Ajit Pawar: ನಾನು ಈಗಲೂ 'ಮಹಾ' ಸಿಎಂ ಆಗಲು ಹಾತೊರೆಯುತ್ತಿದ್ದೇನೆ: ಎನ್‌ಸಿಪಿ ನಾಯಕ ಅಜಿತ್ ಪವಾರ್
ಮಹಾರಾಷ್ಟ್ರದ ಶರದ್ ಪವಾರ್ ಅವರ ನಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ)ಯಲ್ಲಿ ಮತ್ತೊಮ್ಮೆ ಬಂಡಾಯ ಎದ್ದಿದ್ದು, ಸದ್ಯಕ್ಕೆ ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ. ಎನ್‌ಸಿಪಿ ಮುಖಂಡ ಹಾಗೂ ಶರದ್ ಪವಾರ್ ಅವರ ಸಹೋದರನ ಮಗ ಅಜಿತ್ ಪವಾರ್ ಸ್ವಪಕ್ಷದ ವಿರುದ್ಧವೇ ತಿರುಗಿ ಬಿದ್ದಿದ್ದಾರೆ.
2024ರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ತಾವು ಉನ್ನತ ಹುದ್ದೆಯ ಗುರಿ ಹೊಂದಿದ್ದೀರಾ ಎಂಬ ಪ್ರಶ್ನೆಗೆ ಅಜಿತ್ ಪವಾರ್, "2024 ಏಕೆ, ಈಗಲೂ ನಾನು ಮುಖ್ಯಮಂತ್ರಿಯಾಗಲು ಹಾತೊರೆಯುತ್ತಿದ್ದೇನೆ," ಎಂದು ಶುಕ್ರವಾರ ಮರಾಠಿ ಪತ್ರಿಕೆಯೊಂದಕ್ಕೆ ತಿಳಿಸಿದ್ದಾರೆ.

ಅಜಿತ್ ಪವಾರ್ ಅವರ ಭವಿಷ್ಯದ ರಾಜಕೀಯ ನಡೆಯ ಬಗ್ಗೆ ಅನುಮಾನಗಳು ಸುತ್ತುವರೆದಿದ್ದು, ಎನ್‌ಸಿಪಿಯಲ್ಲಿ ಬಿರುಕು ಮೂಡಿದೆ ಎಂಬ ವದಂತಿಗಳ ನಡುವೆ ಇಂತಹ ಸ್ಫೋಟಕ ಹೇಳಿಕೆಯೊಂದು ಹೊರಬಿದ್ದಿದೆ.
"ನಾವು ಜಾತ್ಯತೀತತೆ ಮತ್ತು ಪ್ರಗತಿಪರ ಬಗ್ಗೆ ಮಾತನಾಡುತ್ತಿದ್ದೆವು. ಆದರೆ, 2019ರಲ್ಲಿ ಕಾಂಗ್ರೆಸ್, ಎನ್‌ಸಿಪಿ ಪಕ್ಷಗಳು ಸೇರಿ ಸರ್ಕಾರ ರಚಿಸಲು ಶಿವಸೇನೆಯೊಂದಿಗೆ ಮೈತ್ರಿ ಮಾಡಿಕೊಂಡೆವು. ಶಿವಸೇನೆ ಹಿಂದುತ್ವದ ಪಕ್ಷವಾಗಿರುವುದರಿಂದ ನಾವು ಜಾತ್ಯತೀತತೆ ಪ್ರಶ್ನೆಯಿಂದಾಗಿ ಬೇರ್ಪಟ್ಟಿದ್ದೇವೆ," ಎಂದು ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿ ಬಗ್ಗೆ ಅಜಿತ್ ಪವಾರ್ ಬಹಿರಂಗಪಡಿಸಿದರು.

ಮಹಾರಾಷ್ಟ್ರದಲ್ಲಿ ಕಳೆದ ವರ್ಷ ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಗುಂಪು ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ಉರುಳಿಸಿತು. ಈ ಮೂಲಕ ಮಹಾರಾಷ್ಟ್ರದಲ್ಲಿ ರಾಜಕೀಯ ಅಸ್ಥಿರತೆಯನ್ನು ಎದುರಿಸಬೇಕಾಯಿತು. ನಂತರ ರಾಜ್ಯದಲ್ಲಿ ಸರ್ಕಾರ ರಚಿಸಲು ಏಕನಾಥ್ ಶಿಂಧೆ ಅವರ ಶಿವಸೇನೆ ಬಣ ಬಿಜೆಪಿಯೊಂದಿಗೆ ಕೈಜೋಡಿಸಿತು. ಶಿವಸೇನೆ ನಾಯಕ ಏಕನಾಥ್ ಶಿಂಧೆ ಮುಖ್ಯಮಂತ್ರಿಯಾದರೆ, ಬಿಜೆಪಿಯ ದೇವೇಂಧ್ರ ಫಡ್ನವೀಸ್ ಉಪಮುಖ್ಯಮಂತ್ರಿಯಾದರು.
