ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಇಡಿ ದಾಳಿ, ನನಗೆ ಮೋದಿಯ ಭಯವಿಲ್ಲ ಎಂದ ರಾಹುಲ್

|
Google Oneindia Kannada News

ನವದೆಹಲಿ, ಆ.04: "ನನಗೆ ಮೋದಿಯ ಭಯವಿಲ್ಲ. ಅವರು ಇನ್ನು ಹೆಚ್ಚು ಬ್ಯಾರಿಕೇಡ್‌ಗಳನ್ನು ಹಾಕಬಹುದು. ಸತ್ಯವನ್ನು ಕಟ್ಟಿ ಹಾಕಲು ಸಾಧ್ಯವಿಲ್ಲ" ಎಂದು ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಪ್ರಧಾನಿ ಮೋದಿ ನೇತೃತ್ವದ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ.

ಕೇಂದ್ರ ಸರಕಾರ ಏಜೆನ್ಸಿಗಳನ್ನು ಬಳಸಿಕೊಂಡು ತಮ್ಮ ಮತ್ತು ಇತರ ವಿರೋಧದ ಧ್ವನಿಗಳನ್ನು ಹತ್ತಿಕ್ಕಲು ಒತ್ತಡ ಹಾಕುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಸಂಸತ್ತಿಗೆ ಹಾಜರಾಗುವಾಗ ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಜೂನ್‌ನಲ್ಲಿ ಐದು ದಿನಗಳ ಕಾಲ ಸುಮಾರು 50 ಗಂಟೆಗಳ ಕಾಲ ರಾಹುಲ್ ಗಾಂಧಿ ಪ್ರಶ್ನಿಸಿತ್ತು. ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಅವರ ತಾಯಿ ಮತ್ತು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿಯನ್ನೂ ಇಡಿ ಪ್ರಶ್ನಿಸಿದೆ.

 I am not at all scared of Modi says Rahul Gandhi on Ed raids

"ನೀವು ನ್ಯಾಷನಲ್ ಹೆರಾಲ್ಡ್ ಬಗ್ಗೆ ಮಾತನಾಡುತ್ತಿದ್ದರೆ, ಈ ಇಡೀ ವಿಷಯವು ಬೆದರಿಕೆಗೆ ಸಂಬಂಧಿಸಿದೆ. ಸ್ವಲ್ಪ ಒತ್ತಡ ಹಾಕಿದರೆ ನಾವು ಮೌನವಾಗಿರುತ್ತೇವೆ ಎಂದು ನರೇಂದ್ರ ಮೋದಿ ಮತ್ತು ಅಮಿತ್ ಶಾ ಭಾವಿಸುತ್ತಾರೆ. ಆದರೆ ನರೇಂದ್ರ ಮೋದಿ ಮತ್ತು ಅಮಿತ್ ಶಾ ಪ್ರಜಾಪ್ರಭುತ್ವದ ವಿರುದ್ಧ ಏನೇ ಮಾಡಿದರೂ ನಾವು ಸುಮ್ಮನಿರುವುದಿಲ್ಲ" ಎಂದಿದ್ದಾರೆ.

ನ್ಯಾಷನಲ್ ಹೆರಾಲ್ಡ್‌ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿರುವ ಯಂಗ್ ಇಂಡಿಯನ್‌ನ ಕಚೇರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬೀಗ ಹಾಕಿದ್ದಾರೆ. ಈ ಬಗ್ಗೆ ಮುಂದಿನ ನಡೆಯನ್ನು ನಿರ್ಧರಿಸಲು ಇಂದು ಕಾಂಗ್ರೆಸ್ ಸಂಸದರು ಸಭೆ ನಡೆಸುತ್ತಿದ್ದಾರೆ.

 I am not at all scared of Modi says Rahul Gandhi on Ed raids

"ಓಡಲು ಜಾಗವಿಲ್ಲ" ಎಂಬ ಬಿಜೆಪಿಯ ಟೀಕೆಗೆ ಉತ್ತರಿಸಿರುವ ಅವರು, "ಓಡುವ ಬಗ್ಗೆ ಮಾತನಾಡುವವರು ಯಾರು?. ಯಾರು ಓಡುತ್ತಾರೋ ಅವರು ಮಾತನಾಡುತ್ತಾರೆ. ನಾವು ಹಾಗಲ್ಲ. ನರೇಂದ್ರ ಮೋದಿಗೆ ನಾವು ಹೆದರುವುದಿಲ್ಲ, ನೀವು ಏನು ಬೇಕಾದರೂ ಮಾಡಿ, ಪರವಾಗಿಲ್ಲ, ಪ್ರಜಾಪ್ರಭುತ್ವವನ್ನು ರಕ್ಷಿಸುವ, ದೇಶದಲ್ಲಿ ಸಾಮರಸ್ಯವನ್ನು ಕಾಪಾಡುವ ನನ್ನ ಕೆಲಸವನ್ನು ನಾನು ಮಾಡುತ್ತೇನೆ" ಎಂದು ಆಕ್ರೋಶ ಹೊರಹಾಕಿದ್ದಾರೆ.

ಜೂನ್ ಮತ್ತು ಜುಲೈನಲ್ಲಿ, ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಮತ್ತು ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್‌ನೊಂದಿಗೆ ಭಾಗಿಯಾಗಿರುವ ಕುರಿತು ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯವು ನೂರಾರು ಪ್ರಶ್ನೆಗಳನ್ನು ಕೇಳಿದೆ.

Recommended Video

ವೆಸ್ಟ್ ಇಂಡೀಸ್ ವಿರುದ್ಧ ಸೂರ್ಯ ಕುಮಾರ್ ಹೊಡೆದ ಶಾಟ್ ನೋಡಿ ಕ್ರಿಕೆಟ್ ಪ್ರೇಮಿಗಳು ಫಿದಾ*Cricket |OneIndia Kannada

ಜವಾಹರಲಾಲ್ ನೆಹರು ಅವರು ಸ್ಥಾಪಿಸಿದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ನಡೆಸುತ್ತಿರುವ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ಅನ್ನು ಯಂಗ್ ಇಂಡಿಯನ್ಸ್ ಸ್ವಾಧೀನಪಡಿಸಿಕೊಂಡಿದೆ. ಇದರಲ್ಲಿ ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂದು ಆರೋಪಿಸಲಾಗಿದ್ದು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಇತರರು ಹಣ ದುರುಪಯೋಗಪಡಿಸಿಕೊಳ್ಳಲು ಪಿತೂರಿ ನಡೆಸುತ್ತಿದ್ದಾರೆ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ದೆಹಲಿ ಹೈಕೋರ್ಟ್‌ಗೆ ಸಲ್ಲಿಸಿದ ದೂರಿನಲ್ಲಿ ಆರೋಪಿಸಿದ್ದರು.

English summary
National Herald case: 'I am not at all scared of Modi, They can put up more barricades says Congress leader Rahul Gandhi on Enforcement Directorate raids.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X