ನಾನು ಭಾರತೀಯನಾಗಿ ಇಲ್ಲಿಗೆ ಬಂದಿದ್ದೇನೆ: ದೆಹಲಿಯ ಕೆಂಪುಕೋಟೆಯಲ್ಲಿ ಕಮಲ್ ಹಾಸನ್ ಹೇಳಿದ್ದೇನು?
ನವದೆಹಲಿ, ಡಿಸೆಂಬರ್ 24: ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್‌ನ 'ಭಾರತ್ ಜೋಡೋ ಯಾತ್ರೆ' ಮೆರವಣಿಗೆಯಲ್ಲಿ ಹಿರಿಯ ನಟ ಕಮಲ್ ಹಾಸನ್ ಅವರು ಶನಿವಾರ ಪಾಲ್ಗೊಂಡರು.
ಈಗಾಗಲೇ 2800 ಕಿ.ಮೀ ಕ್ರಮಿಸಿರುವ ಕಾಂಗ್ರೆಸ್‌ನ ಪಾದಯಾತ್ರೆಯಲ್ಲಿ ಪಾಲ್ಗೊಂಡ ಹಲವಾರು ಸೆಲೆಬ್ರಿಟಿಗಳಲ್ಲಿ ಕಮಲ್ ಹಾಸನ್ ಸಹ ಒಬ್ಬರು. ಜನವರಿ ಅಂತ್ಯದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಅಂತ್ಯಗೊಳ್ಳುವ ಯಾತ್ರೆಯ 3,570 ಕಿ.ಮೀ ಸಾಗಲಿದೆ. ದೇಶದ 12 ರಾಜ್ಯಗಳಲ್ಲಿ ಕ್ರಮಿಸಲಿದೆ.
ಇಂದು ದೆಹಲಿಯಲ್ಲಿ ನಡೆದ ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಕಮಲ್ ಹಾಸನ್ ಹೆಜ್ಜೆ ಹಾಕಿದರು.
'ನಾನೇಕೆ ಇಲ್ಲಿದ್ದೇನೆ ಎಂದು ಅನೇಕರು ನನ್ನನ್ನು ಕೇಳುತ್ತಾರೆ. ನಾನು ಒಬ್ಬ ಭಾರತೀಯನಾಗಿ ಇಲ್ಲಿದ್ದೇನೆ. ನನ್ನ ತಂದೆ ಕಾಂಗ್ರೆಸ್ಸಿಗರಾಗಿದ್ದರು. ನಾನು ಬೇರೆ ಸಿದ್ಧಾಂತಗಳನ್ನು ಹೊಂದಿದ್ದೇನೆ. ನನ್ನದೇ ಆದ ರಾಜಕೀಯ ಪಕ್ಷವನ್ನು ಪ್ರಾರಂಭಿಸಿದ್ದೇನೆ. ಆದರೆ ದೇಶದ ವಿಷಯಕ್ಕೆ ಬಂದಾಗ, ಎಲ್ಲಾ ರಾಜಕೀಯ ಪಕ್ಷದ ನಡುವಿನ ಗೆರೆಗಳು ಮಸುಕಾಗಬೇಕು. ನಾನು ಆ ಗೆರೆಯನ್ನು ಮಸುಕುಗೊಳಿಸಿ ಇಲ್ಲಿಗೆ ಬಂದಿದ್ದೇನೆ' ಎಂದು ಕಮಲ್ ಹಾಸನ್ ಹೇಳಿದ್ದಾರೆ.

ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಅವರ ಮಗಳು ಪ್ರಿಯಾಂಕಾ ಗಾಂಧಿ, ಅಳಿಯ ಮತ್ತು ಮೊಮ್ಮಕ್ಕಳು ರಾಹುಲ್ ಗಾಂಧಿ ಅವರೊಂದಿಗೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ದೆಹಲಿಯ ಆಶ್ರಮ ಚೌಕ್‌ನಲ್ಲಿ ಬೆಳಗಿನ ವಿರಾಮಕ್ಕಾಗಿ ಯಾತ್ರೆ ಸ್ಥಗಿತಗೊಳ್ಳುವವರೆಗೆ ಗಾಂಧಿ ಮತ್ತು ಅವರ ಕುಟುಂಬ ಸದಸ್ಯರು ರಾಹುಲ್ ಗಾಂಧಿಯೊಂದಿಗೆ ನಡೆದರು.
मैं आईने के सामने खड़ा हुआ और खुद से कहा- यही वक्त है जब देश को मेरी सबसे ज्यादा जरूरत है।
— Congress (@INCIndia) December 24, 2022
फिर मेरे अंदर से आवाज आई - "कमल... भारत तोड़ने की मदद मत करो, जोड़ने की मदद करो।"
- @ikamalhaasan जी#JodoJodoDilliJodo pic.twitter.com/DCYVtiEXiv
ಸೆಪ್ಟೆಂಬರ್‌ನಲ್ಲಿ ಕನ್ಯಾಕುಮಾರಿಯಿಂದ ಆರಂಭವಾದ ಯಾತ್ರೆಯಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಎರಡನೇ ಬಾರಿಗೆ ಸೇರಿಕೊಂಡಿದ್ದರು. ಈ ಹಿಂದೆ ಅಕ್ಟೋಬರ್‌ನಲ್ಲಿ ಕರ್ನಾಟಕದ ಮಂಡ್ಯದಲ್ಲಿ ನಡೆದ ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.
ಇಡೀ ಕುಟುಂಬ ಒಟ್ಟಾಗಿ ಭಾರತ್ ಜೋಡೋ ಯಾತ್ರೆಯಲ್ಲಿ ನಡೆದಿರುವುದು ಇದೇ ಮೊದಲು.
'ಈಕೆಯಿಂದ ನಾನು ಪಡೆದ ಪ್ರೀತಿಯನ್ನು ನಾನು ದೇಶದೊಂದಿಗೆ ಹಂಚಿಕೊಳ್ಳುತ್ತಿದ್ದೇನೆ' ಎಂದು ರಾಹುಲ್ ಗಾಂಧಿ ತಮ್ಮ ತಾಯಿಯೊಂದಿಗಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.

ಶನಿವಾರ ಬೆಳಗ್ಗೆ ಹರಿಯಾಣದಿಂದ ದೆಹಲಿ ಪ್ರವೇಶಿಸಿದ ಯಾತ್ರೆಗೆ ಬಾದರ್‌ಪುರ ಗಡಿಯಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಆತ್ಮೀಯ ಸ್ವಾಗತ ಕೋರಿದ್ದಾರೆ.
ಮೆರವಣಿಗೆಯು ರಾಷ್ಟ್ರ ರಾಜಧಾನಿಯ ಮೂಲಕ ಸಾಗುತ್ತಿದ್ದಂತೆ ದೆಹಲಿಯ ಕೆಲವು ಭಾಗಗಳಲ್ಲಿ ಸಂಚಾರ ದಟ್ಟಣೆ ವರದಿಯಾಗಿದೆ.












Click it and Unblock the Notifications