ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವೈದ್ಯರ ಮೇಲೆ ಹಲ್ಲೆ ಖಂಡಿಸಿ ಜೂನ್ 18ರಂದು ದೇಶಾದ್ಯಂತ ಪ್ರತಿಭಟನೆ

|
Google Oneindia Kannada News

ನವದೆಹಲಿ, ಜೂನ್ 12: ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಜೂನ್ 18ರಂದು ದೇಶವ್ಯಾಪಿ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಐಎಂಎ ತಿಳಿಸಿದೆ.

ಈ ಸಂಬಂಧ ಐಎಂಎ ಸುದ್ದಿಗೋಷ್ಠಿಯನ್ನೂ ನಡೆಸಲಿದ್ದು, ಸ್ಥಳೀಯ ಎನ್ ಜಿಒ ಗಳು, ಸ್ವಯಂ ಸೇವೆಯಲ್ಲಿ ತೊಡಗಿಸಿಕೊಂಡಿರುವ ನಾಯಕರನ್ನೂ ಭೇಟಿ ಮಾಡುವುದಾಗಿ ತಿಳಿಸಿದೆ. ಅಸ್ಸಾಂ, ಬಿಹಾರ, ಪಶ್ಚಿಮ ಬಂಗಾಳ, ದೆಹಲಿ, ಉತ್ತರ ಪ್ರದೇಶ, ಕರ್ನಾಟಕ ಹಾಗೂ ಇತರ ಪ್ರದೇಶಗಳಲ್ಲಿ ಕಳೆದ 2 ವಾರಗಳಲ್ಲಿ ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ನಡೆದಿರುವುದು ಅತ್ಯಂತ ಆತಂಕಕಾರಿಯಾಗಿದೆ.

ಬಾಬಾ ರಾಮ್ ದೇವ್ ಸಾರ್ವಜನಿಕವಾಗಿ ಹೊಸ ಹೇಳಿಕೆಯನ್ನು ನೀಡಿದ್ದು, ವೈದ್ಯರು ದೇವದೂತರೆಂದು ಬಣ್ಣಿಸಿದ್ದಾರೆ. ಅಂತೆಯೇ ತಾವೂ ಲಸಿಕೆ ಹಾಕಿಸಿಕೊಳ್ಳುವುದಾಗಿ ಹೇಳಿದ್ದಾರೆ. ಆದರೆ ಅವರು ತಮ್ಮ ಹೇಳಿಕೆ ಮೂಲಕ ನಮಗೆ ಮಾನಸಿಕವಾಗಿ ಕಿರುಕುಳ ನೀಡಿದ್ದನ್ನು ಮರೆಯಲು ಸಾಧ್ಯವಿಲ್ಲ ಎಂದು ಐಎಂಎ ಹೇಳಿದೆ.

Doctors

ರಕ್ಷಕರನ್ನು ರಕ್ಷಿಸಿ ಎಂಬ ಘೋಷ ವಾಕ್ಯದ ಅಡಿಯಲ್ಲಿ ದೇಶವ್ಯಾಪಿ ಪ್ರತಿಭಟನೆ ನಡೆಯಲಿದೆ. ಐಎಂಎಯಿಂದ ನೀಡಲಾಗಿರುವ ಹೇಳಿಕೆಯ ಪ್ರಕಾರ ರಾಜ್ಯ, ಸ್ಥಳೀಯ ಮಟ್ಟದಲ್ಲಿ ತನ್ನ ಸಂಘಟನೆಗಳಿಗೆ ಸೂಚನೆ ನೀಡಲಾಗಿದ್ದು, ಕಪ್ಪು ಬ್ಯಾಡ್ಜ್, ಮಾಸ್ಕ್, ರಿಬ್ಬನ್, ಶರ್ಟ್ ಧರಿಸಿ, ವೈದ್ಯಕೀಯ ಸಿಬ್ಬಂದಿಗಳ ಮೇಲಿನ ಹಲ್ಲೆಯ ಬಗ್ಗೆ ಅರಿವು ಅಭಿಯಾನ ಮೂಡಿಸುವ ಮೂಲಕ ವೈದ್ಯರು ಪ್ರತಿಭಟನೆ ನಡೆಸುವಂತೆ ಕರೆ ನೀಡಲಾಗಿದೆ.

ಇದೇ ವೇಳೆ ಅಲೋಪತಿಗೆ ಸಂಬಂಧಿಸಿದಂತೆ ಯೋಗ ಗುರು ಬಾಬಾ ರಾಮ್ ದೇವ್ ಅವರ ಹೇಳಿಕೆ ಬಗ್ಗೆಯೂ ಐಎಂಎ ಪ್ರತಿಕ್ರಿಯೆ ನೀಡಿದ್ದು, ಬಾಬಾ ರಾಮ್ ದೇವ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಈಗಾಗಲೇ ಕಾನೂನು ಸಮರ ಚಾಲ್ತಿಯಲ್ಲಿದೆ ಎಂದು ಹೇಳಿದೆ.

ಆಸ್ಪತ್ರೆ ಮತ್ತು ಅರೋಗ್ಯ ಸೇವೆ ವೃತ್ತಿಪರರ ಸಂರಕ್ಷಣಾ ಕಾಯ್ದೆ ಐಪಿಸಿ ಮತ್ತು ಕೋಡ್ ಆಫ್ ಕ್ರಿಮಿನಲ್ ಪ್ರೊಸೀಜರ್ ಜಾರಿಗೆ ತರಬೇಕೆಂದು ಐಎಂಎ ಆಗ್ರಹಿಸಿದ್ದು, ಆಸ್ಪತ್ರೆಗಳನ್ನು ಸಂರಕ್ಷಿತ ವಲಯಗಳೆಂದು ಘೋಷಿಸಬೇಕೆಂದೂ ಹೇಳಿದೆ.

ಜೂ.15 ನ್ನು ರಾಷ್ಟ್ರೀಯ ಬೇಡಿಕೆ ದಿನ ಎಂದು ಆಚರಿಸಲು ಐಎಂಎ ನಿರ್ಧರಿಸಿದ್ದು, ವೈದ್ಯಕೀಯ ಸಿಬ್ಬಂದಿಗಳ ಮೇಲಿನ ಹಲ್ಲೆ ವಿಷಯವಾಗಿ ದೇಶಾದ್ಯಂತ ಸುದ್ದಿಗೋಷ್ಠಿ ನಡೆಸಲಿದೆ.

English summary
The Indian Medical Association (IMA) will hold a protest on June 18 against assault on doctors, with the slogan of ‘save the saviours’.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X