Tirupati laddu row: ನಾನು ಮನೆಯಲ್ಲಿ ಬೈಬಲ್ ಓದುತ್ತೇನೆ, ಆದರೆ: ಜಗನ್ ಹೇಳಿದ್ದೇನು
Tirupati laddu row: ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡುವುದನ್ನು ರದ್ದುಪಡಿಸಿದ ಮೇಲೆ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ಯಾವ ಧರ್ಮವನ್ನು ಅನುಸರಿಸುತ್ತಾರೆ ಎನ್ನುವ ಬಗ್ಗೆ ಮಾತನಾಡಿದ್ದಾರೆ. ನಾನು ಎಲ್ಲ ಧರ್ಮವನ್ನು ಸಮಾನವಾಗಿ ಗೌರವಿಸುತ್ತೇನೆ ಎಂದೂ ಅವರು ಹೇಳಿದ್ದಾರೆ. ಜಗನ್ ಅವರು ಶುಕ್ರವಾರ ತಿರುಪತಿ ತಿರುಮಲ ದೇವಸ್ಥಾನಕ್ಕೆ ಶನಿವಾರ (ಸೆಪ್ಟೆಂಬರ್ 28 ರಂದು) ಭೇಟಿ ನೀಡಲು ಮುಂದಾಗಿದ್ದರು. ಆದರೆ, ಬಿಜೆಪಿ ತಿರುಪತಿಗೆ ಭೇಟಿ ನೀಡುವುಕ್ಕೂ ಮುಂಚೆ ನಿಮ್ಮ ಶ್ರದ್ಧೆ (ಯಾವ ಧರ್ಮವನ್ನು ಅನುಸರಿಸುತ್ತೀರಿ) ಎಂದು ಘೋಷಿಸಿ ಎಂದು ಸವಾಲು ಹಾಕಿತ್ತು ಇದರ ಬೆನ್ನಲ್ಲೇ ಜಗನ್ ತಿರುಪತಿ ಭೇಟಿ ರದ್ದು ಮಾಡಿದ್ದರು.
ಜಗನ್ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡುವ ವಿಚಾರವು ತೀವ್ರ ವಿರೋಧಕ್ಕೆ ಕಾರಣವಾಗಿತ್ತು. ತಿರುಪತಿಯ ಲಡ್ಡುವಿನಲ್ಲಿ ಬಳಸುವ ತುಪ್ಪದಲ್ಲಿ ಹಸುವಿನ ಕೊಬ್ಬಿನ ಅಂಶ, ಹಂದಿಯ ಕೊಬ್ಬು ಹಾಗೂ ಮೀನಿನ ಎಣ್ಣೆ ಬಳಸಲಾಗಿತ್ತು ಎನ್ನುವ ಆರೋಪ ಕೇಳಿ ಬಂದಿದ್ದು, ಇದನ್ನು ಜಗನ್ ಆಡಳಿತದಲ್ಲೇ ಮಾಡಲಾಗಿತ್ತು ಎನ್ನುವ ಆರೋಪವನ್ನು ಆಂಧ್ರದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಾಡಿದ್ದರು. ಈ ಆರೋಪದ ನಂತರ ರಾಜಕೀಯ, ಧಾರ್ಮಿಕ ಹಾಗೂ ಸಾರ್ವಜನಿಕ ವಲಯದಿಂದ ಜಗನ್ ಅವರಿಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಜಗನ್ ತಿರುಪತಿ ಭೇಟಿಯನ್ನು ಘೋಷಿಸಿದ್ದರು. ಆದರೆ, ಇದಕ್ಕೆ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು. ತಿರುಪತಿ ಭೇಟಿ ಮಾಡುವುದಕ್ಕೂ ಮುಂಚೆ ಜಗನ್‌ಮೋಹನ್ ರೆಡ್ಡಿ ಅವರು ಅವರ ಧಾರ್ಮಿಕ ಶ್ರದ್ಧೆಯನ್ನು ಬಹಿರಂಗಪಡಿಸಬೇಕು ಎನ್ನುವ ಆಗ್ರಹ ಕೇಳಿ ಬಂದಿತ್ತು. ಜಗನ್‌ಮೋಹನ್ ರೆಡ್ಡಿ ಅವರು ಕ್ರೈಸ್ತ ಧರ್ಮಕ್ಕೆ ಮತಾಂತರವಾಗಿದ್ದು, ಜಾತಿ ಸೂಚಕ ಹೆಸರನ್ನು ಬದಲಾಯಿಸಿಲ್ಲ ಎನ್ನಲಾಗಿದೆ. ಇದೇ ವಿಷಯವನ್ನು ಇಟ್ಟುಕೊಂಡು ಬಿಜೆಪಿ ಪ್ರಶ್ನೆ ಮಾಡಿತ್ತು. ಈ ಪ್ರಶ್ನೆಗಳಿಗೆ ಜಗನ್ ಉತ್ತರಿಸಿದ್ದಾರೆ.

