India Weather: ಮತ್ತೆ ವಾಯುಭಾರ ಕುಸಿತ: ಈ ಭಾಗಗಳಲ್ಲಿ 7 ದಿನ ಭಾರೀ ಮಳೆ ಎಚ್ಚರಿಕೆ...Rain Alert

IMD Weather Forecast: ಮುಂಗಾರು ಮಳೆಗೆ ದೇಶದ ವಿವಿಧ ಭಾಗಗಳು ಅಕ್ಷರಶಃ ನಲುಗಿವೆ. ಪ್ರವಾಹ ಭೀತಿಯಲ್ಲೇ ಜೀವನ ನಡೆಸುವಷ್ಟರಮಟ್ಟಿಗೆ ನಿರಂತರವಾಗಿ ಕೆಲವೆಡೆ ಮಳೆ ಆಗುತ್ತಿದೆ. ಸದ್ಯ ಸಮುದ್ರ ಮಟ್ಟದಲ್ಲಿ ಮಾನ್ಸೂನ್ ಸ್ಟ್ರಫ್ ಸೃಷ್ಟಿಯಾಗಿದೆ. ಇದೇ ರೀತಿ ವಿವಿಧ ಭಾಗಗಳಲ್ಲಿ ಹವಾಮಾನ ವೈರಪರೀತ್ಯಗಳು ಸಂಭವಿಸಿವೆ. ಇದರಿಂದ ಮುಂಗಾರು ಮಳೆ ತೀವ್ರಗೊಂಡಿದೆ. ಮುಂದಿನ ಒಂದು ವಾರಗಳ ಕಾಲ ವ್ಯಾಪಕ ಮಳೆ ಸುರಿಯುವ ಮುನ್ಸೂಚನೆ ಇದೆ.

ಒಂದು ಸ್ಟ್ರಫ್ ಅಮೃತಸರ, ಪಟಿಯಾಲ, ಬರೇಲಿ, ಲಕ್ನೋ, ಗೋರಖ್‌ಪುರ, ಪಾಟ್ನಾ, ಪೂರ್ನಿಯಾ ಮೂಲಕ ಹಾದುಹೋಗಲಿದೆ. ಬಳಿಕ ಈಶಾನ್ಯಕ್ಕೆ ಅರುಣಾಚಲ ಪ್ರದೇಶ ಭಾಗದಲ್ಲಿ ಅದು ತೀವ್ರಗೊಳ್ಳಲಿದೆ. ಆಂಧ್ರಪ್ರದೇಶದ ಉತ್ತರ ಕರಾವಳಿ ಮತ್ತು ತೆಲಂಗಾಣದ ಪಕ್ಕದ ಭಾಗದಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 3.1 ಮತ್ತು 5.8 ಕಿ.ಮೀ ಎತ್ತರದಲ್ಲಿ ಚಂಡಮಾರುತದ ಪರಿಚಲನೆ ಉಂಟಾಗಿದೆ. ಇದು ಇನ್ನಷ್ಟು ತೀವ್ರಗೊಂಡರೆ ಮಳೆ ಪ್ರಯಾಣದಲ್ಲಿ ಮತ್ತಷ್ಟು ಏರಿಕೆ ಆಗುವ ಸಾಧ್ಯತೆ ಇದೆ.

IMD Prediction Heavy Rain Expect for Next 7 Days Across Multiple States in India Orange Alert

ಉತ್ತರ ಪ್ರದೇಶದ ಮಧ್ಯ ಭಾಗಗಳಲ್ಲಿ ಮತ್ತು ವಾಯುವ್ಯ ಪ್ರದೇಶದಲ್ಲಿ ಚಂಡಮಾರುತ ಪರಿಚಲನೆ ಇದೆ. ಸರಾಸರಿ ಸಮುದ್ರ ಮಟ್ಟದಿಂದ 3.1 ಕಿ.ಮೀ ವರೆಗೆ ವಿಸ್ತರಿಸಿದೆ. ಇನ್ನು ಅರಬ್ಬಿ ಸಮುದ್ರದ ಮೇಲ್ಮೈನಲ್ಲಿ ಗುಜರಾತ್‌ಗೆ ಹೊಂದಿಕೊಂಡ ಪ್ರದೇಶಲದ್ಲಿ ಬಿರುಗಾಳಿ ಸಹಿತ ವೈಪರಿತ್ಯ ಎದುರಾಗಿದೆ. ಇದು ಸಮುದ್ರ ಮಟ್ಟದಿಂದ 3.1 ಕಿ.ಮೀ ಎತ್ತರದಲ್ಲಿದೆ. ಸಾಲದೆಂಬಂತೆ ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮತ್ತು ಸರಾಸರಿ ಸಮುದ್ರ ಮಟ್ಟದಿಂದ 4.5 ಮತ್ತು 5.8 ಕಿ.ಮೀ. ಮಧ್ಯದವರೆಗೆ ಚಂಡಮಾರುತ ಪರಿಚಲನೆ ಇದೆ. ಇದೆಲ್ಲ ಕಾರಣಗಳಿಂದ ಉತ್ತರ ಹಾಗೂ ದಕ್ಷಿಣ ಭಾರತದ ವಿವಿಧ ರಾಜ್ಯಗಳಲ್ಲಿ ಮುಂದಿನ ಒಂದು ವಾರ ಭಾರೀ ಮಳೆ ಆಗಲಿದೆ ಎಂದು ಸೋಮವಾರ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಭಾಗಗಳಲ್ಲಿ ಅತ್ಯಧಿಕ ಮಳೆ ನಿರೀಕ್ಷೆ

