Asaduddin Owaisi: ನನಗೆ 6 ಮಕ್ಕಳು, ನಿಮ್ಮನ್ನ ತಡೆದವರು ಯಾರು: ಅಸಾದುದ್ದೀನ್ ಓವೈಸಿ
Asaduddin Owaisi: ಮುಸ್ಲಿಮರು ಹೆಚ್ಚು ಮಕ್ಕಳು ಮಾಡಿಕೊಳ್ಳುತ್ತಿದ್ದಾರೆ, ಹಿಂದೂಗಳು ಸಹ ಹೆಚ್ಚು ಮಕ್ಕಳನ್ನು ಮಾಡಿಕೊಳ್ಳಬೇಕು ಎನ್ನುವ ಚರ್ಚೆ ದೇಶದಲ್ಲಿ ನಡೆಯುತ್ತಿದೆ. ಇದಕ್ಕೆ ಪ್ರಭಾವಿ ಮುಸ್ಲಿಂ ನಾಯಕ ಹಾಗೂ AIMIM ಮುಖ್ಯಸ್ಥ ಅಸಾದುದ್ದೀನ್ ಓವೈಸಿ ನನಗೆ 6 ಜನ ಮಕ್ಕಳು, ನಿಮಗೆ ಯಾರು ಮಕ್ಕಳನ್ನು ಮಾಡಿಕೊಳ್ಳಬೇಡಿ ಅಂತ ತಡೆಯುತ್ತಿದ್ದಾರೆ ಎಂದು ಬಿಜೆಪಿ ನಾಯಕಿಯನ್ನು ಪ್ರಶ್ನೆ ಮಾಡಿದ್ದಾರೆ. ಈ ಮೂಲಕ ಬಿಜೆಪಿ ನಾಯಕಿ ಮೊದಲು ಕೊಟ್ಟ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಇದೇನು ಎನ್ನುವ ವಿವರ ಇಲ್ಲಿದೆ.
ದೇಶದಲ್ಲಿ ಜನಸಂಖ್ಯೆ ವಿಚಾರವಾಗಿ ಕಳೆದ ಒಂದು ದಶಕದಿಂದಲೂ ಭಾರೀ ಚರ್ಚೆ ನಡೆದಿದೆ. ದೇಶದ ಜನಸಂಖ್ಯೆ ನಿಯಂತ್ರಿಸಬೇಕು. ಇದರಿಂದ ಮುಂದಿನ ದಿನಗಳಲ್ಲಿ ಸಮಸ್ಯೆ ಆಗಲಿದೆ ಎನ್ನುವ ಚರ್ಚೆಗಳಿಗಿಂತಲೂ ಹೆಚ್ಚಾಗಿ, ಮುಸ್ಲೀಮರು ಹೆಚ್ಚು ಮಕ್ಕಳನ್ನು ಮಾಡಿಕೊಳ್ಳುತ್ತಿದ್ದಾರೆ; ಹಿಂದೂಗಳೂ ಸಹ ಹೆಚ್ಚು ಮಕ್ಕಳನ್ನು ಮಾಡಿಕೊಳ್ಳಬೇಕು ಎನ್ನುವ ಚರ್ಚೆ ರಾಜಕೀಯ ವಲಯದಲ್ಲಿ ಶುರುವಾಗಿದೆ. ಇದೀಗ ಈ ವಿಚಾರವಾಗಿ ಮಾತನಾಡಿರುವ ಅಸಾದುದ್ದೀನ್ ಓವೈಸಿ ಅವರು ನಿಮಗೆ ಹೆಚ್ಚು ಮಕ್ಕಳನ್ನು ಮಾಡಿಕೊಳ್ಳಬೇಡಿ ಎಂದು ಹೇಳಿದವರು ಯಾರು ಎಂದು ಪ್ರಶ್ನೆ ಮಾಡಿದ್ದಾರೆ.

