ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಕ್ಕಳಿಗೆ ಕೊರೊನಾವೈರಸ್ ಅಂಟಿದರೆ ಮುಂದೇನು ಕಥೆ?: ಇಲ್ಲಿದೆ ತಜ್ಞರ ಎಚ್ಚರಿಕೆ

|
Google Oneindia Kannada News

ನವದೆಹಲಿ, ಸಪ್ಟೆಂಬರ್ 16: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹರಡುವಿಕೆ ಹೆಚ್ಚುತ್ತಿರುವುದರ ನಡುವೆ ಸೋಂಕಿನ ಲಕ್ಷಣಗಳು ಮಕ್ಕಳಲ್ಲಿ ಗೋಚರಿಸದಿದ್ದರೆ ಯಾವುದೇ ರೀತಿ ಆತಂಕಗೊಳ್ಳುವ ಅಗತ್ಯವಿಲ್ಲ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಕೇರಳ, ಮೀಜೋರಾಂಗಳಲ್ಲಿ 10 ವರ್ಷದೊಳಗಿನ ಮಕ್ಕಳಿಗೆ ಹೆಚ್ಚು ಸೋಂಕು ಕಾಣಿಸಿಕೊಳ್ಳುತ್ತಿರುವದರ ನಡುವೆ ತಜ್ಞರು ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಅದಾಗ್ಯೂ, ಸೋಂಕಿನ ಲಕ್ಷಣಗಳು ಹೆಚ್ಚಾದ ಮಕ್ಕಳನ್ನು ಆಸ್ಪತ್ರೆಗೆ ಸೇರಿಸುವುದು ಮತ್ತು ಅದಕ್ಕಾಗಿ ಆಸ್ಪತ್ರೆಗಳಲ್ಲಿ ತಕ್ಕದಾದ ವೈದ್ಯಕೀಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.

ಮೂರನೇ ಅಲೆ ಎಚ್ಚರಿಕೆ ನಡುವೆ ಮಕ್ಕಳಲ್ಲಿ ಕ್ರಮೇಣ ಕೊರೊನಾ ಹೆಚ್ಚಳಮೂರನೇ ಅಲೆ ಎಚ್ಚರಿಕೆ ನಡುವೆ ಮಕ್ಕಳಲ್ಲಿ ಕ್ರಮೇಣ ಕೊರೊನಾ ಹೆಚ್ಚಳ

ಕಳೆದ ಮಾರ್ಚ್ ತಿಂಗಳಿನಿಂದ ಈಚೆಗೆ 10 ವರ್ಷದೊಳಗಿನ ಮಕ್ಕಳಲ್ಲಿ ಅತಿಹೆಚ್ಚು ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಖಾತ್ರಿಯಾಗುತ್ತಿದೆ. ಮಿಜೋರಾಂ, ಮೇಘಾಲಯ, ಮಣಿಪುರ ಮತ್ತು ಕೇರಳಗಳಲ್ಲಿ ಮಕ್ಕಳಿಗೆ ಅತಿಹೆಚ್ಚು ಕೊರೊನಾವೈರಸ್ ಸೋಂಕು ತಗುಲಿರುವುುದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ.

ಒಂದೇ ದಿನ 300 ಮಕ್ಕಳಿಗೆ ಕೊವಿಡ್-19 ಸೋಂಕು

ಒಂದೇ ದಿನ 300 ಮಕ್ಕಳಿಗೆ ಕೊವಿಡ್-19 ಸೋಂಕು

ಕಳೆದ ಮಂಗಳವಾರ ಒಂದೇ ದಿನ ಮೀಜೋರಾಂನಲ್ಲಿ ಅತಿಹೆಚ್ಚು ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. 24 ಗಂಟೆಗಳಲ್ಲಿ 1502 ಮಂದಿಗೆ ಕೊವಿಡ್-19 ಸೋಂಕು ತಗುಲಿದ್ದು, ಈ ಪೈಕಿ 300 ಮಕ್ಕಳಿಗೆ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 72,883ಕ್ಕೆ ಏರಿಕೆಯಾಗಿದೆ.

