ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ಸೋಂಕು ಹೆಚ್ಚಳ: ಐಸಿಎಸ್‌ಇ 10ನೇ ತರಗತಿ ಪರೀಕ್ಷೆ ರದ್ದು

|
Google Oneindia Kannada News

ನವದೆಹಲಿ, ಏಪ್ರಿಲ್ 20: ಕೊರೊನಾ ಸೋಂಕು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್(ಐಸಿಎಸ್‌ಇ) 10ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ.

ಇನ್ನು ಐಸಿಎಸ್‌ಇ 12ನೇ ತರಗತಿ ಪರೀಕ್ಷೆ ಈ ಹಿಂದಿನ ಆದೇಶದಂತೆ ನಡೆಯಲಿದ್ದು, ಪರೀಕ್ಷೆಯ ಹೊಸ ವೇಳಾಪಟ್ಟಿಯನ್ನು ಶೀಘ್ರವೇ ಪ್ರಕಟಿಸಲಾಗುತ್ತದೆ ಎಂದು ತಿಳಿಸಲಾಗಿದೆ.

ಕೊರೊನಾ ಸೋಂಕು ಹೆಚ್ಚಳ: ಐಸಿಎಸ್‌ಇ 10, 12ನೇ ತರಗತಿ ಪರೀಕ್ಷೆ ಮುಂದೂಡಿಕೆಕೊರೊನಾ ಸೋಂಕು ಹೆಚ್ಚಳ: ಐಸಿಎಸ್‌ಇ 10, 12ನೇ ತರಗತಿ ಪರೀಕ್ಷೆ ಮುಂದೂಡಿಕೆ

ಕಳೆದ ಮೂರು ದಿನಗಳ ಹಿಂದಷ್ಟೇ ಐಸಿಎಸ್‌ಇ 10 ಹಾಗೂ 12ನೇ ತರಗತಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಇದೀಗ ಹತ್ತನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ.

ICSE Class 10 Exams Cancelled Amid Spiralling Covid-19 Cases

ಈ ವಾರದ ಆರಂಭದಲ್ಲಿ, ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ತನ್ನ 10 ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಿ 12 ನೇ ತರಗತಿ ಪರೀಕ್ಷೆಯನ್ನು ಮುಂದೂಡಿದೆ. ಹಲವಾರು ರಾಜ್ಯ ಮಂಡಳಿಗಳು ಕೂಡಾ ಪರೀಕ್ಷೆಗಳನ್ನು ಮುಂದೂಡಿವೆ ಅಥವಾ ರದ್ದುಗೊಳಿಸಿವೆ.

ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತೇವೆ ಮತ್ತು ಜೂನ್ ಮೊದಲ ವಾರದಲ್ಲಿ ಪರಿಶೀಲನೆ ನಡೆಸಿ, ಪರೀಕ್ಷೆ ನಡೆಸುವ ಸಂಬಂಧ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

12ನೇ ತರಗತಿ ಪರೀಕ್ಷೆಗಳನ್ನು ನಂತರದ ಹಂತದಲ್ಲಿ ನಡೆಸಲಾಗುವುದು, 10ನೇ ತರಗತಿಯ ವಿದ್ಯಾರ್ಥಿಗಳು ತದನಂತರ ಆಫ್‌ಲೈನ್ ಪರೀಕ್ಷೆಗಳಲ್ಲಿ ಹಾಜರಾಗಲು ಅಥವಾ ಮಂಡಳಿಯಿಂದ ಅಭಿವೃದ್ಧಿಪಡಿಸಿದ ನ್ಯಾಯಯುತ ಮತ್ತು ಪಕ್ಷಪಾತವಿಲ್ಲದ ಮಾನದಂಡಗಳ ಆಧಾರದ ಮೇಲೆ ಮೌಲ್ಯಮಾಪನ ಪಡೆಯುವ ಆಯ್ಕೆಯನ್ನು ಪಡೆಯುತ್ತಾರೆ ಎಂದು ಹೇಳಲಾಗಿತ್ತು. ಇದೀಗ 12ನೇ ತರಗತಿ ಪರೀಕ್ಷೆ ಮಾತ್ರ ನಡೆಯಲಿದೆ ಎಂದು ತಿಳಿಸಿದ್ದಾರೆ.

English summary
The Council for the Indian School Certificate Examinations (CICSE) cancelled the board examinations for Class 10 amid the worsening Covid-19 situation in India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X