IMD Forecast: ಈ ಭಾಗಗಳಲ್ಲಿ ಧಾರಾಕಾರ ಮಳೆ, ಚಳಿ ಹೆಚ್ಚಳ: ಐಎಂಡಿ ಮುನ್ಸೂಚನೆ!
ಚಂಡಮಾರುತದ ಪ್ರಭಾವದಿಂದಾಗಿ ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ತಮಿಳುನಾಡು ಸೇರಿದಂತೆ ದೇಶದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಚಳಿ ಹೆಚ್ಚಾಗಿದ್ದು, ವಾಯುಮಾಲಿನ್ಯ ಪ್ರಮಾಣವು ತೀವ್ರ ಸ್ವರೂಪದಲ್ಲಿ ಹೆಚ್ಚಳವಾಗಿದೆ. ದೆಹಲಿಯಲ್ಲಿ ಜನ ಉಸಿರಾಡುವುದಕ್ಕೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ತಮಿಳುನಾಡಿನ ತಂಜಾವೂರು, ಪುದುಕ್ಕೊಟ್ಟೈ, ರಾಮನಾಥಪುರಂ, ವಿರುಧುನಗರ ಮತ್ತು ತೂತುಕುಡಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ತಮಿಳುನಾಡಿನ ವಿವಿಧ ಪ್ರದೇಶಗಳಲ್ಲಿ ಮಿಂಚು ಗುಡುಗು ಸಹಿತ ಧಾರಾಕಾರ ಮಳೆ ಮುಂದುವರಿದಿದೆ. ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಪ್ರದೇಶಗಳಲ್ಲಿ ಮಿಂಚು ಮತ್ತು ಗುಡುಗು ಸಹಿತ ಧಾರಾಕಾರ ಮಳೆ ಆಗುವ ಮುನ್ಸೂಚನೆ ಇದೆ. ಬಂಗಾಳಕೊಲ್ಲಿಯಿಂದ ತೇವಾಂಶವುಳ್ಳ ಗಾಳಿಯು ವಿವಿಧ ರಾಜ್ಯಗಳ ಹವಾಮಾನದ ಮೇಲೆ ಪರಿಣಾಮ ಬೀರಿದೆ. ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರ ವರದಿಯ ಪ್ರಕಾರನ, ಕೊಯಮತ್ತೂರು, ನೀಲಗಿರಿ, ದಿಂಡಿಗಲ್, ಥೇಣಿ, ತೆಂಕಸಿ, ಕನ್ಯಾಕುಮಾರಿ, ತಿರುನಲ್ವೇಲಿ ಹಾಗೂ ತೂತುಕುಡಿ ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ.

ದೇಶದ ವಿವಿಧ ಭಾಗದಲ್ಲಿ ಚಳಿ ಹೆಚ್ಚಳ: ಇನ್ನು ರಾಜ್ಯ ರಾಜಧಾನಿ ಬೆಂಗಳೂರು ಹಾಗೂ ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಚಳಿ ಹೆಚ್ಚಾಗಿದೆ. ಮುಂಬೈ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಒಣಹವೆ ಮುಂದುವರಿದಿದೆ. ಆದರೆ ದೆಹಲಿ ಸೇರಿದಂತೆ ವಿವಿಧ ನಗರಗಳಲ್ಲಿ ದುರದೃಷ್ಟವಶಾತ್ AQI ವಾಯು ಗುಣ ಮಟ್ಟವು ಸುಧಾರಿಸುತ್ತಿಲ್ಲ. ಬೆಂಗಳೂರಿನಲ್ಲಿ ಉತ್ತಮ ವಾತಾವರಣ ಇದೆ.
ದೆಹಲಿಯಲ್ಲಿ ವಾಯು ಗುಣಮಟ್ಟವು ತೀವ್ರವಾಗಿ ಕುಸಿತ ಕಂಡಿದೆ. ವಾಯುಗುಣಮಟ್ಟ ಕುಸಿತ ಹಿನ್ನೆಲೆಯಲ್ಲಿ ರೆಡ್ ಅಲರ್ಟ (ಗಾಳಿ ಗುಣಮಟ್ಟ) ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆಯ ಪ್ರಕಾರ ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಹೈದರಾಬಾದ್‌ನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ವಿವಿಧ ಪ್ರದೇಶದಲ್ಲಿ ಸಾಧಾರಣ ಮಳೆ ಮುಂದುವರಿದಿದೆ. ಚೆನ್ನೈನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಪಂಜಾಬ್, ಉತ್ತರ ಪ್ರದೇಶ ಮತ್ತು ಬಿಹಾರ ಸೇರಿದಂತೆ ವಿವಿಧ ಉತ್ತರ ರಾಜ್ಯಗಳಲ್ಲಿ ಶೀತಗಾಳಿ ಇರಲಿದೆ. ಅಲ್ಲದೇ ಕೇರಳ ಮತ್ತು ಗುಜರಾತ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಸಾಧಾರಣ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.












Click it and Unblock the Notifications