ಮನೆಯಲ್ಲಿ ಬೈಬಲ್ ಓದುತ್ತೇನೆ: ಜಗನ್
ಧರ್ಮ ಪ್ರಶ್ನೆ ಮಾಡಿದವರಿಗೆ ತಿರುಗೇಟು ನೀಡಿರುವ ಜಗನ್ ವಿರೋಧ ಪಕ್ಷದ ನಾಯಕನಾಗಿರುವ, ಮುಖ್ಯಮಂತ್ರಿ ಸ್ಥಾನಕ್ಕೆ ಸರಿಸಮನಾಗಿರುವ ನನ್ನನ್ನು ತಿರುಪತಿ ತಿರುಮಲ ದೇವಸ್ಥಾನಕ್ಕೆ ಬಿಡುತ್ತಿಲ್ಲ. ಹಾಗಾದರೆ, ದಲಿತರನ್ನು ಇವರು ಹೇಗೆ ನಡೆಸಿಕೊಳ್ಳಬಹುದು ಎಂದು ಪ್ರಶ್ನೆ ಮಾಡಿದ್ದಾರೆ. ಮುಂದುವರಿದು ಬಹಿರಂಗವಾಗಿ ಇದೀಗ ಜಗನ್ ಅವರು ಯಾವ ಧರ್ಮವನ್ನು ಪರಿಪಾಲನೆ ಮಾಡುತ್ತಿದ್ದಾರೆ ಎನ್ನುವ ಬಗ್ಗೆ ಮಾತನಾಡಿದ್ದಾರೆ. ಅಲ್ಲದೇ ಮನೆಯಲ್ಲಿ ನಾನು ಬೈಬಲ್ ಓದಿದರೂ, ಎಲ್ಲ ಧರ್ಮವನ್ನು ಸಮಾನವಾಗಿ ಗೌರವಿಸುತ್ತೇನೆ. ನಾನು ಮಾನವೀಯ ಸಮುದಾಯಕ್ಕೆ ಸೇರಿದವನು. ಅಲ್ಲದೇ ನಾನು ಜಗತ್ತಿನ ಎಲ್ಲ ಧರ್ಮಗಳ ಬಗ್ಗೆಯೂ ಅಪಾರ ಗೌರವ ಹೊಂದಿದ್ದೇನೆ ಎಂದು ಹೇಳಿದ್ದಾರೆ.
ನನ್ನ ಜಾತಿಯ ಬಗ್ಗೆ ಹಲವರು ಪ್ರಶ್ನಿಸಿದ್ದಾರೆ. ಹೌದು, ನಾನು ಮನೆಯಲ್ಲಿ ಬೈಬಲ್ ಓದುತ್ತೇನೆ. ಆದರೆ, ಹಿಂದೂ, ಇಸ್ಲಾಂ ಹಾಗೂ ಸಿಖ್ ಧರ್ಮ ಸೇರಿದಂತೆ ಎಲ್ಲ ಧರ್ಮಗಳನ್ನೂ ನಾನು ಗೌರವಿಸುತ್ತೇನೆ. ನಾನು ಮಾನವೀಯತೆಯನ್ನು ನಂಬಿದವನು. ನಮ್ಮ ಸಂವಿಧಾನ ಹೇಳುವುದು ಸಹ ಅದೇ ಅಲ್ಲವೇ ಎಂದು ಅವರು ಪ್ರಶ್ನೆ ಮಾಡಿದ್ದಾರೆ.
ರಾಜಕೀಯ ಕೆಸರೆರಚಾಟ: ಆಂಧ್ರಪ್ರದೇಶದ ತಿರುಪತಿ ತಿರುಮಲ ದೇವಸ್ಥಾನದ ಪ್ರಸಾದವಾದ ಲಡ್ಡಿನಲ್ಲಿ ಕಲಬೆರಕೆ ತುಪ್ಪವನ್ನು ಬಳಸಲಾಗುತ್ತಿದೆ ಎನ್ನುವ ವಿಚಾರವು ಸಾಕಷ್ಟು ವಿವಾದಗಳನ್ನು ಸೃಷ್ಟಿಸಿದ್ದು, ರಾಜಕೀಯ ಕೆಸರೆರಚಾಟಕ್ಕೂ ಕಾರಣವಾಗಿದೆ. ಇದೀಗ ಈ ವಿಷಯ ಧರ್ಮ ಹಾಗೂ ಜಾತಿ ವಿಷಯದ ಹಂತಕ್ಕೂ ತಲುಪಿದೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications