ಮುಂಗಾರು ಪ್ರಭಾವ; ಇನ್ನೂ ಕೆಲದಿನ ಈ ರಾಜ್ಯಗಳಲ್ಲಿ ಭಾರೀ ಮಳೆ ಎಚ್ಚರಿಕೆ ಕೊಟ್ಟ IMD

ನವದೆಹಲಿ, ಜುಲೈ 31: ಉತ್ತರ ಭಾರತದಲ್ಲಿ ಮುಂಗಾರು ಚುರುಕುಗೊಂಡಿದ್ದು, ಹಲವು ರಾಜ್ಯಗಳು ಭಾರೀ ಪ್ರಮಾಣದಲ್ಲಿ ಮಳೆ ಪಡೆಯುತ್ತಿವೆ. ಜಮ್ಮು ಕಾಶ್ಮೀರ, ಉತ್ತರಾಖಂಡದಲ್ಲಿ ಮೇಘಸ್ಫೋಟ ಸಂಭವಿಸಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ.

ಇದೀಗ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಅದರ ಪ್ರಭಾವದಿಂದಾಗಿ ಇನ್ನೂ ಕೆಲವು ದಿನಗಳ ಕಾಲ ಮಳೆ ಮುಂದುವರೆಯಬಹುದು ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಇದರೊಂದಿಗೆ ಜುಲೈ 31ರಂದು ರಾಜಸ್ಥಾನ ಹಾಗೂ ಮಧ್ಯಪ್ರದೇಶದಲ್ಲಿ ಅತಿ ಹೆಚ್ಚಿನ ಮಳೆಯಾಗಬಹುದು ಎಂದು ಮುನ್ಸೂಚನೆ ನೀಡಿದೆ. ದಕ್ಷಿಣ ಭಾರತದಲ್ಲಿ ಮುಂಗಾರು ಕ್ಷೀಣಿಸಿದ್ದು, ಮಳೆ ಕಡಿಮೆಯಾಗಿದೆ. ಆದರೆ ಆಗಸ್ಟ್ 1ರವರೆಗೂ ಕೆಲವು ಕಡೆಗಳಲ್ಲಿ ಮಳೆ ಮುಂದುವರೆಯುವುದು ಎಂದು ತಿಳಿಸಲಾಗಿದೆ. ಮುಂದೆ ಓದಿ...

ರಾಜಸ್ಥಾನಕ್ಕೆ ರೆಡ್ ಅಲರ್ಟ್

ರಾಜಸ್ಥಾನಕ್ಕೆ ರೆಡ್ ಅಲರ್ಟ್

ರಾಜಸ್ಥಾನ ಹಾಗೂ ಮಧ್ಯಪ್ರದೇಶದಲ್ಲಿ ಜುಲೈ 31ರಂದು ಅಧಿಕ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಎಚ್ಚರಿಕೆ ರವಾನಿಸಲಾಗಿದೆ. ಹೀಗಾಗಿ ರಾಜಸ್ಥಾನಕ್ಕೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಧ್ಯಪ್ರದೇಶಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜಸ್ಥಾನದ ಹಲವು ಜಿಲ್ಲೆಗಳಲ್ಲಿ ಭಾರೀ ಎಂದರೆ ಭಾರೀ ಪ್ರಮಾಣದ ಮಳೆಯಾಗಲಿದೆ ಹಾಗೂ ಮಧ್ಯಪ್ರದೇಶದ ಅರ್ಧ ಭಾಗಕ್ಕೆ ಗುಡುಗು ಮಿಂಚು ಸಹಿತ ಮಳೆಯಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ದೆಹಲಿಯಲ್ಲಿ ಪ್ರವಾಹದ ಎಚ್ಚರಿಕೆ

ದೆಹಲಿಯಲ್ಲಿ ಪ್ರವಾಹದ ಎಚ್ಚರಿಕೆ

ದೆಹಲಿಯಲ್ಲಿ ಕೆಲವು ದಿನಗಳಿಂದ ಮಳೆಯಾಗಿದ್ದು, ಶುಕ್ರವಾರ ದೆಹಲಿಗೆ ಪ್ರವಾಹದ ಎಚ್ಚರಿಕೆ ನೀಡಲಾಗಿದೆ. ಯಮುನಾ ನದಿ ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದ್ದು, ಪ್ರವಾಹ ಎದುರಾಗಬಹುದಾಗಿದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಯುಮುನಾ ನದಿ ಶುಕ್ರವಾರದ ಹೊತ್ತಿಗೆ 204.50 ಮೀಟರ್ ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿತ್ತು. ಹೀಗಾಗಿ ಪ್ರವಾಹ ಮುನ್ನೆಚ್ಚರಿಕೆ ರವಾನಿಸಲಾಗಿದೆ.

