾರ ರಚನೆ ಕಸರತ್ತು ಆರಂಭಿಸಿದೆ, ಕಾಂಗ್ರೆಸ್ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ ಸನಿಹಕ್ಕೆ ಬಂದಿದೆ.
Recommended Video

ಹಿಮಾಚಲ ಪ್ರದೇಶ ವಿಧಾನಸಭೆಯ ಒಟ್ಟು ಸ್ಥಾನಗಳು 68. ಬಹುಮತ ಪಡೆಯಲು ಬೇಕಾದ ಮ್ಯಾಜಿಕ್ ನಂಬರ್ 35. ಗುರುವಾರ 33 ಜಿಲ್ಲೆಗಳ 37 ಕೇಂದ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದೆ. ಸದ್ಯದ ಮಾಹಿತಿ ಪ್ರಕಾರ ಕಾಂಗ್ರೆಸ್ 35 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಹಿಮಾಚಲ ಪ್ರದೇಶ ಮುಖ್ಯಮಂತ್ರಿ, ಬಿಜೆಪಿ ನಾಯಕ ಜೈರಾಮ್ ಠಾಕೂರ್ ಮಂಡಿ ಜಿಲ್ಲೆಯ ಸೆರಾಜ್ ಕ್ಷೇತ್ರದಲ್ಲಿ 20,425 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಚುನಾವಣಾ ಆಯೋಗದ ಮಾಹಿತಿ ಪ್ರಕಾರ ಕಾಂಗ್ರೆಸ್ 35 ಮತ್ತು ಬಿಜೆಪಿ ತಲಾ 30 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ. ಪಕ್ಷೇತರ ಅಭ್ಯರ್ಥಿಗಳು ಉಳಿದ 3 ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.
ರಾಜ್ಯದಲ್ಲಿ ಸರ್ಕಾರ ರಚನೆ ಕಸರತ್ತು ಆರಂಭಿಸಿರುವ ಬಿಜೆಪಿ ನಾಯಕರು ಪಕ್ಷೇತರ ಅಭ್ಯರ್ಥಿಗಳ ಜೊತೆ ಸಂಪರ್ಕದಲ್ಲಿದ್ದಾರೆ. ಆದರೆ ಚುನಾವಣಾ ಫಲಿತಾಂಶ ಕ್ಷಣಕ್ಕೊಂದು ತಿರುವು ಪಡೆಯುತ್ತಿದೆ, ಆದ್ದರಿಂದ ಕುತೂಹಲವೂ ಹೆಚ್ಚುತ್ತಿದೆ.
#HimachalPradeshElections | Congress now leading on 37 seats; BJP wins 1 and leads on 27 as counting continues.
— ANI (@ANI) December 8, 2022
The majority mark is 35 here. pic.twitter.com/TSKTjY8GVQ
ಹಿಮಾಚಲ ಪ್ರದೇಶದಲ್ಲಿ ಸರ್ಕಾರ ರಚನೆ ಮಾಡಲು ಪಕ್ಷೇತರ ಅಭ್ಯರ್ಥಿಗಳು ಪ್ರಮುಖ ಪಾತ್ರ ವಹಿಸುವ ಸಾಧ್ಯತೆ ಇದೆ. ಬಿಜೆಪಿ ಟಿಕೆಟ್ ಸಿಗದೇ ಬಂಡಾಯವೆದ್ದು, ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದವರು ಯಾರನ್ನು ಬೆಂಬಲಿಸುತ್ತಾರೆ ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ.
ಸರ್ಕಾರ ರಚನೆ ಕಸರತ್ತು ಆರಂಭಿಸಿರುವ ಕಾಂಗ್ರೆಸ್ ಪಕ್ಷ ಶಾಸಕರನ್ನು ರಾಜಸ್ಥಾನದ ರೆಸಾರ್ಟ್‌ಗೆ ಸ್ಥಳಾಂತರ ಮಾಡಲು ಮುಂದಾಗಿದೆ. ಈ ಮೂಲಕ ಆಪರೇಷನ್ ಕಮಲಕ್ಕೆ ತಡೆ ಹಾಕಲು ತೀರ್ಮಾನಿಸಿದೆ.
ಹಿಮಾಚಲ ಪ್ರದೇಶದ ಚುನಾವಣಾ ಫಲಿತಾಂಶ ಬಗ್ಗೆ ಮಾತನಾಡಿದ ಕಾಂಗ್ರೆಸ್ ನಾಯಕ ಪವನ್ ಖೆಹರಾ, "ಯಾವುದೇ ನೇರ ಪೈಪೋಟಿ ಇಲ್ಲ, ನಾವು ಸ್ಪಷ್ಟ ಬಹುಮತದತ್ತ ಸಾಗುತ್ತಿದ್ದೇವೆ, ಸುಭದ್ರವಾದ ಸರ್ಕಾರ ರಚನೆ ಮಾಡುತ್ತೇವೆ. ಆಪರೇಷನ್ ಕಮಲ ಸೇರಿದಂತೆ ಯಾವ ತಂತ್ರವೂ ನಡೆಯುವುದಿಲ್ಲ" ಎಂದು ಹೇಳಿದರು.












Click it and Unblock the Notifications