Get Updates
Get notified of breaking news, exclusive insights, and must-see stories!

Rajasthan Assembly Election: ರಾಜಸ್ಥಾನದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ!

ಐಎಎನ್‌ಎಸ್-ಪೋಲ್‌ಸ್ಟ್ರಾಟ್ ಅಭಿಪ್ರಾಯ ಸಮೀಕ್ಷೆ 2023 ರ ಪ್ರಕಾರ, 2023ರ ಕೊನೆಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 97-105 ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜಸ್ಥಾನದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳುವ ನಿರೀಕ್ಷೆಯಿದೆ.

ಸೆಪ್ಟೆಂಬರ್ 1 ಮತ್ತು ಸೆಪ್ಟೆಂಬರ್ 13 ರ ನಡುವೆ ಈ ಸಮೀಕ್ಷೆ ನಡೆಸಲಾಗಿದೆ. 6,705 ಮಂದಿಯನ್ನು ಸಮೀಕ್ಷೆಗೆ ಒಳಪಡಿಸಲಾಗಿದ್ದು, ಅಭಿಪ್ರಾಯಗಳನ್ನು ಸಂಗ್ರಹಿಸಿರುವುದಾಗಿ ವರದಿಯಾಗಿದೆ.

IANS-Polstrat Opinion Poll 2023 Shows Congress Likely to Maintain Control in Rajasthan

200 ಸದಸ್ಯ ಬಲದ ರಾಜಸ್ಥಾನ ವಿಧಾನಸಭೆಯಲ್ಲಿ ಸದ್ಯ ಕಾಂಗ್ರೆಸ್ 100 ಸ್ಥಾನಗಳನ್ನು ಹೊಂದಿದೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿ 89-97 ಸ್ಥಾನಗಳನ್ನು ಪಡೆಯಲಿದೆ ಎಂದು ಅಂದಾಜಿಸಲಾಗಿದೆ.

ಕಾಂಗ್ರೆಸ್-ಬಿಜೆಪಿ ನೇರ ಹಣಾಹಣಿ

ಕಾಂಗ್ರೆಸ್ ಶೇಕಡಾ 2 ರಷ್ಟು ಸಕಾರಾತ್ಮಕ ಮತಗಳನ್ನು ಪಡೆಯುವ ಸಾಧ್ಯತೆ ಇದೆ ಮತ್ತು ಶೇಕಡಾ 41 ರಷ್ಟು ಮತಗಳನ್ನು ಪಡೆಯುವ ನಿರೀಕ್ಷೆಯಿದೆ, ಆದರೆ ಬಿಜೆಪಿ ಶೇಕಡಾ 40 ರಷ್ಟು ಮತಗಳನ್ನು ಪಡೆಯುತ್ತದೆ ಎಂದು ವರದಿಯಲ್ಲಿ ಹೇಳಲಾಗಿದೆ.

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಶೇ.37.9 ಅಂಕಗಳೊಂದಿಗೆ ಅತ್ಯಂತ ಜನಪ್ರಿಯ ಸಿಎಂ ಅಭ್ಯರ್ಥಿಯಾಗಿದ್ದು, ಬಿಜೆಪಿಯ ವಸುಂಧರಾ ರಾಜೆ ಶೇ.25.5 ಮತ್ತು ಕಾಂಗ್ರೆಸ್‌ನ ಸಚಿನ್ ಪೈಲಟ್ ಶೇ.25.4 ಅಂಕ ಗಳಿಸುವ ಮೂಲಕ ಸಿಎಂ ಸ್ಥಾನಕ್ಕೆ ರೇಸ್‌ನಲ್ಲಿದ್ದಾರೆ.

ಸಮೀಕ್ಷೆಯ ಪ್ರಕಾರ 47.8 ಪ್ರತಿಶತದಷ್ಟು ಜನರು ಗೆಹ್ಲೋಟ್ ಅವರ ಕಾರ್ಯಕ್ಷಮತೆಯನ್ನು ಉತ್ತಮವೆಂದು ರೇಟ್ ಮಾಡಿದ್ದಾರೆ.

ನಿರುದ್ಯೋಗ ರಾಜ್ಯದ ಪ್ರಮುಖ ಸಮಸ್ಯೆ ಎಂದು ಜನ ಅಭಿಪ್ರಾಯಪಟ್ಟಿದ್ದಾರೆ. ಶೇಕಡಾ 34.9 ರಷ್ಟು ಮಂದಿ ನಿರುದ್ಯೋಗ ಪ್ರಮುಖ ಸಮಸ್ಯೆ ಎಂದು ಹೇಳಿದ್ದರೆ. 19.7 ರಷ್ಟು ಮಂದಿ ವಿದ್ಯುತ್, ರಸ್ತೆಗಳ ಸಮಸ್ಯೆ ಇದೆ ಎಂದು ಹೇಳಿದ್ದಾರೆ. 13.8 ಪ್ರತಿಶತ ಜನ ರೈತರ ಸಮಸ್ಯೆಗಳು ಹೆಚ್ಚಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

2023ರ ಡಿಸೆಂಬರ್ ತಿಂಗಳಿನಲ್ಲಿ ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆ ಇದೆ. ಬಿಜೆಪಿ ಕೂಡ ಅಧಿಕಾರ ಪಡೆಯುವ ಸಮೀಪದಲ್ಲೇ ಇದ್ದು ಮುಂದಿನ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಹಲವು ಬದಲಾವಣೆಗಳಾಗುವ ಸಾಧ್ಯತೆ ಇದೆ. ಚುನಾವಣೆಯಲ್ಲಿ ಮತದಾರ ಯಾರಿಗೆ ಒಲವು ತೋರಿಸುತ್ತಾನೆ ಕಾದುನೋಡಬೇಕಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+