India weather alert: ಚಂಡಮಾರುತ ತೀವ್ರತೆ ಹೆಚ್ಚಳ, 5 ದಿನ ಈ ಭಾಗಗಳಲ್ಲಿ ಭಾರೀ ಮಳೆ ಸಾಧ್ಯತೆ: IMD

India Weather: ಮಳೆರಾಯನ ಅಬ್ಬರ ಮುಂದುವರಿದಿದ್ದು, ವಾಯುಭಾರ ಕುಸಿತ, ಚಂಡಮಾರು ಪರಿಚಲನೆಯ ತೀವ್ರತೆ ಮತ್ತೆ ಹೆಚ್ಚಾಗಿದೆ. ಇದರಿಂದ ಮಳೆ ಆರ್ಭಟ ಕರಾವಳಿ ರಾಜ್ಯಗಳಿಗೆ ಮಾತ್ರವಲ್ಲದೇ ಉತ್ತರ ಹಾಗೂ ದಕ್ಷಿಣ ಭಾರತದ ಅನೇಕ ರಾಜ್ಯಗಳಲ್ಲಿ ಮುಂದುವರಿಯಲಿದೆ. ಈಗಾಗಲೇ ರಜೆ ಘೋಷಿಸಿದ್ದ ತೆಲಂಗಾಣ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆ ಪ್ರಯುಕ್ತ ಶಾಲೆಗಳಿಗೆ ರಜೆ ನೀಡುವ ಸಾಧ್ಯತೆ ಇದೆ.

ಒಡಿಶಾ ಮತ್ತು ಉತ್ತರ ಆಂಧ್ರಪ್ರದೇಶ ಕರಾವಳಿಗಳು ಮತ್ತು ಬಂಗಾಳ ಕೊಲ್ಲಿಯ ವಾಯುವ್ಯ ಮತ್ತು ಮಧ್ಯ ಭಾಗದ ಪ್ರದೇಶಗಳಲ್ಲಿ ಆಗಸ್ಟ್ 15 ಬೆಳಗ್ಗೆ 05.30 ಗಂಟೆಗೆ ಕಡಿಮೆ ಚಂಡಮಾರುತ ಪರಿಚಲನೆ ಮತ್ತೆ ಕೊಂಚ ತೀವ್ರವಾಗಿದೆ. ಇದು ಸಮುದ್ರಮಟ್ಟದಿಂದ 7.6 ಕಿ.ಮೀ ವರೆಗೆ ವಿಸ್ತರಿಸಿದೆ. ಮುಂದಿನ ದಿನಗಳಲ್ಲಿ ದಕ್ಷಿಣಕ್ಕೆ ಓರೆಯಾಗಲಿದೆ. ಇದರ ಪ್ರಭಾವ ದಕ್ಷಿಣ ಒಡಿಶಾ ಮತ್ತು ಆಂಧ್ರ ಪ್ರದೇಶದ ಕರಾವಳಿ ಭಾಗದ ಮೇಲೂ ಆಗಲಿದೆ. ವ್ಯಾಪಕ ಮಳೆ ಆಗಲಿದೆ.

IMD Issues Heavy Rain on Multiple Indian States in Next 5 Days May Declared Holiday for School

ಪಂಜಾಬ್ ಮತ್ತು ನೆರೆಹೊರೆಯಲ್ಲಿ ಭೂಮಿ ಮೇಲಿನ ವಾಯು ಚಂಡಮಾರುತದ ಪರಿಚಲನೆ ಮುಂದುವರೆದಿದೆ. ಸದ್ಯಕ್ಕೆ ಅದು ಸಮುದ್ರ ಮೇಲ್ಮನಿಂದ ಬರೋಬ್ಬರಿ 3.1 ವರೆಗೆ ವಿಸ್ತರಣೆ ಆಗಿದೆ. ಮತ್ತೊಂದು ಚಂಡಮಾರುತ ಪರಿಚಲನೆ ಉತ್ತರ ಪ್ರದೇಶದ ಭಾಗದಲ್ಲಿ ನೆಲೆಸಿದ್ದು, ಇದು ಸಮುದ್ರ ಮೇಲ್ಮೈನಿಂದ 0.9 ಕಿ.ಮೀ ವರೆಗೆ ಎತ್ತರದಲ್ಲಿ ಮುಂದುವರಿಯಲಿದೆ.

