ಕೊರೊನಾ 2ನೇ ಅಲೆ: ದೇಶದಲ್ಲಿ 776 ವೈದ್ಯರ ಸಾವು

ನವದೆಹಲಿ, ಜೂನ್ 25: ಕೊರೊನಾ ಎರಡನೇ ಅಲೆಯ ಸಂದರ್ಭದಲ್ಲಿ ದೇಶದಲ್ಲಿ 776 ವೈದ್ಯರು ಮೃತಪಟ್ಟಿದ್ದಾರೆ ಬಿಹಾರದಲ್ಲೇ ಹೆಚ್ಚು ವೈದ್ಯರು ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಬಿಹಾರ ರಾಜ್ಯದಲ್ಲಿ ಗರಿಷ್ಠ ಅಂದರೆ 115 ವೈದ್ಯರು ಸಾವನ್ನಪ್ಪಿದ್ದಾರೆ ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಮಾಹಿತಿ ನೀಡಿದೆ. ಉಳಿದಂತೆ ಉತ್ತರ ಪ್ರದೇಶದಲ್ಲಿ 79 ಮಂದಿ ವೈದ್ಯರು ಸಾವನ್ನಪ್ಪಿದ್ದು, ಕರ್ನಾಟಕದಲ್ಲಿ 9 ಮಂದಿ ವೈದ್ಯರು ಸೋಂಕಿಗೆ ಬಲಿಯಾಗಿದ್ದಾರೆ ಎಂದು ಮಾಹಿತಿ ನೀಡಿದೆ.

ಇನ್ನು ಕಳೆದ ಮೊದಲ ಅಲೆಯಲ್ಲಿ ದೇಶದಲ್ಲಿ 748 ವೈದ್ಯರು ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ್ದರು. ಪ್ರಸ್ತುತ ಐಎಂಎ ಬಳಿ 3.5 ಲಕ್ಷ ಕಾರ್ಯನಿರತ ವೈದ್ಯ ಸದಸ್ಯರ ದತ್ತಾಂಶವಿದ್ದು, ಇಂದು ದೇಶಾದ್ಯಂತ 12ಲಕ್ಷಕ್ಕೂ ಅಧಿಕ ವೈದ್ಯರು ಕೋವಿಡ್ ಸಾಂಕ್ರಾಮಿಕದ ವೇಳೆ ಸೇವೆ ಸಲ್ಲಿಸುತ್ತಿದ್ದಾರೆ ಎನ್ನಲಾಗಿದೆ.

 IMA Says 776 Doctors Have Died In COVID-19 Second Wave; Bihar Records Highest Deaths

ದೇಶಾದ್ಯಂತ 2ನೇ ಅಲೆಯಲ್ಲಿ ಕೊರೋನಾ ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ ವೈದ್ಯರ ಕುರಿತ ದತ್ತಾಂಶಗಳನ್ನು ಏಮ್ಸ್ ನೀಡಿದ್ದು, ದೇಶಾದ್ಯಂತ 776 ಮಂದಿ ವೈದ್ಯರು ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ್ದಾರೆ. ಈ ಪೈಕಿ ಬಿಹಾರ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದೆ. ಬಿಹಾರದಲ್ಲಿ ಗರಿಷ್ಠ ಅಂದರೆ 115 ವೈದ್ಯರು ಸಾವನ್ನಪ್ಪಿದ್ದು, ದೆಹಲಿಯ 109 ವೈದ್ಯರು ಸಾವನ್ನಪ್ಪಿದ್ದಾರೆ.

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು ಸ್ಥಿರವಾಗಿದೆ. ಕಳೆದ 24 ಗಂಟೆಗಳಲ್ಲಿ 51,667 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ದೇಶದಲ್ಲಿ ಒಂದೇ ದಿನ 68,885 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಮಹಾಮಾರಿಗೆ 1,321 ಮಂದಿ ಪ್ರಾಣ ಬಿಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

 IMA Says 776 Doctors Have Died In COVID-19 Second Wave; Bihar Records Highest Deaths

ಭಾರತದಲ್ಲಿ ಒಟ್ಟು 3,01,34,445 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,91,28,267 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಟ್ಟು 3,93,310 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 6,12,868 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ.

ಭಾರತದಲ್ಲಿ ಕೊರೊನಾವೈರಸ್ ಸೋಂಕು ಪರೀಕ್ಷೆ ಪ್ರಮಾಣದಲ್ಲೂ ಇಳಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ 17,35,781 ಜನರ ಮಾದರಿಯನ್ನು ಕೊರೊನಾವೈರಸ್ ಸೋಂಕಿನ ತಪಾಸಣೆಗೆ ಒಳಪಡಿಸಲಾಗಿದೆ. ಈವರೆಗೂ 39,95,68,448 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+