6ನೇ ಮಹಡಿಯಿಂದ ಹಸುಗೂಸಿನೊಂದಿಗೆ ಜಿಗಿದ ಸಾಫ್ಟ್‌ವೇರ್ ಉದ್ಯೋಗಿ; ಮಗು ಬದುಕಿದ್ದೇ ಪವಾಡ

ತೆಲಂಗಾಣದ ಹೈದರಾಬಾದ್‌ನ ಮಿಯಾಪುರ ಪ್ರದೇಶದಲ್ಲಿ ಅತ್ಯಂತ ಮನಕಲಕುವ ಮತ್ತು ಆಘಾತಕಾರಿ ಘಟನೆಯೊಂದು ನಡೆದಿದೆ. 37 ವರ್ಷದ ಮಹಿಳಾ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರು ತಮ್ಮ 6 ತಿಂಗಳ ಹೆಣ್ಣು ಮಗುವನ್ನು ಎದೆಗೆ ಅಪ್ಪಿಕೊಂಡು ಅಪಾರ್ಟ್‌ಮೆಂಟ್‌ನ 6ನೇ ಮಹಡಿಯಿಂದ ಕೆಳಗೆ ಜಿಗಿದಿದ್ದಾರೆ. ಈ ಘಟನೆಯಲ್ಲಿ ಮಹಿಳೆ ಸ್ಥಳದಲ್ಲೇ ಕೊನೆಯುಸಿರೆಳೆದರೆ, ಅವರ ಕೈಲಿದ್ದ ಕಂದಮ್ಮ ಮಾತ್ರ ಪವಾಡಸದೃಶವಾಗಿ ಬದುಕುಳಿದಿದೆ.

ಘಟನೆಯ ಹಿನ್ನೆಲೆ

ಮೃತರನ್ನು ಇಶಾ ಸಾಹು (37) ಎಂದು ಗುರುತಿಸಲಾಗಿದೆ. ಅಲ್ಲಿನ ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಇಶಾ, ಶುಕ್ರವಾರ ಮಧ್ಯಾಹ್ನ ಸುಮಾರು 3:45ರ ಸುಮಾರಿಗೆ ತಮ್ಮ ಫ್ಲ್ಯಾಟ್‌ನಿಂದ ಮಗುವಿನೊಂದಿಗೆ ಕೆಳಗೆ ಜಿಗಿದಿದ್ದಾರೆ. ಮಹಿಳೆ ಮಗುವನ್ನು ಎತ್ತಿಕೊಂಡು ಜಿಗಿದಾಗ, ಅಪಾರ್ಟ್‌ಮೆಂಟ್‌ನ ಕೆಳಭಾಗದಲ್ಲಿದ್ದ ಸುರಕ್ಷತಾ ಜಾಲ ಅಥವಾ ನೆಟ್‌ನ ಮೇಲೆ ಮಗು ಮೊದಲು ಬಿದ್ದಿದೆ. ಇದು ಮಗು ನೇರವಾಗಿ ನೆಲಕ್ಕೆ ಅಪ್ಪಳಿಸುವುದನ್ನು ತಡೆದಿದೆ.

Hyderabad Tragedy

ಘಟನೆ ನಡೆದ ತಕ್ಷಣವೇ ಅಪಾರ್ಟ್‌ಮೆಂಟ್‌ನ ಭದ್ರತಾ ಸಿಬ್ಬಂದಿ ಮತ್ತು ಸ್ಥಳೀಯ ನಿವಾಸಿಗಳು ಸಮಯ ಪ್ರಜ್ಞೆ ಮೆರೆದು ಮಗುವನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಸಾಗಿಸಿದರು. ಪ್ರಸ್ತುತ ಮಗು ವೈದ್ಯರ ಕಣ್ಗಾವಲಿನಲ್ಲಿ ನವಜಾತ ಶಿಶುಗಳ ಐಸಿಯು (NICU) ನಲ್ಲಿದ್ದು, ಚೇತರಿಸಿಕೊಳ್ಳುತ್ತಿದೆ. ಮಗುವಿಗೆ ಕೇವಲ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಮಗು ಪ್ರಾಣಾಪಾಯದಿಂದ ಪಾರಾಗಿದೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.

