ಕೊರೊನಾ ಸೋಂಕು ಹೆಚ್ಚಳ: ಐಸಿಎಸ್‌ಇ 10, 12ನೇ ತರಗತಿ ಪರೀಕ್ಷೆ ಮುಂದೂಡಿಕೆ

ನವದೆಹಲಿ, ಏಪ್ರಿಲ್ 16: ದೇಶಾದ್ಯಂತ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಐಸಿಎಸ್‌ಇ 10 ಹಾಗೂ 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಈ ವಾರದ ಆರಂಭದಲ್ಲಿ, ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ತನ್ನ 10 ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಿ 12 ನೇ ತರಗತಿ ಪರೀಕ್ಷೆಯನ್ನು ಮುಂದೂಡಿದೆ. ಹಲವಾರು ರಾಜ್ಯ ಮಂಡಳಿಗಳು ಕೂಡಾ ಪರೀಕ್ಷೆಗಳನ್ನು ಮುಂದೂಡಿವೆ ಅಥವಾ ರದ್ದುಗೊಳಿಸಿವೆ.

ಕೊರೊನಾ ಪ್ರಕರಣಗಳು ರಾಷ್ಟ್ರವ್ಯಾಪಿ ಉಲ್ಬಣಗೊಂಡ ಹಿನ್ನೆಲೆಯಲ್ಲಿ, ಮೇ 4 ರಿಂದ ನಡೆಯಬೇಕಿದ್ದ 10 ಮತ್ತು 12 ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಪರೀಕ್ಷೆಗಳ ಮುಖ್ಯ ಕಾರ್ಯನಿರ್ವಾಹಕ ಮತ್ತು ಕಾರ್ಯದರ್ಶಿ ಗೆರ್ರಿ ಅರಾಥೂನ್ ಹೇಳಿದ್ದಾರೆ.

 ICSE Class 10, 12 Exams Postponed Amid COVID-19 Surge

12ನೇ ತರಗತಿ ಪರೀಕ್ಷೆಗಳನ್ನು ನಂತರದ ಹಂತದಲ್ಲಿ ನಡೆಸಲಾಗುವುದು, 10ನೇ ತರಗತಿಯ ವಿದ್ಯಾರ್ಥಿಗಳು ತದನಂತರ ಆಫ್‌ಲೈನ್ ಪರೀಕ್ಷೆಗಳಲ್ಲಿ ಹಾಜರಾಗಲು ಅಥವಾ ಮಂಡಳಿಯಿಂದ ಅಭಿವೃದ್ಧಿಪಡಿಸಿದ ನ್ಯಾಯಯುತ ಮತ್ತು ಪಕ್ಷಪಾತವಿಲ್ಲದ ಮಾನದಂಡಗಳ ಆಧಾರದ ಮೇಲೆ ಮೌಲ್ಯಮಾಪನ ಪಡೆಯುವ ಆಯ್ಕೆಯನ್ನು ಪಡೆಯುತ್ತಾರೆ ಎಂದು ಅರಾಥೂನ್ ಹೇಳಿದರು.

ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತೇವೆ ಮತ್ತು ಜೂನ್ ಮೊದಲ ವಾರದಲ್ಲಿ ಪರಿಶೀಲನೆ ನಡೆಸಿ, ಪರೀಕ್ಷೆ ನಡೆಸುವ ಸಂಬಂಧ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+