ಕುಟುಂಬದ ಗಾತ್ರವನ್ನು (ಜನಸಂಖ್ಯೆ) ರಾಷ್ಟ್ರೀಯ ಭದ್ರತೆಯೊಂದಿಗೆ ಜೋಡಿಸಿ ಹಿಂದೂಗಳು ಹೆಚ್ಚು ಮಕ್ಕಳನ್ನು ಹೊಂದಬೇಕೆಂದು ಎಂದು ಈಚೆಗೆ ಬಿಜೆಪಿ ನಾಯಕಿ ಹಾಗೂ ಮಾಜಿ ಸಂಸದೆ ನವನೀತ್ ರಾಣಾ ಅವರು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಅಸಾದುದ್ದೀನ್ ಓವೈಸಿ ಅವರು, ನನಗೆ ಆರು ಜನ ಮಕ್ಕಳಿದ್ದಾರೆ, ನೀವು ನಾಲ್ಕು ಮಕ್ಕಳನ್ನು ಹೊಂದುವುದನ್ನು ಯಾರು ತಡೆಯುತ್ತಿದ್ದಾರೆ ಹೇಳಿ ಎಂದು ಪ್ರಶ್ನಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ಜನರು ಪಂಚಾಯತ್ ಚುನಾವಣೆಗಳಲ್ಲಿ ಸ್ಪರ್ಧಿಸಲು ಅವಕಾಶವಿಲ್ಲ ಎಂದು ಅವರು ಗಮನಸೆಳೆದಿದ್ದಾರೆ. ತೆಲಂಗಾಣದಲ್ಲಿಯೂ ಈ ರೀತಿ ನಿಯಮವಿತ್ತು. ಆ ನಿಯಮವನ್ನು ಬದಲಾಯಿಸಲಾಗಿದೆ ಎಂದಿದ್ದಾರೆ. ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಸಮ್ಮುಖದಲ್ಲಿ ಮೂರಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದುವ ಬಗ್ಗೆ ಮಾತನಾಡಿದ್ದನ್ನು ಸಹ ಓವೈಸಿ ಅವರು ಇದೇ ಸಂದರ್ಭದಲ್ಲಿ ಉಲ್ಲೇಖಿಸಿದ್ದಾರೆ.
ನೀವೂ ಬೇಕಾದರೆ ಹೆಚ್ಚು ಮಕ್ಕಳನ್ನು ಮಾಡಿಕೊಳ್ಳಿ: ಓವೈಸಿ
ನೀವು ಸಹ ಬೇಕಾದರೆ ಹೆಚ್ಚು ಮಕ್ಕಳನ್ನು ಮಾಡಿಕೊಳ್ಳಿ ಎಂದು ಓವೈಸಿ ಹೇಳಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ಮಕ್ಕಳನ್ನು ಹೊಂದುವ ಮೂಲಕ ಹಿಂದೂಸ್ತಾನವನ್ನು ಪಾಕಿಸ್ತಾನವನ್ನಾಗಿ ಮಾಡಲು ಕೆಲವರು ಮುಂದಾಗಿದ್ದಾರೆ ಎಂದು ಬಿಜೆಪಿ ನಾಯಕಿ ರಾಣಾ ಅವರು ಮುಸ್ಲಿಂ ಸಮುದಾಯದ ಬಗ್ಗೆ ಹೇಳಿಕೆ ಕೊಟ್ಟಿದ್ದರು. ಅಲ್ಲದೇ ಹಿಂದೂಗಳು ಕನಿಷ್ಠ ಮೂರರಿಂದ ನಾಲ್ಕು ಮಕ್ಕಳಿಗೆ ಜನ್ಮ ನೀಡಬೇಕೆಂದೂ ರಾಣಾ ಹೇಳಿದ್ದರು. ಇದೀಗ ಈ ಹೇಳಿಕೆಗೆ ಓವೈಸಿ ರಿಯಾಕ್ಟ್ ಮಾಡಿದ್ದಾರೆ.
ಬಿಜೆಪಿ ನಾಯಕಿ ರಾಣಾ ಹೇಳಿದ್ದೇನು
1. ಹಿಂದೂಗಳಲ್ಲಿ ಮನವಿ ಮಾಡುತ್ತೇನೆ. ಹಿಂದೂಗಳು ಸಹ ಮೂರರಿಂದ ನಾಲ್ಕು ಮಕ್ಕಳನ್ನು ಹೆರಬೇಕು.
2. ಕೆಲವರು ನಾಲ್ಕು ಹೆಂಡತಿಯರು ಮತ್ತು 19 ಮಕ್ಕಳಿದ್ದಾರೆ ಎಂದು ಬಹಿರಂಗವಾಗಿ ಹೇಳುತ್ತಿದ್ದಾರೆ.
3. ಮೌಲಾನಾ ಅಥವಾ ಬೇರೆಯವರೋ ಎಂದು ನನಗೆ ತಿಳಿದಿಲ್ಲ. ನನಗೆ ತುಂಬಾ ಮಕ್ಕಳಿದ್ದಾರೆ ಎಂದಿದ್ದರು.
4. ಅವರು ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳಿಗೆ ಜನ್ಮ ನೀಡುವ ಮೂಲಕ ಹಿಂದೂಸ್ತಾನವನ್ನು ಪಾಕಿಸ್ತಾನವನ್ನಾಗಿ ಮಾಡಲು ಮುಂದಾಗಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications