ಮುಂದಿನ ಮೂರ್ನಾಲ್ಕು ದಿನಗಳವರೆಗೂ ಈ ರಾಜ್ಯಗಳಲ್ಲಿ ಜೋರು ಮಳೆ

ನವದೆಹಲಿ, ಜುಲೈ 23: ಹಲವು ರಾಜ್ಯಗಳಲ್ಲಿ ಮುಂಗಾರು ಚುರುಕಾಗಿದ್ದು, ಮಹಾರಾಷ್ಟ್ರ, ತೆಲಂಗಾಣ, ಉತ್ತರ ಪ್ರದೇಶ ಹಾಗೂ ದೆಹಲಿಯಲ್ಲಿ ಕೆಲವು ದಿನಗಳಿಂದ ಅಧಿಕ ಮಳೆಯಾಗುತ್ತಿದೆ. ಇನ್ನೂ ಕೆಲವು ದಿನಗಳ ಕಾಲ ಮಳೆ ಮುಂದುವರೆಯುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದೇಶದ ಪಶ್ಚಿಮ ಹಾಗೂ ಮಧ್ಯ ಭಾಗದ ರಾಜ್ಯಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಅಧಿಕ ಮಳೆಯಾಗಲಿದೆ. ಕೊಂಕಣ, ಮಹಾರಾಷ್ಟ್ರ, ಗೋವಾದಲ್ಲಿ ಅಧಿಕ ಮಟ್ಟದಲ್ಲಿ ಮಳೆಯಾಗಲಿದೆ ಎಂದು ಮುನ್ನೆಚ್ಚರಿಕೆ ನೀಡಿದೆ.

ಜೂನ್ ತಿಂಗಳ ಮೊದಲ ವಾರ ಕೇರಳ ರಾಜ್ಯದ ಮೂಲಕ ಮುಂಗಾರು ಪ್ರವೇಶಿಸಿದ್ದು, ಜೂನ್ 18ರ ನಂತರ ಸಂಪೂರ್ಣ ಕ್ಷೀಣಿಸಿತ್ತು. ತಿಂಗಳ ನಂತರ ಮತ್ತೆ ಮುಂಗಾರು ಚುರುಕಾಗಿದ್ದು, ಎರಡು ಮೂರು ದಿನಗಳಿಂದ ಹಲವು ರಾಜ್ಯಗಳು ಭಾರೀ ಮಳೆಗೆ ಸಾಕ್ಷಿಯಾಗುತ್ತಿವೆ. ಇನ್ನು ಕೆಲವು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದೆ ನೋಡಿ...

 ಮಹಾರಾಷ್ಟ್ರದಲ್ಲಿ ಭೂಕುಸಿತ; ಐದು ಮಂದಿ ಸಾವು

ಮಹಾರಾಷ್ಟ್ರದಲ್ಲಿ ಭೂಕುಸಿತ; ಐದು ಮಂದಿ ಸಾವು

ಮಹಾರಾಷ್ಟ್ರದ ಮುಂಬೈ ನಗರದಲ್ಲಿ ಈ ವರ್ಷ ಅಧಿಕ ಮಳೆಯಾಗುತ್ತಿದ್ದು, ಇದುವರೆಗೂ 1971.3 ಎಂಎಂ ಮಳೆಯಾಗಿದೆ. ಇನ್ನೂ ಹೆಚ್ಚಿನ ಮಳೆಯಾಗುವ ಸೂಚನೆ ನೀಡಲಾಗಿದ್ದು, ಮುಂಬೈ ನಗರಕ್ಕೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಹಾರಾಷ್ಟ್ರದ ವಿದರ್ಭಾ ಪ್ರದೇಶದಲ್ಲಿ ಅತಿ ಹೆಚ್ಚಿನ ಮಳೆಯಾಗುವುದಾಗಿ ತಿಳಿಸಿದೆ. ಮುಂಬೈನಲ್ಲಿ ಈಗಾಗಲೇ 890 ಎಂ.ಎಂ. ಹೆಚ್ಚಿನ ಮಳೆ ದಾಖಲಾಗಿದೆ. ಮಹಾರಾಷ್ಟ್ರದ ರಾಯಗಢದಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು, ಐದು ಮಂದಿ ಮೃತಪಟ್ಟ ವರದಿಯಾಗಿದೆ. ಪ್ರವಾಹ ಪರಿಸ್ಥಿತಿ ಏರ್ಪಟ್ಟಿದ್ದು, ಪರಿಸ್ಥಿತಿ ನಿಭಾವಣೆಗೆ ಎನ್‌ಡಿಆರ್‌ಎಫ್ ಸಿಬ್ಬಂದಿ ನಿಯೋಜಿಸಲಾಗಿದೆ.

 ಉತ್ತರ ಪ್ರದೇಶದಲ್ಲಿಯೂ ಅಧಿಕ ಮಳೆ ಸೂಚನೆ

ಉತ್ತರ ಪ್ರದೇಶದಲ್ಲಿಯೂ ಅಧಿಕ ಮಳೆ ಸೂಚನೆ

ಉತ್ತರ ಪ್ರದೇಶದಲ್ಲಿಯೂ ಹೆಚ್ಚಿನ ಮಳೆಯಾಗುವ ಸೂಚನೆಯನ್ನು ನೀಡಲಾಗಿದ್ದು, ಗುಡುಗುಮಿಂಚು ಸಹಿತ ಮಳೆಯಾಗುವುದಾಗಿ ತಿಳಿಸಿದೆ. ಅಮ್ರೋಹ, ಮೊರಾದಾಬಾದ್, ಚಾಂದೌಸಿ, ಸಂಭಾಲ್, ರಾಂಪುರ, ಬದೌನ್, ಕಾಸ್ಗಂಜ್, ಚಾಂದ್‌ಪುರ್ ಜಿಲ್ಲೆಗಳಲ್ಲಿ ಅತಿ ಹೆಚ್ಚಿನ ಮಳೆಯಾಗಿದೆ. ಇದರೊಂದಿಗೆ ದೆಹಲಿ, ಗುರುಗ್ರಾಮ್ ಹಾಗೂ ನವದೆಹಲಿಯ ಹಲವು ಕಡೆಗಳಲ್ಲಿ ಗುರುವಾರ ಹೆಚ್ಚಿನ ಮಳೆಯಾಗಿದೆ. ಗುಜರಾತ್‌ನಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

 ತೆಲಂಗಾಣ, ಆಂಧ್ರದ ಕರಾವಳಿ ತೀರಗಳಲ್ಲಿ ಜೋರು ಮಳೆ

ತೆಲಂಗಾಣ, ಆಂಧ್ರದ ಕರಾವಳಿ ತೀರಗಳಲ್ಲಿ ಜೋರು ಮಳೆ

ಜುಲೈ 24ರ ನಂತರ ಉತ್ತರ ಭಾರತದಲ್ಲಿ ಮಳೆ ಪ್ರಮಾಣ ತಗ್ಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕೊಂಕಣ, ಗೋವಾ ಹಾಗೂ ಮಧ್ಯ ಮಹಾರಾಷ್ಟ್ರದಲ್ಲಿ ಇನ್ನೂ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳಲ್ಲಿ, ತೆಲಂಗಾಣದಲ್ಲಿ ಹೆಚ್ಚಿನ ಮಟ್ಟದಲ್ಲಿ ಮಳೆಯಾಗುತ್ತಿದ್ದು, ಛತ್ತೀಸ್‌ಗಡ, ಮಧ್ಯ ಪ್ರದೇಶದಲ್ಲಿಯೂ ಭಾರೀ ಮಳೆಯಾಗುವುದಾಗಿ ತಿಳಿಸಿದೆ.

 ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿಯೂ ಮಳೆ

ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿಯೂ ಮಳೆ

"ಜುಲೈ 23ರಂದು ವಾಯವ್ಯ ಬಂಗಾಳಕೊಲ್ಲಿಯಲ್ಲಿ ಒತ್ತಡ ರೂಪುಗೊಳ್ಳುವ ಸಾಧ್ಯತೆಯಿದೆ. ಈ ಪ್ರಭಾವದಿಂದ ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಜುಲೈ 26 ರವರೆಗೂ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ" ಎಂದು ಬೆಂಗಳೂರಿನ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಗಾಳಿ ