ಕರ್ನಾಟಕದ ಕೆಎಸ್‌ಆರ್‌ಟಿಸಿ ಸಾರಿಗೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಕ್ಕೆ ಮಹಾರಾಷ್ಟ್ರದ ಸಚಿವರಿಗೆ ಇದೆಂಥಾ ಅವಮಾನ?
ಕರ್ನಾಟದ ಕೆಎಸ್‌ಆರ್‌ಟಿಸಿ ಸಾರಿಗೆಯನ್ನು ಹೊಗಳಿದ್ದಕ್ಕೆ ಮಹಾರಾಷ್ಟ್ರ ಸರ್ಕಾರವು ಸಾರಿಗೆ ಸಚಿವರನ್ನೇ ಬದಲಾಯಿಸಿಬಿಟ್ಟಿದೆ. ಮೂರು ದಶಕಗಳಲ್ಲಿ ಮೊದಲ ಬಾರಿಗೆ ಮಹಾರಾಷ್ಟ್ರ ರಾಜ್ಯ ಸರ್ಕಾರವು ಎಂಎಸ್‌ಆರ್‌ಟಿಸಿ ನೂತನ ಮುಖ್ಯಸ್ಥರಾಗಿ ಐಎಎಸ್ ಅಧಿಕಾರಿಯೊಬ್ಬರನ್ನು ನೇಮಕ ಮಾಡಿದೆ. ಇದು ಇಲ್ಲಿನ ಸರ್ಕಾರ ಮಾಡಿದ ನಿರ್ಧಾರವಾಗಿದೆ ಎಂದು ತಿಳಿದುಬಂದಿದೆ.
ಹೊಸದಾಗಿ ನೇಮಕಗೊಂಡ ರಾಜ್ಯ ಸಾರಿಗೆ ಸಚಿವ ಪ್ರತಾಪ್ ಸರ್ ನಾಯಕ್ ಅವರು ಸಚಿವಾಲಯದ ಅಧಿಕಾರ ವಹಿಸಿಕೊಂಡು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಸೇವೆ ಮತ್ತು ದಕ್ಷತೆಯನ್ನು ಶ್ಲಾಘಿಸಿದ್ದರು. ಇದಾದ ಕೆಲವೇ ದಿನಗಳಲ್ಲಿ ಮಹಾರಾಷ್ಟ್ರ ಸಾರಿಗೆ ನಿಗಮನ ಈ ಕ್ರಮವನ್ನು ಕೈಗೊಂಡಿದೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್ ಆಡಳಿತವಿರುವ ನೆರೆಯ ರಾಜ್ಯಕ್ಕೆ ಅಂದರೆ ಕರ್ನಾಟಕಕ್ಕ ಇತ್ತೀಚೆಗಷ್ಟೇ ಭೇಟಿ ನೀಡಿದ ಸಂದರ್ಭದಲ್ಲಿ ಪ್ರತಾಪ್ ಸರ್ ನಾಯಕ್ ಅಲ್ಲಿನ ಸಾರಿಗೆಯ ಬಗ್ಗೆ ಹೊಗಳಿದ್ದರು. ಇದು ಮಹಾರಾಷ್ಟ್ರದ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯಾಗಿತ್ತು. ಅಲ್ಲದೆ ಅವರನ್ನು ವಜಾಗೊಳಿಸಲಾಗಿದೆ. ಬಳಿಕ ಗುರುವಾರ ಹೊರಡಿಸಲಾದ ರಾಜ್ಯ ಸರ್ಕಾರದ ಆದೇಶದ ಪ್ರಕಾರ, ಸಂಜಯ್ ಸೇಥಿ ಅವರನ್ನು ಎಂಎಸ್‌ಆರ್‌ಟಿಸಿಯ ನೂತನ ಮುಖ್ಯಸ್ಥರಾಗಿ ನೇಮಕ ಮಾಡಿದೆ ಎಂದು ತಿಳಿದುಬಂದಿದೆ.
ಫೆಬ್ರವರಿ 1ರಂದು ಪ್ರಾರಂಭವಾದ ಎರಡು ದಿನಗಳ ಕರ್ನಾಟಕ ಭೇಟಿ ನೀಡಿದ ಸಂದರ್ಭದಲ್ಲಿ, ಪ್ರತಾಪ್ ಸರ್ ನಾಯಕ್ ಅವರು ಇಲ್ಲಿನ ಸಾರಿಗೆ ಸಚಿವ ಡಾ.ರಾಮಲಿಂಗಾ ರೆಡ್ಡಿ ಅವರನ್ನು ಭೇಟಿಯಾದರು. ಈ ವೇಳೆ ಬೆಂಗಳೂರಿನಲ್ಲಿರುವ ಕೆಎಸ್‌ಆರ್‌ಟಿಸಿ ಪ್ರಧಾನ ಕಚೇರಿಗೆ ಪ್ರವಾಸ ಮಾಡಿ ಐಷಾರಾಮಿ ಬಸ್‌ಗಳು ಸೇರಿದಂತೆ ವಿವಿಧ ಪ್ರೀಮಿಯಂ ಸೇವೆಗಳನ್ನು ವೀಕ್ಷಣೆ ಮಾಡಿದರು.