ದೇಶದ ಹಿಮಾಚಲ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ಮತ್ತು ಉತ್ತರಾಖಂಡದ ಪ್ರತ್ಯೇಕ ಸ್ಥಳಗಳಲ್ಲಿ ಅತ್ಯಧಿಕ ಭಾರೀ ಮಳೆ ಆಗುವ ನಿರೀಕ್ಷೆ ಇದೆ. ಹೀಗಾಗಿ ಮುಂದಿನ ಎರಡು ದಿನ ಈ ರಾಜ್ಯಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಇದರೊಂದಿಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಹರಿಯಾಣ, ಚಂಡೀಗಢ, ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯ, ಬಿಹಾರ, ಪೂರ್ವ ಮಧ್ಯಪ್ರದೇಶ ಮತ್ತು ದೆಹಲಿ, ಕರ್ನಾಟಕ, ಕೇರಳ, ಪಂಜಾಬ್, ತಮಿಳುನಾಡು ಪುದುಚೇರಿ ಹಾಗೂ ಕಾರೈಕಲ್, ತೆಲಂಗಾಣ ಸೇರಿದಂತೆ ವಿವಿಧ ರಾಜ್ಯಗಳ ಹಲವೆಡೆ ಭಾರೀ ಮಳೆ ನಿರೀಕ್ಷೆ ಇದೆ. ಮೂರು ದಿನ ಈ ರಾಜ್ಯಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಬಿರುಗಾಳಿ ಸಹಿತ ಜೋರು ಮಳೆ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಬಿಹಾರ, ಜಮ್ಮು-ಕಾಶ್ಮೀರ, ಜಾರ್ಖಂಡ್ ವ್ಯಾಪ್ತಿಯ ಕೆಲವು ಕಡೆಗಳಲ್ಲಿ ಗುಡುಗು, ಮಿಂಚು ಹಾಗೂ ಗರಿಷ್ಠ 40 ಕಿಲೋ ಮೀಟರ್‌ ವೇಗದ ಬಿರುಗಾಳಿ ಸಹಿತ ಮಳೆ ಆಗಲಿದೆ. ಮೂರು ದಿನಗಳ ನಂತರದ ಮೂರರಿಂದ ನಾಲ್ಕು ದಿನ ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ತ್ರಿಪುರ, ಒಡಿಶಾ, ತೆಲಂಗಾಣ, ಅಸ್ಸಾಂ, ಮೇಘಾಲಯ, ಛತ್ತೀಸ್‌ಗಢ, ಮಧ್ಯಪ್ರದೇಶ, ಮಹಾರಾಷ್ಟ್ರ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಹಾಗೂ ಕರ್ನಾಟಕದ ಒಂದೆರಡು ಭಾಗಗಳಲ್ಲಿ ಸಾಧಾರಣದಿಂದ ಭಾರಿ ಮಳೆ ಆಗುವ ಸಂಭವವಿದೆ.

ಸೊಮಾಲಿಯಾ ಮತ್ತು ಓಮನ್ ಕರಾವಳಿಯಲ್ಲಿ, ನೈಋತ್ಯ ಅರೇಬಿಯನ್ ಸಮುದ್ರದ ಕೆಲವು ಭಾಗಗಳಲ್ಲಿ ಮತ್ತು ಪಶ್ಚಿಮ-ಮಧ್ಯ ಅರೇಬಿಯನ್ ಸಮುದ್ರದ ಕೆಲವು ಭಾಗಗಳಲ್ಲಿ ಗಂಟೆಗೆ 45 ರಿಂದ 55 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಗಂಟೆಗೆ 65 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತನ್ನ ಮುನ್ಸೂಚನೆಯಲ್ಲಿ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+