ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೆದ್ದಾರಿಯಲ್ಲಿ ವಾಯುಪಡೆ ಹೆಲಿಕಾಪ್ಟರ್ ತುರ್ತು ಲ್ಯಾಂಡಿಂಗ್!

|
Google Oneindia Kannada News

ನವದೆಹಲಿ, ಜೂನ್ 26 : ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ. ಯಾವುದೇ ಅಪಾಯವಿಲ್ಲದೇ ಹೆಲಿಕಾಪ್ಟರ್ ಸುರಕ್ಷಿತವಾಗಿ ಇಳಿದಿದೆ.

Recommended Video

India China Face-Off : ಚೀನಾ ವಿಚಾರದಲ್ಲಿ ಭಾರತೀಯರಿಗೊಂದು ಸಿಹಿಸುದ್ದಿ.! | Oneindia Kannada

ಶುಕ್ರವಾರ ಮಧ್ಯಾಹ್ನ ಹರ್ಯಾಣದ ಸೋನೆಪತ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ. ವಾಯುಪಡೆಗೆ ಸೇರಿದ ಚೇತಕ್ ಹೆಲಿಕಾಪ್ಟರ್ ಇದಾಗಿದೆ. ಹಾರಾಟ ನಡೆಸುತ್ತಿದ್ದ ಹೆಲಿಕಾಪ್ಟರ್‌ನಲ್ಲಿ ದೋಷ ಕಾಣಿಸಿಕೊಂಡ ಬಳಿಕ ಭೂ ಸ್ಪರ್ಶ ಮಾಡಲಾಗಿದೆ.

ಕೆಂಪೇಗೌಡ ಏರ್‌ಪೋರ್ಟ್‌ಗೆ ಎಚ್‌ಎಎಲ್‌ನಿಂದ ಹೆಲಿ ಟ್ಯಾಕ್ಸಿ ಹಾರಲ್ಲ! ಕೆಂಪೇಗೌಡ ಏರ್‌ಪೋರ್ಟ್‌ಗೆ ಎಚ್‌ಎಎಲ್‌ನಿಂದ ಹೆಲಿ ಟ್ಯಾಕ್ಸಿ ಹಾರಲ್ಲ!

IAF Cheetah Helicopter Emergency Landing In Highway

ವಾಯುಪಡೆಯ ಅಧಿಕಾರಿಗಳು ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶ ಮಾಡಿರುವುದನ್ನು ಖಚಿತಪಡಿಸಿದ್ದಾರೆ. ಇದಕ್ಕೆ ಕಾರಣವೇನು? ಎಂದು ಪರಿಶೀಲನೆ ನಡೆಸಲಾಗುತ್ತಿದೆ. ಇಂಜಿನ್‌ನಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷದಿಂದಾಗಿ ಭೂ ಸ್ಪರ್ಶ ಮಾಡಲಾಗಿದೆ ಎಂದು ಅಂದಾಜಿಸಲಾಗಿದೆ.

ಭಾರತ-ಅಮೆರಿಕ ನಡುವೆ ಹೆಲಿಕಾಪ್ಟರ್ ಖರೀದಿ ಒಪ್ಪಂದ: ವಿಶೇಷತೆಗಳೇನು?ಭಾರತ-ಅಮೆರಿಕ ನಡುವೆ ಹೆಲಿಕಾಪ್ಟರ್ ಖರೀದಿ ಒಪ್ಪಂದ: ವಿಶೇಷತೆಗಳೇನು?

ಚೇತಕ್ ಹೆಲಿಕಾಪ್ಟರ್ ಹಾರಾಟ ನಡೆಸುವಾಗ ಪೈಲೆಟ್ ಮಾತ್ರ ಇದ್ದ ಎಂಬ ಮಾಹಿತಿ ಲಭ್ಯವಾಗಿದೆ. ದೆಹಲಿಯಿಂದ ವಾಯುಪಡೆಯ ಅಧಿಕಾರಿಗಳು ಸ್ಥಳಕ್ಕೆ ತೆರಳಿದ್ದು ಹೆಲಿಕಾಪ್ಟರ್ ಪರಿಶೀಲನೆ ನಡೆಸುತ್ತಿದ್ದಾರೆ.

ಭಾರತೀಯ ಸೇನೆಯ ಹೆಲಿಕಾಪ್ಟರ್ ಪತನ; ಇಬ್ಬರು ಪೈಲಟ್ ಸಾವು ಭಾರತೀಯ ಸೇನೆಯ ಹೆಲಿಕಾಪ್ಟರ್ ಪತನ; ಇಬ್ಬರು ಪೈಲಟ್ ಸಾವು

2020ರ ಫೆಬ್ರವರಿಯಲ್ಲಿ ಚಂಡೀಗಢದಲ್ಲಿ ಚೇತಕ್ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶ ಮಾಡಿದ ಘಟನೆ ನಡೆದಿತ್ತು. 2018ರಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದ ಇದೇ ಮಾದರಿಯ ಹೆಲಿಕಾಪ್ಟರ್ ಅರಕೋಣಂ ಐಎನ್‌ಎಸ್ ನೌಕಾನೆಲೆಯಲ್ಲಿ ಪತನಗೊಂಡಿತ್ತು.

English summary
Indian Air Force (IAF) Cheetah helicopter made an emergency landing on June 26, 2020. Helicopter landed in highway of Sonepat district Haryana.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X