ಖಾಸಗಿ ಬಸ್‌ಗಳಿಗೆ ಹೋಲಿಸಿದರೆ, ಕೆಎಸ್‌ಆರ್‌ಟಿಸಿ ಸುರಕ್ಷಿತ ಮತ್ತು ಸಮಯಕ್ಕೆ ಸರಿಯಾಗಿ ಸೇವೆ ನೀಡುತ್ತಿದೆ ಎಂದು ಶ್ಲಾಘಿಸಿದ್ದರು. ಕರ್ನಾಟಕ ರಾಜ್ಯ ಸಾರಿಗೆ ಸೇವೆಯ ದೀರ್ಘ-ದೂರದ ಸೇವೆ ಒದಗಿಸುವುದರಲ್ಲಿ ಜನಪ್ರಿಯವಾಗಿದೆ. ಮಹಾರಾಷ್ಟ್ರದಲ್ಲೂ ಇದೇ ರೀತಿಯ ಪ್ರಯೋಗ ಮಾಡಬೇಕಿದೆ ಎಂದು ಹೇಳಿದ್ದರು.
ಇನ್ನು ಈ ಹುದ್ದೆಗೆ ಐಎಎಸ್ ಅಧಿಕಾರಿಯೊಬ್ಬರು ನೇಮಕಗೊಂಡಿರುವುದು ಇದೇ ಮೊದಲೇನಲ್ಲ. 1991ರಲ್ಲಿಯೂ ಐಎಎಸ್ ಅಧಿಕಾರಿ ಎಂ.ಕೆ.ಹಮೀದ್ ಈ ಹುದ್ದೆಯನ್ನು ಅಲಂಕರಿಸಿದ್ದರು. ಈ ಹುದ್ದೆಯನ್ನು ತಾತ್ಕಾಲಿಕವೆಂದು ಪರಿಗಣಿಸಲಾಗಿದ್ದು, ಯಾವುದೇ ನಿಗದಿತ ಅವಧಿ ಇಲ್ಲ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೇತೃತ್ವದ ಹೊಸ ಸಂಪುಟದಲ್ಲಿ ಸೇರ್ಪಡೆಗೊಂಡ ನಂತರ ರಾಜೀನಾಮೆ ನೀಡಿದ ಶಿಂಧೆ ಬಣದೊಂದಿಗೆ ಹೊಂದಾಣಿಕೆ ಮಾಡಿಕೊಂಡ ಶಿವಸೇನಾ ಶಾಸಕ ಭರತ್ ಗೊಗವಾಲೆ ಅವರ ಸ್ಥಾನವನ್ನು ಸೇಥಿ ವಹಿಸಿಕೊಂಡಿದ್ದಾರೆ.
ಎಂಎಸ್‌ಆರ್‌ಟಿಸಿ ಸುಮಾರು 14,000 ಬಸ್‌ಗಳನ್ನು ನಿರ್ವಹಿಸುತ್ತಿದ್ದು, ಪ್ರತಿದಿನ ಸುಮಾರು 55 ಲಕ್ಷ ಪ್ರಯಾಣಿಕರು ಪ್ರಮಾಣ ಮಾಡುತ್ತಿದ್ದಾರೆ ಮತ್ತು ಸುಮಾರು 90,000 ಜನರಿಗೆ ಉದ್ಯೋಗ ನೀಡಿದೆ. ಇತ್ತೀಚಿನ ವರ್ಷಗಳಲ್ಲಿ, ಈ ನಿಗಮವು ಆರ್ಥಿಕ ನಷ್ಟ, ಉದ್ಯೋಗಿಗಳ ಮುಷ್ಕರಗಳು ಮತ್ತು ಪ್ರಯಾಣಿಕರ ಸಂಖ್ಯೆಯಲ್ಲಿನ ಕುಸಿತ ಸೇರಿದಂತೆ ಹಲವು ಸವಾಲುಗಳನ್ನು ಎದುರಿಸಿದೆ. ಈ ಕೆಲವು ಸಮಸ್ಯೆಗಳನ್ನು ಪರಿಹರಿಸಲು, ದೈನಂದಿನ ಆರ್ಥಿಕ ನಷ್ಟವನ್ನು ಸರಿದೂಗಿಸುವ ನಿಟ್ಟಿನಲ್ಲಿ ಕಳೆದ ತಿಂಗಳು ಶೇಕಡಾ 14.95ರಷ್ಟು ಶುಲ್ಕ ಹೆಚ್ಚಳ ಮಾಡಲಾಗಿದೆ ಎಂದು ತಿಳಿದುಬಂದಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ












Click it and Unblock the Notifications