ಕೊರೊನಾವೈರಸ್ ಬಗ್ಗೆ ಪೋಷಕರು ಆತಂಕಪಡುವ ಅಗತ್ಯವಿಲ್ಲ

ಕೊರೊನಾವೈರಸ್ ಬಗ್ಗೆ ಪೋಷಕರು ಆತಂಕಪಡುವ ಅಗತ್ಯವಿಲ್ಲ

"ಒಂದು ವೇಳೆ ಮಕ್ಕಳಿಗೆ ಕೊರೊನಾವೈರಸ್ ಸೋಂಕು ತಗುಲಿದ್ದು, ಸೋಂಕಿನ ಲಕ್ಷಣಗಳು ಗೋಚರಿಸದಿದ್ದರೆ ಪೋಷಕರು ಯಾವುದೇ ಕಾರಣಕ್ಕೂ ಆತಂಕಗೊಳ್ಳುವ ಅಗತ್ಯವಿಲ್ಲ. ಏಕೆಂದರೆ ಸೆರೋ ಸಮೀಕ್ಷೆಗಳ ಪ್ರಕಾರ, ಮಕ್ಕಳಲ್ಲಿಯೂ ಸಹ ಕೊವಿಡ್-19 ಸೋಂಕಿನ ಲಕ್ಷಣಗಳಿದ್ದಲ್ಲಿ ಮಾತ್ರ ಹೆಚ್ಚು ಪರಿಣಾಮ ಬೀರುತ್ತದೆ," ಎಂದು ತಾಂತ್ರಿಕ ಸಲಹಾ ಸಮಿತಿ ಸದಸ್ಯ ಡಾ. ಎನ್ ಕೆ ಅರೋರಾ ಹೇಳಿದ್ದಾರೆ. ಅಲ್ಲದೇ ಮಕ್ಕಳಲ್ಲಿ ಸೋಂಕಿನ ಲಕ್ಷಣಗಳ ಪ್ರಮಾಣ ಕಡಿಮೆಯಾಗಿದ್ದಲ್ಲಿ ತೀವ್ರ ಸೋಂಕಿನ ಅಪಾಯ ಇರುವುದಿಲ್ಲ ಎಂದು ಹೇಳಿದ್ದಾರೆ.

ಕೊರೊನಾವೈರಸ್ ಸೋಂಕಿನ ಸೌಮ್ಯ ಲಕ್ಷಣದ ಉಲ್ಲೇಖ

ಕೊರೊನಾವೈರಸ್ ಸೋಂಕಿನ ಸೌಮ್ಯ ಲಕ್ಷಣದ ಉಲ್ಲೇಖ

"ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ಪ್ರಕರಣಗಳು ಇಳಿಮುಖವಾಗುತ್ತಿದ್ದಂತೆ ಪೋಷಕರು ತಮ್ಮ ಮಕ್ಕಳೊಂದಿಗೆ ಪ್ರವಾಸಕ್ಕೆ ಹೋಗುತ್ತಿದ್ದಾರೆ. ಅದರ ಪರಿಣಾಮದಿಂದಾಗಿಯೇ ಕೊವಿಡ್-19 ಸೋಂಕಿತ ಪ್ರಕರಣಗಳು ಮಕ್ಕಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ," ಎಂದು ಏಮ್ಸ್ ನಿರ್ದೇಶಕ ಡಾ. ರಂದೀಪ್ ಗುಲೇರಿಯಾ ಹೇಳಿದ್ದಾರೆ. "ಆದರೆ ಕೊವಿಡ್-19 ಸೋಂಕಿನಿಂದ ಹೆಚ್ಚಿನ ಮಕ್ಕಳು ಆಸ್ಪತ್ರೆಗೆ ದಾಖಲಾಗುತ್ತಾರೆ ಅಥವಾ ಮೃತಪಡುತ್ತಾರೆ ಎಂದು ಹೇಳುವುದಕ್ಕೆ ಆಗುವುದಿಲ್ಲ. ಬಹುಪಾಲು ಮಕ್ಕಳಲ್ಲಿ ಸೋಂಕಿನ ಲಕ್ಷಣಗಳೇ ಇರುವುದಿಲ್ಲ, ಇನ್ನು ಕೆಲವರಲ್ಲಿ ಸೌಮ್ಯ ಲಕ್ಷಣಗಳನ್ನು ಹೊಂದಿರುತ್ತಾರೆ. ಆದ್ದರಿಂದ ಸೋಂಕಿನ ಸಂಖ್ಯೆ ಹೆಚ್ಚಳವಾಗುವುದು ದೊಡ್ಡ ಎಚ್ಚರಿಕೆ ಗಂಟೆಯೂ ಆಗಿರುವುದಿಲ್ಲ. ಅದಾಗ್ಯೂ, ಮಕ್ಕಳ ಚಿಕಿತ್ಸೆಗೆ ಅಗತ್ಯವಿರುವ ವೈದ್ಯಕೀಯ ಸೌಲಭ್ಯಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕಾದ ಅನಿವಾರ್ಯತೆಯಿದೆ," ಎಂದಿದ್ದಾರೆ.

ಕಳೆದೊಂದು ದಿನದಲ್ಲಿ 30,570 ಮಂದಿಗೆ ಕೊವಿಡ್-19

ಕಳೆದೊಂದು ದಿನದಲ್ಲಿ 30,570 ಮಂದಿಗೆ ಕೊವಿಡ್-19

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 30,570 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 38,303 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಇದೇ ಅವಧಿಯಲ್ಲಿ 431 ಜನರು ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಬುಧವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3,33,47,325ಕ್ಕೆ ಏರಿಕೆಯಾಗಿದೆ. ಇದುವರೆಗೂ 3,25,60,474 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ ಬಲಿಯಾದವರ ಸಂಖ್ಯೆ 4,43,928ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ದೇಶದಲ್ಲಿ 3,42,923 ಸಕ್ರಿಯ ಪ್ರಕರಣಗಳು ವರದಿಯಾಗಿವೆ.

English summary
If Children Contract Coronavirus, But Are Asymptomatic, It Shouldn't Be Matter Of Concern: Experts.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X