ಸಿನಿಮಾಗಳಲ್ಲಿ ಕೌಟುಂಬಿಕ ಮೌಲ್ಯ ಸಾರಿದ ನಿರ್ದೇಶಕನ ಮನೆಯಲ್ಲೇ ಬಿರುಕು? ಭಾರತಿರಾಜಾ ಸಾವಿನ ಸುತ್ತ ಸಾಲು ಸಾಲು ಪ್ರಶ್ನೆ
ಸಿನಿಮಾಗಳಲ್ಲಿ ಕೌಟುಂಬಿಕ ಮೌಲ್ಯ ಸಾರಿದ ನಿರ್ದೇಶಕನ ಮನೆಯಲ್ಲೇ ಬಿರುಕು? ಭಾರತಿರಾಜಾ ಸಾವಿನ ಸುತ್ತ ಸಾಲು ಸಾಲು ಪ್ರಶ್ನೆ

ತೀವ್ರ ಖಿನ್ನತೆಯಿಂದ ಬಳಲುತ್ತಿದ್ದರೇ ಮಹಿಳೆ?

ಪ್ರಾಥಮಿಕ ತನಿಖೆಯ ಪ್ರಕಾರ, ಇಶಾ ಸಾಹು ಅವರು ಕಳೆದ ಕೆಲವು ತಿಂಗಳುಗಳಿಂದ ತೀವ್ರವಾದ ನಿದ್ರಾಹೀನತೆ, ಆತಂಕ ಹಾಗೂ ಹೆರಿಗೆಯ ನಂತರ ಕಾಡುವ ತೀವ್ರ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ನಿದ್ರೆಯ ಕೊರತೆ ಮತ್ತು ಮಾನಸಿಕ ಒತ್ತಡವೇ ಅವರು ಈ ರೀತಿಯ ತೀವ್ರ ನಿರ್ಧಾರ ತೆಗೆದುಕೊಳ್ಳಲು ಕಾರಣ ಇರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮೃತ ಇಶಾ ಅವರಿಗೆ 11 ವರ್ಷಗಳ ಹಿಂದೆ ಮದುವೆಯಾಗಿದ್ದು, ಪತಿ ಹಾಗೂ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಘಟನೆ ನಡೆದ ಸಮಯದಲ್ಲಿ ಕುಟುಂಬದ ಇತರ ಸದಸ್ಯರು ಮನೆಯೊಳಗೇ ಇದ್ದರು ಎಂದು ತಿಳಿದುಬಂದಿದೆ.

ಈ ಘಟನೆಯು ಸ್ಥಳೀಯ ನಿವಾಸಿಗಳು ಹಾಗೂ ಅವರ ಸಂಬಂಧಿಕರಲ್ಲಿ ತೀವ್ರ ಆಘಾತವನ್ನುಂಟು ಮಾಡಿದೆ. ಮಿಯಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಎಲ್ಲ ಆಯಾಮಗಳಿಂದಲೂ ತನಿಖೆ ಆರಂಭಿಸಿದ್ದಾರೆ. ಕುಟುಂಬದ ಸದಸ್ಯರು ಮತ್ತು ನೆರೆಹೊರೆಯವರಿಂದ ಮಾಹಿತಿ ಕಲೆಹಾಕಲಾಗುತ್ತಿದೆ. ಘಟನೆಯ ಬಗ್ಗೆ ತನಿಖೆ ನಡೆಯುತ್ತಿರುವುದರಿಂದ ಸಾರ್ವಜನಿಕರು ಯಾವುದೇ ರೀತಿಯ ವದಂತಿಗಳನ್ನು ಹರಡಬಾರದು ಮತ್ತು ಅಧಿಕೃತ ಮಾಹಿತಿ ಬರುವವರೆಗೆ ಕಾಯಬೇಕು" ಎಂದು ಪೊಲೀಸ್ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಐಟಿ ಉದ್ಯೋಗಿಯೊಬ್ಬರು ಇಂತಹ ನಿರ್ಧಾರ ತೆಗೆದುಕೊಂಡಿರುವುದರಿಂದ ಸೋಷಿಯಲ್ ಮೀಡಿಯಾದಲ್ಲಿ ಕೌಟುಂಬಿಕ ಕಿರುಕುಳ ಅಥವಾ ಕೆಲಸದ ಒತ್ತಡದ ಬಗ್ಗೆ ತಪ್ಪು ವದಂತಿಗಳು ಹರಡುತ್ತಿವೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, "ಇದು ಸಂಪೂರ್ಣವಾಗಿ ವೈದ್ಯಕೀಯ/ಮಾನಸಿಕ ಆರೋಗ್ಯದ ಸಮಸ್ಯೆಯಿಂದ ನಡೆದಿರುವ ಸಾಧ್ಯತೆ ಹೆಚ್ಚಿದೆ. ತನಿಖೆ ಮುಗಿಯುವವರೆಗೆ ಯಾರೂ ವದಂತಿ ಹರಡಬಾರದು" ಎಂದು ಪೊಲೀಸರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+