ಗುಜರಾತ್ ಭಾಗದಲ್ಲಿ ಅರಬ್ಬಿ ಸಮುದ್ರ ಮೇಲ್ಮೈನಲ್ಲಿ ಕಛ್ ಮೇಲೆ 1.5 ಮತ್ತು 3.1 ಕಿ.ಮೀ. ಮಧ್ಯೆ ಚಂಡಮಾರುತ ಪರಿಚಲನೆ ನಿರ್ಮಾಣವಾಗಿದೆ. ಬಂಗಾಳಕೊಲ್ಲಿಯ ಮಧ್ಯ ಭಾಗ, ಅರಬ್ಬಿ ಸಮುದ್ರ ಹಾಗೂ ಭೂಮಿ ಮೇಲ್ಮೈನ ಈ ವೈಪರೀತ್ಯಗಳ ಪ್ರಭಾವದಿಂದಾಗಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳು ಮತ್ತು ಉತ್ತರ ಭಾರತದ ರಾಜ್ಯಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಇಂದು ಶುಕ್ರವಾರ ಮಾಹಿತಿ ನೀಡಿದೆ.

ಈ ರಾಜ್ಯಗಳಿಗೆ ಭಾರಿ ಮಳೆ ಎಚ್ಚರಿಕೆ?

ರಾಜಸ್ತಾನ್ ಪೂರ್ವ ಪ್ರದೇಶ, ಮಧ್ಯ ಮಹಾರಾಷ್ಟ್ರ, ತೆಲಂಗಾಣ, ಒಡಿಶಾ, ಛತ್ತೀಸ್‌ಗಢ ಮತ್ತು ಪಶ್ಚಿಮ ಮಧ್ಯಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಹೆಚ್ಚು ಮಳೆ ನಿರೀಕ್ಷೆ ಇದೆ. ಇದರಿಂದಾಗಿ ಮುಂದಿನ ಎರಡು ದಿನ ಆರೆಂಜ್ ಅಲರ್ಟ್ ನೀಡಲಾಗಿದೆ. ಇದರೊಂದಿಗೆ ಆಂಧ್ರಪ್ರದೇಶದ ಕರಾವಳಿ, ಕರ್ನಾಟಕ ಕರಾವಳಿ, ಗುಜರಾತ್ ಪ್ರದೇಶ, ಹರಿಯಾಣ, ಚಂಡೀಗಢ ಮತ್ತು ದೆಹಲಿ, ಹಿಮಾಚಲ ಪ್ರದೇಶ, ಜಮ್ಮು-ಕಾಶ್ಮೀರ, ಕೇರಳ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರ, ಕರ್ನಾಟಕ ಉತ್ತರ ಒಳನಾಡು ಪ್ರದೇಶಗಳು, ಹಾಗೂ ಪಂಜಾಬ್ ಮತ್ತು ಉತ್ತರಾಖಂಡ ಸ್ಥಳಗಳಲ್ಲಿ ಮುಂದಿನ 3-5 ದಿನ ಭಾರೀ ಮಳೆ ಆಗಲಿದ್ದು, 'ಯೆಲ್ಲೋ ಅಲರ್ಟ್' ನೀಡಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಿರುಗಾಳಿ ಸಹಿತ ಭಾರೀ ಮಳೆ

ಮುಂದಿನ ಮೂರು ದಿನ ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳಲ್ಲಿ ಪ್ರತಿ ಗಂಟೆಗೆ 50-60 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಬಿಹಾರ, ಕರಾವಳಿ ಕರ್ನಾಟಕ, ಜಮ್ಮು-ಕಾಶ್ಮೀರ ತೆಲಂಗಾಣದ ಪ್ರತ್ಯೇಕ ಸ್ಥಳಗಳಲ್ಲಿ ಮಿಂಚು ಮತ್ತು ಬಿರುಗಾಳಿಯೊಂದಿಗೆ ಗಂಟೆಗೆ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಈ ಮೂಲಕ ಮುಂದಿನ ಇನ್ನೂ ಕೆಲವು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+