ಸಾಮೂಹಿಕ ಅತ್ಯಾಚಾರ ಪ್ರಕರಣ: ಸಿಬಿಐ ಮಧ್ಯಸ್ಥಿಕೆ ಬೇಡಿದ ಹಿಮಾಚಲ ಪ್ರದೇಶ

Posted By:
Subscribe to Oneindia Kannada

ಶಿಮ್ಲಾ (ಹಿಮಾಚಲ ಪ್ರದೇಶ), ಜುಲೈ 14: ಹಿಮಾಚಲ ಪ್ರದೇಶದ ಶಿಮ್ಲಾದ ಕೊಟೈ ನಲ್ಲಿ ಕಳೆದ ವಾರ ಅಪ್ರಾಪ್ತೆಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಕೇಂದ್ರ ತನಿಖಾ ದಳ (ಸಿಬಿಐ) ಮಧ್ಯಸ್ಥಿಕೆ ವಹಿಸಬೇಕೆಂದು ಇಲ್ಲಿನ ಸರ್ಕಾರ ಕೋರಿದೆ.

ಜುಲೈ 4 ರಂದು ಶಾಲೆಗೆ ತೆರಳಿದ್ದ ಅಪ್ರಾಪ್ತೆಯೊಬ್ಬಳು ಸಂಜೆ ಮನೆಗೆ ಮರಳುತ್ತಿದ್ದ ಸಮಯದಲ್ಲಿ ಆಕೆಯನ್ನು ಅಪಹರಿಸಿದ್ದ ಕಾಮುಕರು, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು.

ಮುಂಬೈ: ಚಲಿಸುವ ಕಾರಿನಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ

HP government orders CBI probe in a gangrape and murder case

ಅತ್ಯಾಚಾರ ಮಾಡಿದ ನಂತರ ಆಕೆಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ನಿರ್ಜನ ಪ್ರದೇಶದಲ್ಲಿ ಬಿಟ್ಟು ಹೋಗಲಾಗಿತ್ತು. ಘಟನೆ ನಡೆದ ಎರಡು ದಿನದ ನಂತರ ಬಾಲಕಿಯ ಶವವನ್ನು ಪೊಲೀಸರು ಪತ್ತೆ ಹಚ್ಚಿದ್ದರು.

ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆಯೇ ಕಾಮುಕರನ್ನು ಶೀಘ್ರವೇ ಬಂಧಿಸುವಂತೆ ಸಾರ್ವಜನಿಕರಿಂದ ಒತ್ತಡ ಸೃಷ್ಟಿಯಾಗಿತ್ತು. ಹಿಮಾಚಲ ಪ್ರದೇಶ ಸರ್ಕಾರವೂ ಅಪರಾಧಿಗಳ ಕುರಿತು ಸುಳಿವು ನೀಡಿದವರಿಗೆ ಒಂದು ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿತ್ತು.

ನಂತರ ಆರು ಜನ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು. ಆದರೂ ಘಟನೆಯನ್ನು ಕೂಲಂಕಷವಾಗಿ ಪರಿಶೀಲಿಸಿ, ಇನ್ನು ಮುಂದೆ ಇಂಥ ಘಟನೆ ನಡೆಯದಂತೆ ಮುಂಜಾಗೃತೆ ವಹಿಸುವ ಸಲುವಾಗಿ ಶಿಮ್ಲಾ ಸರ್ಕಾರ ಈ ಘಟನೆಯ ವಿಚಾರಣೆಯನ್ನು ಕೇಂದ್ರ ತನಿಖಾ ದಳಕ್ಕೆ ವಹಿಸಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
6 men were arrested in connection with a gang rape and murder case of a minor girl, in Shimla, Himachal Pradesh. The Himachal Pradesh government ordered a CBI probe in the case.
Please Wait while comments are loading...