Imd Weather Forecast: ಕರ್ನಾಟಕ ಸೇರಿ ಭಾರತದ ಹಲವು ರಾಜ್ಯಗಳಲ್ಲಿ ಧಾರಾಕಾರ ಮಳೆ: ಐಎಂಡಿ ಮುನ್ಸೂಚನೆ!
Imd Weather Forecast: ಬಂಗಾಳ ಕೊಲ್ಲಿಯಲ್ಲಿ ಏಕಕಾಲಕ್ಕೆ ಎರಡು ಚಂಡಮಾರುತ ರೂಪುಗೊಂಡಿದ್ದು, ದೇಶದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಚಂಡಮಾರುತ / ಸೈಕ್ಲೋನ್ ಪ್ರಭಾವದಿಂದಾಗಿ ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಗುರುವಾರ ಸಹ ಒಡಿಶಾದಲ್ಲಿ ಭಾರೀ ಮಳೆ ಮುಂದುವರಿದಿದೆ. ಆಂಧ್ರಪ್ರದೇಶ, ತಮಿಳುನಾಡು ಹಾಗೂ ಕೇರಳ ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದೆ.
ಒಡಿಶಾದಲ್ಲಿ ಧಾರಾಕಾರ ಮಳೆ ಆಗುತ್ತಿದ್ದು, ಈ ರಾಜ್ಯದ ಏಳು ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ 16 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ಏಳು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಪುರಿ, ಗಂಜಾಂ, ಗಜಪತಿ, ರಾಯಗಡ, ಕೊರಾಪುಟ್, ಕಲಹಂಡಿ ಹಾಗೂ ಕಂಧಮಲ್ ಪ್ರದೇಶದಲ್ಲಿ ಭಾರತೀಯ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದೆ.

ಚಂಡಮಾರುತದ ಪ್ರಭಾವ ತೀವ್ರವಾಗಿದ್ದು ದೇಶದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಒಡಿಶಾ ಹಾಗೂ ಪಶ್ಚಿಮ ಬಂಗಾಳ ಸೇರಿದಂತೆ ದೇಶದ ವಿವಿಧ ಭಾಗದಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಅಕ್ಟೋಬರ್ 3 ರವರೆಗೆ ಒಡಿಶಾ ಕರಾವಳಿಯಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇರುವುದರಿಂದ ಈ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಮಾನ್ಸೂನ್ ಮಳೆ ಈ ಬಾರಿ ವಿಸ್ತರಣೆ ಆಗಿದೆ. ಕರ್ನಾಟಕದಲ್ಲಿ ಅಕ್ಟೋಬರ್ 08ರ ವರೆಗೆ ಮಳೆ ಮುಂದುವರಿಯುವ ಸಾಧ್ಯತೆ ಇದೆ. ತಮಿಳುನಾಡು, ಆಂಧ್ರಪ್ರದೇಶ, ರಾಯಲಸೀಮಾ, ಕೇರಳ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದಲ್ಲಿ ಮಳೆ ಆರ್ಭಟ ಜೋರಾಗಿದೆ. ಬಂಗಾಳಕೊಲ್ಲಿ ಮತ್ತು ಅರೇಬಿಯನ್ ಸಮುದ್ರದಲ್ಲಿ ಕಡಿಮೆ ಒತ್ತಡ ರೂಪುಗೊಂಡಿರುವುದು ಮುಂಗಾರು ಅವಧಿ ವಿಸ್ತರಣೆ ಆಗುವುದಕ್ಕೆ ಕಾರಣವಾಗಿದೆ. ಮಹಾರಾಷ್ಟ್ರ ಹಾಗೂ ದೆಹಲಿಯ ನಗರ ಪ್ರದೇಶಗಳಲ್ಲಿ ಕಳೆದ ವಾರ ಧಾರಾಕಾರ ಮಳೆ ಆಗಿತ್ತು. ಮಳೆಯಿಂದಾಗಿ ಈ ಪ್ರಮುಖ ನಗರಗಳಲ್ಲಿ ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು.
ಇನ್ನೊಂದು ವಾರ ಮಳೆ: ಇನ್ನು ಏಕಕಾಲಕ್ಕೆ ಎರಡು ಚಂಡಮಾರುತ ರೂಪುಗೊಂಡಿರುವ ಪ್ರಭಾವದಿಂದಾಗಿ ಒಡಿಶಾ - ಪಶ್ಚಿಮ ಬಂಗಾಳ ಹಾಗೂ ಆಂಧ್ರಪ್ರದೇಶದಲ್ಲಿ ಧಾರಾಕಾರ ಮಳೆ ಆಗುತ್ತಿದ್ದು, ಇದರ ಪ್ರಭಾವ ಕರ್ನಾಟಕದ ಮೇಲೂ ಆಗಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಇನ್ನೂ ಒಂದು ವಾರದ ಅವಧಿಗೆ ದೇಶಾದ್ಯಂತ (ಹಲವು ರಾಜ್ಯಗಳಲ್ಲಿ) ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ದಕ್ಷಿಣ ಭಾರತದ ಆಂಧ್ರಪ್ರದೇಶದಲ್ಲೂ ಭಾರೀ ಮಳೆ ಮುಂದುವರಿದಿದೆ.












Click it and Unblock the Notifications