ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ ನವೆಂಬರ್ ವೇಳೆಗೆ ಕೊರೊನಾವೈರಸ್ 3ನೇ ಅಲೆ!

|
Google Oneindia Kannada News

ನವದೆಹಲಿ, ಆಗಸ್ಟ್ 23: ಕೊರೊನಾವೈರಸ್ ಸೋಂಕಿನ ವೈವಿಧ್ಯಮಯ ರೂಪಾಂತರಗಳಿಂದ ಸಾಂಕ್ರಾಮಿಕ ಪಿಡುಗು ನವೆಂಬರ್ ತಿಂಗಳ ಹೊತ್ತಿಗೆ ಗರಿಷ್ಠ ಮಟ್ಟಕ್ಕೆ ತಲುಪಲಿದೆ ಎಂದು ಸೂಕ್ಷ್ಮ ರೋಗಾಣುಶಾಸ್ತ್ರಜ್ಞರು ಎಚ್ಚರಿಕೆ ನೀಡಿದ್ದಾರೆ.

ಭಾರತದಲ್ಲಿ ಪ್ರಸ್ತುತ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ಒಂದು ದಿನದಲ್ಲಿ 25,072 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 44,157 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಇದೇ ಅವಧಿಯಲ್ಲಿ 389 ಜನರು ಮಹಾಮಾರಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 4,34,756 ಏರಿಕೆಯಾಗಿದೆ.

If More Virulent Variant Emerges Coronavirus Third Wave May Peak By November, Says Scientist

ಸೋಮವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3,24,49,306ಕ್ಕೆ ಏರಿಕೆಯಾಗಿದೆ. ಈವರೆಗೂ 3,16,80,626 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ 3,33,924 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಸಪ್ಟೆಂಬರ್ ವೇಳೆಗೆ ಡೆಲ್ಪಾ ಭೀತಿ ಹೆಚ್ಚು:
ಕೊರೊನಾವೈರಸ್ ಸೋಂಕಿನ ತಳಿಗಳಲ್ಲೇ ಡೆಲ್ಪಾ ವೈರಸ್ ಸೋಂಕು ಹೆಚ್ಚು ಅಪಾಯಕಾರಿ ಎನಿಸಿದೆ. ಭಾರತದಲ್ಲಿ ಸಪ್ಟೆಂಬರ್ ತಿಂಗಳ ಹೊತ್ತಿಗೆ ಡೆಲ್ಟಾ ರೂಪಾಂತರ ವೈರಸ್ ಸೋಂಕಿನ ಹರಡುವಿಕೆ ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡು ಬರುವ ಅಪಾಯವಿದೆ ಎಂದು ಕಾನ್ಫುರ್ ಐಐಟಿ ಸಂಶೋಧಕರಾದ ಮಣೀಂದ್ರ ಅಗರ್ವಾಲ್ ತಿಳಿಸಿದ್ದಾರೆ.

ಕೊರೊನಾವೈರಸ್ ಮೂರನೇ ಅಲೆಯು ಎರಡನೇ ಅಲೆಯಷ್ಟು ಭೀಕರವಾಗಿ ಇರುವುದಿಲ್ಲ. ಡೆಲ್ಟಾ ರೂಪಾಂತರ ರೋಗಾಣುವಿಗಿಂತ ಅಪಾಯಕಾರಿಯಾದ ರೋಗಾಣು ಮತ್ತೊಂದಿಲ್ಲ. ದೇಶದಲ್ಲಿ ಹೊಸ ರೂಪಾಂತರ ವೈರಸ್ ಸೃಷ್ಟಿಯಾಗದಿದ್ದರೆ ಮೂರನೇ ಅಲೆಯ ಭೀತಿಯೂ ಇರುವುದಿಲ್ಲ ಎಂದಿದ್ದಾರೆ. ಪ್ರಸ್ತುತ ಕೊವಿಡ್-19 ಸೋಂಕಿತ ಪ್ರಕರಣಗಳ ಏರಿಳಿತದ ಕುರಿತು ಪರಾಮರ್ಶೆ ನಡೆಸುವ ಸರ್ಕಾರದ ಮೂವರು ಸದಸ್ಯರ ಕಾರ್ಯಪಡೆಯಲ್ಲಿ ಮಣೀಂದ್ರ ಅಗರ್ವಾಲ್ ಕೂಡಾ ಸದಸ್ಯರಾಗಿದ್ದಾರೆ.
ಕೊವಿಡ್-19 ಕಾರ್ಯ ಪಡೆಯು ನೀಡಿರುವ ಹೊಸ ಅಂಕಿ-ಅಂಶಗಳ ಪ್ರಕಾರ, ಕೊರೊನಾವೈರಸ್ ಮೂರನೇ ಅಲೆಯು ನವೆಂಬರ್ ತಿಂಗಳಿನಲ್ಲಿ ಅತಿರೇಕಕ್ಕೆ ಹೋಗುವ ಅಪಾಯ ಹೆಚ್ಚಾಗಿರುತ್ತದೆ ಎಂದು ತಿಳಿದು ಬಂದಿದೆ. ದೇಶದಲ್ಲಿ ಮಾರ್ಚ್ ತಿಂಗಳಿನಿಂದ ಮೇ ತಿಂಗಳವರೆಗೂ ಎರಡನೇ ಅಲೆಯು ಚಾಲ್ತಿಯಲ್ಲಿತ್ತು. ಈ ಅವಧಿಯಲ್ಲಿ ಡೆಲ್ಟಾ ರೂಪಾಂತರ ವೈರಸ್ ಲಕ್ಷಾಂತರ ಜನರಿಗೆ ತಗುಲಿದ್ದು, ಸಾವಿರಾರು ಜನರ ಪ್ರಾಣವನ್ನು ತೆಗೆದಿದೆ. ಕಳೆದ ಮೇ 7ರಂದು ಒಂದೇ ದಿನ ಅತಿಹೆಚ್ಚು ಅಂದರೆ 4,14,188 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿತ್ತು.

ಕೊರೊನಾವೈರಸ್ ಅಲೆಗಳ ನಿಯಂತ್ರಣಕ್ಕೆ ಲಸಿಕೆ:
ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಅಲೆಗಳನ್ನು ನಿಯಂತ್ರಿಸುವುದಕ್ಕೆ ಹಾಗೂ ರೂಪಾಂತರ ವೈರಸ್ ವಿರುದ್ಧ ಹೋರಾಡುವುದಕ್ಕಾಗಿ ಲಸಿಕೆ ವಿತರಣೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಸೋಮವಾರ ರಾತ್ರಿ 7 ಗಂಟೆ ವೇಳೆಗೆ 56,10,116 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ಈವರೆಗೂ 58,82,21,623 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ. ಒಂದೇ ದಿನ 39,62,091 ಫಲಾನುಭವಿಗಳಿಗೆ ಮೊದಲ ಡೋಸ್, 16,48,025 ಮಂದಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊವಿಡ್-19 ಲಸಿಕೆ ಪೂರೈಕೆ ಆಗಿದ್ದೆಷ್ಟು, ಬಳಸಿದ್ದೆಷ್ಟು?:
2021ರ ಆಗಸ್ಟ್ 23ರ ಅಂಕಿ-ಅಂಶಗಳ ಪ್ರಕಾರ, 57,05,07,750 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.
* ಪೂರೈಕೆಯಾದ ಲಸಿಕೆ ಪ್ರಮಾಣ - 57,05,07,750
* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 13,34,620
* ಕೊವಿಡ್-19 ಲಸಿಕೆಯ ಲಭ್ಯತೆ - 3,44,06,720

Recommended Video

ಕ್ರಿಕೆಟ್ ದಿಗ್ಗಜ ನಿಂದ ಕಿಚ್ಚ ಸುದೀಪ್ ಗೆ ಬರ್ತಡೇ ಗೂ ಮುನ್ನ ಸಿಕ್ತು ವಿಶೇಷ ಗಿಫ್ಟ್ | Oneindia Kannada

English summary
If More Virulent Variant Emerges Coronavirus Third Wave May Peak By November, Says Scientist.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X