ರಾಮಕೃಷ್ಣ ಮಿಷನ್ ಗೆ ಐಡಿಬಿಐ ಬ್ಯಾಂಕ್ ನಿಂದ ದೇಣಿಗೆ
ಮುಂಬೈ, ನ.11 : ಶಿಕ್ಷಣ ಕ್ಷೇತ್ರದಲ್ಲಿ ಸಾಮಾಜಿಕವಾಗಿ ತೊಡಗಿಕೊಂಡಿರುವ ರಾಮಕೃಷ್ಣ ಮಿಷನ್ ಗೆ ಐಡಿಬಿಐ ಬ್ಯಾಂಕ್ 5 ಕೋಟಿ ರೂ. ದೇಣಿಗೆ ನೀಡಿದೆ. 'ಐಡಿಬಿಐ ಬ್ಯಾಂಕ್ ಗೋಲ್ಡನ್ ಜ್ಯುಬ್ಲಿ ಸ್ಕಾಲರ್ ಶಿಪ್ ಫಂಡ್' ಎಂಬ ಹೆಸರಿನಲ್ಲಿ ದೇಣಿಗೆ ವಿನಿಯೋಗವಾಗಲಿದೆ.
ಐಡಿಬಿಐ ಬ್ಯಾಂಕ್ ಅಧ್ಯಕ್ಷ ಎಂ.ಎಸ್.ರಾಘವನ್ ದೇಣಿಗೆ ಚೆಕ್ ನ್ನು ನವೆಂಬರ್ 3 ರಂದು ಸಂಸ್ಥೆಯ ಸ್ವಾಮಿ ಬೋಧಸಾರಾನಂದ ಅವರಿಗೆ ಹಸ್ತಾಂತರ ಮಾಡಿದರು. ಈ ದೇಣಿಗೆ ಹಣವನ್ನು ಫಿಕ್ಸೆಡ್ ಡಿಪಾಸಿಟ್ ರೀತಿಯಲ್ಲಿ ಇಡಲಾಗುವುದು. ಬರುವ ಬಡ್ಡಿಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನೀಡಲಾಗುವುದು.[ಕಾಮುಕರಿಂದ ಮಕ್ಕಳ ರಕ್ಷಿಸಲು ಲಾವಣ್ಯ ಹೋರಾಟ]

5 ಮತ್ತು 9 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸಮಾಜದ ಕೆಳ ವರ್ಗದಿಂದ ಬಂದ ಮಕ್ಕಳನ್ನು ಗುರುತಿಸಿ ವೇತನ ನೀಡಲಾಗುವುದು ದೇಶದ ಮೂಲೆ ಮೂಲೆಯಲ್ಲಿರುವ ಸಂಸ್ಥೆಯ ಯಾವುದೇ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಇದಕ್ಕೆ ಅರ್ಹನಾಗುತ್ತಾನೆ ಎಂದು ಸ್ವಾಮೀಜಿ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಐಡಿಬಿಐ ಬ್ಯಾಂಕ್ ಕಾರ್ಯನಿರ್ವಾಹಕ ನಿರ್ದೇಶಕ ವಿನಯ್ ಕುಮಾರ್, ಆರ್.ವಿ.ಅಯ್ಯರ್ ಮತ್ತಿತರರು ಹಾಜರಿದ್ದರು.
-
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
ಇಂದಿನಿಂದ SSLC ಪರೀಕ್ಷೆ: 8.66 ಲಕ್ಷ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಶುಭಹಾರೈಕೆ; ಆತಂಕಬೇಡ ಎಂದ ಸರ್ಕಾರ -
ಉನ್ನತ ಶಿಕ್ಷಣದಲ್ಲಿ 'ಕೇಂದ್ರೀಕರಣ'ದ ಆತಂಕ: ಉದ್ದೇಶಿತ VBSA ಮಸೂದೆ 2025ರ ವಿರುದ್ಧ ಜೈರಾಮ್ ರಮೇಶ್ ವಾಗ್ದಾಳಿ -
ಶಾಲಾ ಶಿಕ್ಷಣದಲ್ಲಿ ಮಹತ್ವದ ಬದಲಾವಣೆ: 1-8ನೇ ತರಗತಿಗೆ ಹೊಸ ಪಠ್ಯಪುಸ್ತಕ ಬಿಡುಗಡೆ ಮಾಡಿದ NCERT -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ?












Click it and Unblock the Notifications