Assembly Election 2023: ಅರವಿಂದ್ ಕೇಜ್ರಿವಾಲ್ ಬಂಧನವಾದರೆ ಮುಂದೇನು?

ದೆಹಲಿ ನವೆಂಬರ್ 2: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಪ್ರಶ್ನಿಸಲು ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ನೀಡಿದ ನಂತರ ಬಂಧನದ ಕತ್ತಿ ಅವರ ತಲೆಯ ಮೇಲೆ ತೂಗಾಡುತ್ತಿದೆ. ಪಂಚರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ದಿನಾಂಕ ಹತ್ತಿರವಾಗುತ್ತಿದ್ದಂತೆ ಆಪ್‌ ನಾಯಕರನ್ನು ಬಿಜೆಪಿ ಬಂಧಿಸುವ ಸಂಚು ರೂಪಿಸುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಈ ನಡುವೆ ಒಂದು ವೇಳೆ ಅರವಿಂದ್ ಕೇಜ್ರಿವಾಲ್ ಬಂಧನವಾದರೆ ಮುಂದೇನು? ಎನ್ನುವ ಪ್ರಶ್ನೆ ಎಲ್ಲರಲ್ಲೂ ಹುಟ್ಟಿಕೊಂಡಿದೆ. ಇಡಿ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರಿಗೆ ನವೆಂಬರ್ 2ರಂದು ಹಾಜರಾಗುವಂತೆ ನೋಟಿಸ್ ಕಳುಹಿಸಿತ್ತು. ಆದರೆ ಅರವಿಂದ್ ಕೇಜ್ರಿವಾಲ್ ಅವರು ಇಡಿ ಸಮನ್ಸ್ ಕಾನೂನುಬಾಹಿರ ಮತ್ತು ರಾಜಕೀಯ ಪ್ರೇರಿತ ಎಂದು ಆರೋಪಿಸಿ ವಿಚಾರಣೆಗೆ ಹಾಜರಾಗಿಲ್ಲ.

If Kejriwal Is Arrested? Will He Remain CM Or Appoint Someone Else? Decode AAPs Options

ಮಾಹಿತಿ ಪ್ರಕಾರ, ಅರವಿಂದ್ ಕೇಜ್ರಿವಾಲ್ ಇಂದು ಇಡಿ ಮುಂದೆ ಹಾಜರಾಗುವುದಿಲ್ಲ. ಅವರು ಇಂದು ಮಧ್ಯಪ್ರದೇಶದ ಸಿಂಗ್ರೌಲಿಯಲ್ಲಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ಅವರೊಂದಿಗೆ ರೋಡ್ ಶೋ ನಡೆಸಲಿದ್ದಾರೆ. ಭಾರತೀಯ ಜನತಾ ಪಕ್ಷವನ್ನು ಗುರಿಯಾಗಿಸಿ ಅರವಿಂದ್ ಕೇಜ್ರಿವಾಲ್ ಅವರು ಬಿಜೆಪಿಯ ಸೂಚನೆಯ ಮೇರೆಗೆ ಇಡಿ ಈ ನೋಟಿಸ್ ಕಳುಹಿಸಿದೆ ಎಂದು ಹೇಳಿದ್ದರು. ಮುಂಬರುವ ನಾಲ್ಕು ರಾಜ್ಯಗಳಲ್ಲಿ ನಾನು ಪ್ರಚಾರ ಮಾಡಲು ಅಡಚಣೆಯಾಗಲೆಂದೇ ಈ ನೋಟಿಸ್ ಕಳುಹಿಸಲಾಗಿದೆ ಎಂದು ಅವರು ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಅರವಿಂದ್ ಕೇಜ್ರಿವಾಲ್ ಇಂದು ಬೆಳಗ್ಗೆ 11 ಗಂಟೆಗೆ ಇಡಿ ಮುಂದೆ ಹಾಜರಾಗಬೇಕಿತ್ತು. ಆದರೆ ಕೇಜ್ರಿವಾಲ್ ಅವರು ಈ ಸಮನ್ಸ್ ಅನ್ನು ಕಾನೂನುಬಾಹಿರ ಎಂದು ದೂರಿದ್ದಾರೆ. ತಕ್ಷಣವೇ ಜಾರಿಗೆ ಬರುವಂತೆ ಅದನ್ನು ಹಿಂಪಡೆಯುವಂತೆ ಕೇಳಿದ್ದಾರೆ. ಇಡಿ ಮತ್ತೆ ಕೇಜ್ರಿವಾಲ್‌ಗೆ ನೋಟಿಸ್‌ ನೀಡಬಹುದು ಎಂದು ಹೇಳಿದ್ದಾರೆ. ಇಡಿ ನೋಟಿಸ್‌ಗೆ ಆಮ್ ಆದ್ಮಿ ಪಕ್ಷ ತೀವ್ರವಾಗಿ ಪ್ರತಿದಾಳಿ ನಡೆಸಿದೆ. ಇಡಿ ಕೇಜ್ವಿವಾಲ್ ಅವರನ್ನು ಬಂಧಿಸಲು ಬಯಸುತ್ತದೆ ಎಂದು ಹೇಳಿದೆ.

ಅರವಿಂದ್ ಕೇಜ್ರಿವಾಲ್ ಅವರ ಉತ್ತರಕ್ಕೆ ಭಾರತೀಯ ಜನತಾ ಪಕ್ಷ, ಆಮ್ ಆದ್ಮಿ ಪಕ್ಷ ಭ್ರಷ್ಟಾಚಾರದಲ್ಲಿ ತೊಡಗಿದೆ. ಆದ್ದರಿಂದ ಪಕ್ಷದ ಉನ್ನತ ನಾಯಕರು ತನಿಖಾ ಸಂಸ್ಥೆ ಮತ್ತು ನ್ಯಾಯಾಲಯಕ್ಕೆ ಉತ್ತರಿಸಬೇಕು ಎಂದು ತಿರುಗೇಟು ನೀಡಿದೆ.

ಆದರೆ ಯಾವುದೇ ನಿಯಮ ಮತ್ತು ಕಾನೂನುಗಳಿಲ್ಲದೆ ಇಡಿ ಕ್ರಮ ಕೈಗೊಳ್ಳುತ್ತಿದೆ ಎಂದು ದೆಹಲಿ ಸಚಿವ ಸೌರಭ್ ಭಾರದ್ವಾಜ್ ಹೇಳಿದ್ದಾರೆ. ಅವರು ಯಾರನ್ನಾದರೂ ಕರೆಯಬಹುದು. ಆದರೆ ಭಾರತೀಯ ಜನತಾ ಪಕ್ಷದ ನಾಯಕರ ಮೇಲೆ ಇಡಿ ದಾಳಿ ನಡೆಸುತ್ತಿಲ್ಲ ಯಾಕೆ? ಭ್ರಷ್ಟಾಚಾರ ಪ್ರಕರಣಗಳಲ್ಲಿ ಹೆಸರು ಕಾಣಿಸಿಕೊಂಡಿರುವ ನಾಯಕರ ವಿರುದ್ಧ ಇಡಿ ಏಕೆ ಕ್ರಮ ಕೈಗೊಳ್ಳುವುದಿಲ್ಲ? ಅದನ್ನು ಇಡಿ ಯಾವಾಗ ಮಾಡುತ್ತದೆ ಎಂದು ಸೌರಭ್ ಭಾರದ್ವಾಜ್ ಪ್ರಶ್ನೆ ಮಾಡಿದ್ದಾರೆ.

ಕೇಜ್ರಿವಾಲ್ ಅವರನ್ನು ಬಂಧಿಸಿದರೆ ಎಎಪಿ ಏನು ಮಾಡುತ್ತದೆ ಎಂಬ ಪ್ರಶ್ನೆಗೆ, ದೆಹಲಿ ಸಚಿವ ಭಾರದ್ವಾಜ್, ಅಂತಹದ್ದೇನಾದರೂ ಸಂಭವಿಸಿದರೆ, ಪಕ್ಷದ ಹಿರಿಯ ಸದಸ್ಯರು ಮುಂದಿನ ಕ್ರಮವನ್ನು ನಿರ್ಧರಿಸುತ್ತಾರೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+