ಇದೀಗ ಎನ್‌ಸಿಪಿಯಲ್ಲಿ ಬಂಡಾಯವೆದ್ದಿರುವ ಅಜಿತ್ ಪವಾರ್ ಮತ್ತು ಅವರ ನಿಷ್ಠ ಶಾಸಕರ ಗುಂಪು ಆಡಳಿತಾರೂಢ ಬಿಜಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬಹುದು ಎಂಬ ಊಹಾಪೋಹಗಳು ಹರಿದಾಡುತ್ತಿವೆ.
ಆದರೆ, ಇಂತಹ ಎಲ್ಲಾ ವದಂತಿಗಳನ್ನು ಅಜಿತ್ ಪವಾರ್ ತಳ್ಳಿ ಹಾಕಿದ್ದು, ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಾಗಲಿ ಮತ್ತು ಬಿಜೆಪಿಯೊಂದಿಗೆ ಕೈಜೋಡಿಸುವ ಕುರಿತ ವರದಿಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಹೇಳಿದ್ದಾರೆ.
ಈ ವೇಳೆ ಮುಂಬೈನಲ್ಲಿ ನಡೆದ ಎನ್‌ಸಿಪಿ ಸಭೆಯಲ್ಲಿ ಅಜಿತ್ ಪವಾರ್ ಪಾಲ್ಗೊಂಡಿರಲಿಲ್ಲ. ಎನ್‌ಸಿಪಿ ಸಭೆ ನಡೆಯುವ ಸಮಯದಲ್ಲೇ ಇತರ ಕೆಲವು ಕಾರ್ಯಕ್ರಮಗಳಿಗೆ ಹಾಜರಾಗಬೇಕಾಗಿದ್ದರಿಂದ ಸಭೆಗೆ ಹಾಜರಾಗಲು ಸಾಧ್ಯವಾಗಲಿಲ್ಲ ಎಂದು ಎನ್‌ಸಿಪಿ ನಾಯಕ ಅಜಿತ್ ಪವಾರ್ ಸ್ಪಷ್ಟಪಡಿಸಿದ್ದಾರೆ.
ಎನ್‌ಸಿಪಿ ಪಕ್ಷದ ಸಭೆಗೆ ಅಜಿತ್ ಪವಾರ್ ಹಾಜರಾಗಿಲ್ಲವೆಂದರೆ ಅವರು ಪಕ್ಷವನ್ನು ತೊರೆಯಲು ಯೋಜಿಸುತ್ತಿದ್ದಾರೆ ಎಂದರ್ಥವಲ್ಲ ಎಂದು ಎನ್‌ಸಿಪಿ ಹೇಳಿದೆ.
ಅಜಿತ್ ಪವಾರ್ ವಿಶ್ವಾಸಾರ್ಹತೆಯನ್ನು ಪ್ರಶ್ನಿಸುತ್ತಿರುವ ಎಂವಿಎ ನಾಯಕರು: ಬಿಜೆಪಿ
"ಮಹಾ ವಿಕಾಸ್ ಅಘಾಡಿ (ಎಂವಿಎ) ನಾಯಕರು ಅಜಿತ್ ಪವಾರ್ ಅವರಿಗೆ ಅವಮಾನ ಮಾಡುತ್ತಿದ್ದಾರೆ ಮತ್ತು ಅವರ ವಿಶ್ವಾಸಾರ್ಹತೆಯನ್ನು ಪ್ರಶ್ನಿಸುತ್ತಿದ್ದಾರೆ," ಎಂದು ಮಹಾರಾಷ್ಟ್ರ ಬಿಜೆಪಿ ಮುಖ್ಯಸ್ಥ ಚಂದ್ರಶೇಖರ ಬವಾಂಕುಲೆ ಶುಕ್ರವಾರ ಆರೋಪಿಸಿದ್ದಾರೆ.
"ಅಜಿತ್ ಪವಾರ್ ಅವರು 2019ರಲ್ಲಿ ದೇವೇಂದ್ರ ಫಡ್ನವಿಸ್ ಅವರೊಂದಿಗೆ ಮೈತ್ರಿ ಮಾಡಿಕೊಂಡಾಗಿನಿಂದ ಇಲ್ಲಿಯವರೆಗೆ ಅವರ ಮೇಲೆ ಪ್ರಶ್ನಾರ್ಥಕ ಚಿಹ್ನೆಗಳು ಎದ್ದಿವೆ. ಕಳೆದ ಮೂರು ತಿಂಗಳಿಂದ ಅಜಿತ್ ಪವಾರ್ ಅವರನ್ನು ತಾವು ಭೇಟಿ ಮಾಡಿಲ್ಲ ಮತ್ತು ಅಜಿತ್ ಪವಾರ್ ಸಹ ಆಡಳಿತ ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಿಲ್ಲ," ಎಂದು ಚಂದ್ರಶೇಖರ ಬಾವಂಕುಲೆ ಸ್ಪಷ್ಟಪಡಿಸಿದ್ದಾರೆ.
-
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications