Imd Weather Forecast: ಕರ್ನಾಟಕ ಸೇರಿ ದೇಶದ ಈ ಭಾಗದಲ್ಲಿ ರಣಭೀಕರ ಮಳೆ: ಶಾಲಾ - ಕಾಲೇಜುಗಳಿಗೆ ರಜೆ ಘೋಷಣೆ!

Imd Weather Forecast: ಕರ್ನಾಟಕದ ವಿವಿಧ ರಾಜ್ಯಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಉತ್ತರ ಭಾರತದ ದೆಹಲಿ ಮತ್ತ ಎನ್‌ಸಿಆರ್, ಮಹಾರಾಷ್ಟ್ರ ಹಾಗೂ ಕೇರಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಧಾರಾಕಾರ ಮಳೆ ಆರ್ಭಟ ಮುಂದುವರಿದಿದೆ. ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಗುಜರಾತ್, ಪಶ್ಚಿಮ ಬಂಗಾಳ ಹಾಗೂ ಈಶಾನ್ಯ ಭಾರತದ ಕೆಲವು ರಾಜ್ಯಗಳು ಸೇರಿದಂತೆ ದಕ್ಷಿಣ ಭಾರತದ ವಿವಿಧ ಭಾಗದಲ್ಲೂ ಧಾರಾಕಾರ ಮಳೆ ಆರ್ಭಟ ಮುಂದುವರಿದಿದೆ.

ಗುಜರಾತ್‌ನ ವಿವಿಧ ಭಾಗದಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಗುಜರಾತ್‌ನ ವಿವಿಧ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಸೋಮನಾಥ್, ಜುನಾಗಢ್ ಮತ್ತು ಪೋರ್ಬಂದರ್ ಪ್ರದೇಶಗಳಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇರುವುದರಿಂದ ಈ ಭಾಗದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಕ್ಟೋಬರ್ 2 ರವರೆಗೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.

IMD Forecast Heavy Rains Lash Karnataka and Other States Schools and Colleges Closed

ಕೊಂಕಣ-ಗೋವಾದ ಹೆಚ್ಚಿನ ಪ್ರದೇಶಗಳಲ್ಲಿ ಹಾಗೂ ಮಹಾರಾಷ್ಟ್ರದ ಭಾಗದಲ್ಲಿ ಮಳೆ ಮುಂದು ವರಿದಿದ್ದು, ಅಕ್ಟೋಬರ್ 5 ರವರೆಗೆ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅಕ್ಟೋಬರ್ 2 ರಿಂದ 4 ರವರೆಗೆ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ, ಬಿಹಾರ, ಜಾರ್ಖಂಡ್, ಮಧ್ಯಪ್ರದೇಶ, ಛತ್ತೀಸ್‌ಗಢ ಹಾಗೂ ಒಡಿಶಾ ಸೇರಿದಂತೆ ವಿವಿಧ ಭಾಗದಲ್ಲೂ ಮಳೆ ಆರ್ಭಟ ಮುಂದುವರಿದಿದೆ. ಮುಂದಿನ ಐದು ದಿನಗಳಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಮಿಂಚು ಗುಡುಗು ಸಹಿತ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಕ್ಟೋಬರ್ 5 ರವರೆಗೆ ಅಸ್ಸಾಂ ಮತ್ತು ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದಲ್ಲಿ ಅಕ್ಟೋಬರ್ 2 ರವರೆಗೆ ಮಳೆ ಆಗಲಿದೆ. ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲೂ ಮಳೆ ಮುಂದುವರಿಯಲಿದೆ ಎಂದು ಐಎಂಡಿ ವರದಿ ಉಲ್ಲೇಖಿಸಿದೆ.

ದಕ್ಷಿಣ ಭಾರತದಲ್ಲಿ ಧಾರಾಕಾರ ಮಳೆ: ಇನ್ನು ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲೂ ಮಳೆ ಮುಂದುವರಿದಿದೆ. ದಕ್ಷಿಣ ಭಾರತದ ಕರ್ನಾಟಕ, ಕೇರಳ, ತಮಿಳುನಾಡು ಹಾಗೂ ಆಂಧ್ರಪ್ರದೇಶದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ವಿವಿಧ ಭಾಗದಲ್ಲಿ ಶಾಲಾ - ಕಾಲೇಜುಗಳಿಗೆ ರಜೆ: ಇನ್ನು ದೇಶದಾದ್ಯಂತ ದಸರಾ ಸಂಭ್ರಮಾಚರಣೆ / ನವರಾತ್ರಿ ಇರುವ ಹಿನ್ನೆಲೆಯಲ್ಲಿ ಈಗಾಗಲೇ ಶಾಲಾ - ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಲ್ಲದೇ ಇದೀಗ ಧಾರಾಕಾರ ಮಳೆ ಆಗುತ್ತಿರುವ ದೆಹಲಿ ಹಾಗೂ ಮಹಾರಾಷ್ಟ್ರ ಭಾಗದಲ್ಲೂ ಕೆಲವೊಂದು ಕಡೆ ಶಾಲಾ - ಕಾಲೇಜುಗಳಿಗೆ ರಜೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+