Rain Updates: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಈ ಭಾಗಗಳಲ್ಲಿ ಧಾರಾಕಾರ ಮಳೆ ಐಎಂಡಿ ಮುನ್ಸೂಚನೆ!

Rain Updates: ವಾಯುಭಾರ ಕುಸಿತ ಹಾಗೂ ಚಂಡಮಾರುತದ ಪ್ರಭಾವ ಹೆಚ್ಚಾಗಿದ್ದು. ಇಂದಿನಿಂದ ದೇಶದಾದ್ಯಂತ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಯೆ ಲ್ಲೋಹಾಗೂ ರೆಡ್ ಅಲರ್ಟ್ ಘೋಷಿಸಲಾಗಿದೆ. ಯಾವ ಭಾಗದಲ್ಲಿ ಯಾವ ರೀತಿ ಹವಾಮಾನ ಇದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಭಾರತದಲ್ಲಿ ಮಳೆ ಆರ್ಭಟ ಜೋರಾಗಿದೆ. ಮುಂದಿನ ಒಂದು ವಾರದ ಅವಧಿಗೆ ದಕ್ಷಿಣ ಭಾರತದ ಕರ್ನಾಟಕ - ಉತ್ತರ ಭಾರತದ ದೆಹಲಿ ಸೇರಿದಂತೆ ಹಲವು ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಹೇಳಲಾಗಿದೆ. ಉತ್ತರಾಖಂಡ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಛತ್ತೀಸ್‌ಗಢ, ಮಧ್ಯಪ್ರದೇಶ, ಒಡಿಶಾ, ಉತ್ತರ ಪ್ರದೇಶದಲ್ಲಿ ಧಾರಾಕಾರ ಮಳೆ ಮುಂದುವರಿಯಲಿದೆ. ಈಶಾನ್ಯ ಭಾರತದ ರಾಜ್ಯಗಳು ಹಾಗೂ ದಕ್ಷಿಣ ಭಾರತದ ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳಲ್ಲಿ ಇನ್ನೊಂದು ವಾರ ಧಾರಾಕಾರ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.

IMD Forecast Bay of Bengal Low Pressure to Bring Heavy Rain in Several Regions

ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ನಿರಂತರ ಮಳೆಯಿಂದ ಈ ಭಾಗದಲ್ಲಿ ಭೂಕುಸಿತ ಎದುರಾಗಿದ್ದು. ಪ್ರವಾಹದಿಂದಾಗಿ 300 ಕ್ಕೂ ಹೆಚ್ಚು ರಸ್ತೆಗಳಲ್ಲಿ ಸಂಚಾರ ವ್ಯವಸ್ಥೆ ಸ್ಥಗಿತಗೊಳಿಸಲಾಗಿದೆ. ಒಡಿಶಾದ ಮಲ್ಕನ್‌ಗಿರಿ, ಕೊರಾಪುಟ್, ರಾಯಗಡ, ಗಜಪತಿ, ಕಂಧಮಲ್ ಮತ್ತು ನಬರಂಗ್‌ಪುರದಂತಹ ಹಲವಾರು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇದ್ದು ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಭಾಗದ ಪ್ರವಾಸಿ ಕ್ಷೇತ್ರಗಳಿಗೆ ತಾತ್ಕಾಲಿಕವಾಗಿ ಭೇಟಿ ನೀಡದಂತೆ ಪ್ರವಾಸಿಗರಿಗೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೇ ಮಿಂಚು - ಗುಡುಗು ಸಹಿತ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ದಕ್ಷಿಣ ಭಾರತದಲ್ಲಿ ಮಳೆ ಆರ್ಭಟ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ದಕ್ಷಿಣ ಭಾರತದ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಕರ್ನಾಟಕದಲ್ಲಿ ಇನ್ನೊಂದು ವಾರ ಮಳೆ ಆಗುವ ಸಾಧ್ಯತೆ ಇದೆ. ನಾಳೆಯಿಂದ ಮಳೆ ಆರ್ಭಟ ಇನ್ನಷ್ಟು ಮುಂದುವರಿಯಲಿದೆ ಎಂದು ಹೇಳಲಾಗಿದೆ. ಅಲ್ಲದೇ ತೆಲಂಗಾಣದಲ್ಲಿ ಆಗಸ್ಟ್ 17 ರವರೆಗೆ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ.

ವಿವಿಧ ನಗರಗಳಲ್ಲಿ ಮಳೆ ಜೋರು: ಇನ್ನು ಬೆಂಗಳೂರು, ಹೈದರಾಬಾದ್‌ ಹಾಗೂ ದೆಹಲಿ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಮಳೆಯಿಂದಾಗ ನಗರ ಪ್ರದೇಶಗಳಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ದೆಹಲಿ ಹಾಗೂ ಎನ್‌ಸಿಆರ್ ಭಾಗದಲ್ಲಿ ಧಾರಾಕಾ ಮಳೆ ಮುಂದುವರಿದಿದೆ. ಭಾರೀ ಮಳೆಯಿಂದಾಗಿ ವಿಮಾನಗಳ ಹಾರಾಟದಲ್ಲಿ ವ್ಯತ್ಯಾಸವಾಗಿದೆ. ಕೆಲವು ವಿಮಾನಗಳ ರದ್ದು ಹಾಗೂ ವಿಳಂಬವಾಗಿದೆ. ಅಲ್ಲದೇ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ. ಯಮುನಾ ನದಿಯೂ ಅಪಾಯದ ಮಟ್ಟವನ್ನು ತಲುಪಿದೆ ಎಂದು ವರದಿಯಾಗಿದೆ.

ಬೆಂಗಳೂರಿನಲ್ಲಿ ನಿರಂತರ ಭಾರೀ ಮಳೆಯಿಂದಾಗಿ ನಗರದಾದ್ಯಂತ ಸಂಕಷ್ಟ ಸೃಷ್ಟಿಯಾಗಿದೆ. ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್‌ ಮುಂದುವರಿದಿದೆ. ಮಹಾರಾಷ್ಟ್ರದ ಮುಂಬೈ ಹಾಗೂ ಥಾಣೆಯಲ್ಲಿ ಮಳೆ ಮುಂದುವರಿದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+