ರೀ ಸ್ವಾಮಿ.. ಒನ್ ನೇಷನ್, ಒನ್ ಎಲೆಕ್ಷನ್‌ನ ಅರ್ಥ ನಂಗೆ ಗೊತ್ತೇ ಇಲ್ಲ: ಕೈ ಸಂಸದ
ನವದೆಹಲಿ, ಸೆಪ್ಟೆಂಬರ್, 18: ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಂಪುಟ ಸಭೆ ನಡೆದಿದೆ. ಈ ವೇಳೆ ಒಂದು ದೇಶ, ಒಂದು ಚುನಾವಣೆ ವರದಿಗೆ ಅನುಮೋದನೆ ನೀಡಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಸಂಸದ ಸುಖಜಿಂದರ್ ಸಿಂಗ್ ರಾಂಧವಾ ಏನು ಹೇಳಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಒನ್ ನೇಷನ್, ಒನ್ ಎಲೆಕ್ಷನ್ ಕುರಿತು ಕಾಂಗ್ರೆಸ್ ಸಂಸದ ಸುಖಜಿಂದರ್ ಸಿಂಗ್ ರಾಂಧವಾ ಪ್ರತಿಕ್ರಿಯಿಸಿದ್ದು, "ಜಮ್ಮು & ಕಾಶ್ಮೀರ ಚುನಾವಣೆಯನ್ನು ಮೂರು ಹಂತಗಳಲ್ಲಿ ಆಯೋಜಿಸಲಾಗಿದೆ. ಇನ್ನು ಒಂದು ರಾಷ್ಟ್ರ, ಒಂದು ಚುನಾವಣೆಯ ಬಗ್ಗೆ ಅವರು ಮಾತನಾಡುತ್ತಿದ್ದಾರೆ, ಇದರ ಅರ್ಥವೇನೆಂದು ನನಗೆ ತಿಳಿದಿಲ್ಲ. ಎಎಪಿ ಪಕ್ಷ ಬಿಜೆಪಿಯ ಬಿ ಟೀಂ ಆಗಿದೆ ಮತ್ತು ಸಮಯ ಬಂದಾಗ ಎಲ್ಲರೂ ಒಂದಾಗುತ್ತಾರೆ. ಹರಿಯಾಣ ಮತ್ತು ಜಮ್ಮು & ಕಾಶ್ಮೀರ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ," ಎಂದು ಹೇಳಿದ್ದಾರೆ.

ಒಂದು ದೇಶ ಒಂದು ಚುನಾವಣೆ ವರದಿಗೆ ಇಂದು (ಸೆಪ್ಟೆಂಬರ್ 18) ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಏಕಕಾಲದಲ್ಲಿ ಚುನಾವಣೆ ನಡೆಸುವ ಕುರಿತು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ತನ್ನ ಸಮಗ್ರ ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಲಾಗಿತ್ತು. 8,626 ಪುಟಗಳ ಈ ವರದಿಯನ್ನು ಸಲ್ಲಿಕೆ ಮಾಡಲಾಗಿದ್ದು, ಸಮಿತಿಯು ಸುಮಾರು 7 ತಿಂಗಳ ಕಠಿಣ ಸಮಾಲೋಚನೆ ಮತ್ತು ಸಂಶೋಧನೆ ನಡೆಸಿದೆ.
ಮಾಜಿ ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ಈ ಸಮಿತಿಯನ್ನು ರಚಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ಮಾಜಿ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್, 15ನೇ ಹಣಕಾಸು ಆಯೋಗದ ಅಧ್ಯಕ್ಷ ಎನ್.ಕೆ.ಸಿಂಗ್ ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಡಾ ಸುಭಾಷ್ ಸಿ ಕಶ್ಯಪ್, ಹಿರಿಯ ವಕೀಲ ಹರೀಶ್ ಸಾಳ್ವೆ, ಮಾಜಿ ಮುಖ್ಯ ವಿಜಿಲೆನ್ಸ್ ಕಮಿಷನರ್ ಸಂಜಯ್ ಕೊಠಾರಿ ಸಮಿತಿಯ ಇತರ ಸದಸ್ಯರಾಗಿದ್ದಾರೆ.
ಇನ್ನು ಜಮ್ಮು ಮತ್ತು ಕಾಶ್ಮೀರದ ಮೊದಲ ಹಂತದ ಚುನಾವಣೆಯಲ್ಲಿ ಕಿಶ್ತ್ವಾರ್ ಕ್ಷೇತ್ರದಲ್ಲಿ 77.23% ಮತದಾನವಾಗಿದ್ದು, ಹೆಚ್ಚು ಮತದಾನವಾದ ಕ್ಷೇತ್ರ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. ದೋಡಾ ವಿಧಾನಸಭಾ ಕ್ಷೇತ್ರದಲ್ಲಿ 69.33% ಮತದಾನವಾಗಿದೆ. ರಾಂಬನ್ 67.71%. ಕುಲ್ಗಾಂನಲ್ಲಿ 59.62%, ಅನಂತನಾಗ್ 54.17%, ಶೋಪಿಯಾನ್ 53.64%, ಮತ್ತು ಪುಲ್ವಾಮಾದಲ್ಲಿ ಶೇಕಡ 43.87ರಷ್ಟು ಮತದಾನವಾಗಿದೆ.












Click it and Unblock the Notifications