ಶಿಮ್ಲಾದಲ್ಲಿ ಆಗಸ್ಟ್ 3ರವರೆಗೂ ಅಲರ್ಟ್

ಶಿಮ್ಲಾದಲ್ಲಿ ಆಗಸ್ಟ್ 3ರವರೆಗೂ ಅಲರ್ಟ್

ಹಿಮಾಚಲ ಪ್ರದೇಶದಲ್ಲಿಯೂ ಮಳೆ ಮುಂದುವರೆದಿದ್ದು, ಸಂಭವಿಸಿದ ಮೇಘ ಸ್ಫೋಟದಲ್ಲಿ ನೂರಾರು ಮಂದಿ ಸಿಲುಕಿಕೊಂಡಿದ್ದಾರೆ. ಅವರನ್ನು ರಕ್ಷಿಸುವ ಕಾರ್ಯ ಮುಂದುವರೆದಿದೆ. ಶಿಮ್ಲಾದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಆಗಸ್ಟ್‌ 3ರವರೆಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್‌ 5ರವರೆಗೂ ಭಾರಿ ಮಳೆಯಾಗಲಿದ್ದು, ಹಲವೆಡೆ ಭೂಕುಸಿತ ಸಂಭವಿಸುವ ಅಪಾಯವಿದೆ ಎಂದು ಎಚ್ಚರಿಕೆ ನೀಡಿದೆ. ಉತ್ತರಾಖಂಡ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶದಲ್ಲಿ ಜುಲೈ 31ರಂದು ಕೂಡ ಮಳೆ ಮುಂದುವರೆಯಲಿರುವುದಾಗಿ ತಿಳಿಸಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪ್ರಭಾವ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪ್ರಭಾವ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪ್ರಭಾವದಿಂದಾಗಿ ಉತ್ತರ ಭಾರತದ ರಾಜ್ಯಗಳಲ್ಲಿ ಆಗಸ್ಟ್‌ 1ರವರೆಗೂ ಮಳೆ ಮುಂದುವರೆಯಲಿದೆ. ಉತ್ತರ ಪ್ರದೇಶ, ಪಂಜಾಬ್, ಹರಿಯಾಣ, ಪಶ್ಚಿಮ ಬಂಗಾಳ, ಬಿಹಾರ ಹಾಗೂ ಜಾರ್ಖಂಡ್‌ನಲ್ಲಿ ಭಾನುವಾರದವರೆಗೂ ಮಳೆ ಮುಂದುವರೆಯುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Recommended Video

    ಟೀಮ್ ಇಂಡಿಯಾಗೆ ಫುಲ್ ಟೈಮ್ ಕೋಚ್ ಆಗಲ್ವಂತೆ ದ್ರಾವಿಡ್ | Oneindia Kannada
    ರಾಜ್ಯದ ಕೆಲವೆಡೆ ಮಳೆ ಸಾಧ್ಯತೆ

    ರಾಜ್ಯದ ಕೆಲವೆಡೆ ಮಳೆ ಸಾಧ್ಯತೆ

    ರಾಜ್ಯದಲ್ಲಿ ಎರಡು ದಿನಗಳಿಂದ ಮಳೆ ತಗ್ಗಿದೆ. ಕರಾವಳಿ ಹಾಗೂ ಮಲೆನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿರುವುದಾಗಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿಯೂ ಶನಿವಾರ ಕೊಂಚ ಮಳೆಯಾಗಬಹುದು. ದಕ್ಷಿಣ ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಬೀಳುವ ಸಾಧ್ಯತೆಯಿರುವುದಾಗಿ ತಿಳಿಸಿದೆ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಮುಂಗಾರು ತೀವ್ರತೆ ತಗ್ಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+