'ಹೆಚ್ಡಿಕೆ ಹೇಳುತ್ತಿರೋ ಆ ವೆಂಕಟೇಶ್ ಗೌಡ ನಾನಲ್ಲ'
ಐಟಿ ಇಲಾಖೆಗೆ ಕುಮಾರ ಸ್ವಾಮಿ ವಿರುದ್ಧ ದೂರು ನೀಡಿದ್ದು ನಾನಲ್ಲ ಎಂದು ಹೇಳಿದ ಕಾಂಗ್ರೆಸ್ ನ ಮಾಜಿ ಸದಸ್ಯ ವೆಂಕಟೇಶ್ ಗೌಡ. ಕುಮಾರ ಸ್ವಾಮಿ ಆರೋಪಕ್ಕೆ ತಿರುಗೇಟು.
ಬೆಂಗಳೂರು, ಮೇ 24: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಅವರು ಮಾಜಿರುವ ಆರೋಪಗಳಲ್ಲಿ ಹೆಸರಿಸಲಾಗಿರುವ ವೆಂಕಟೇಶ್ ಗೌಡ ನಾನಲ್ಲ ಎಂದು ಕೆಜೆಪಿ ಪಕ್ಷದ ಮಾಜಿ ನಾಯಕ ವೆಂಕಟೇಶ್ ಗೌಡ ತಿಳಿಸಿದ್ದಾರೆ.
ಬುಧವಾರ ಮಧ್ಯಾಹ್ನ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ, ''ನನ್ನ ವಿರುದ್ಧ ಆದಾಯ ತೆರಿಗೆ ಇಲಾಖೆಯಲ್ಲಿ ದೂರು ದಾಖಲಾಗಿದೆ. ಆದರೆ, ಈ ದೂರನ್ನು ಬಿಎಸ್ ವೈ ಮನೆಯಲ್ಲೇ ಸಿದ್ಧಪಡಿಸಲಾಗಿದೆ. ಈ ದೂರನ್ನು ವೆಂಕಟೇಶ್ ಗೌಡ ಎಂಬುವರು ಕೊಟ್ಟಿದ್ದಾರೆಂಬುದು ನನಗೆ ಸ್ಪಷ್ಟವಾಗಿದೆ. ನಮ್ಮ ಕುಟುಂಬವನ್ನು ಮುಗಿಸಲು ಹೂಡಲಾಗಿರುವ ಷಡ್ಯಂತ್ರವಿದು'' ಎಂದು ಆರೋಪಿಸಿದ್ದರು.

ಆದರೆ, ಈ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ವೆಂಕಟೇಶ್ ಗೌಡ, ಕುಮಾರ ಸ್ವಾಮಿ ವಿರುದ್ಧ ಕೊಂಚ ಗರಂ ಆದರು. ''ಯಾರ ಮೇಲಾದರೂ ಆಪಾದನೆ ಮಾಡುವ ಹಾಗಿದ್ದರೆ ಕೊಂಚ ಯೋಚಿಸಿ ಆಪಾದನೆ ಮಾಡಲಿ. ನಾನು ಕಾಂಗ್ರೆಸ್ ನಲ್ಲಿ ಇದ್ದಿದ್ದು ನಿಜ. ಆನಂತರ, ಕೆಜಿಪಿಯಿಂದ ಸ್ಪರ್ಧಿಸಿದ್ದೆ. ಆದರೆ, ದೂರು ನೀಡಿದ್ದು ನಾನಲ್ಲ. ಇದನ್ನು ಪರಾಮರ್ಶಿಸಿದ ನಂತರ, ಕುಮಾರ ಸ್ವಾಮಿ ಆರೋಪ ಮಾಡಲಿ'' ಎಂದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications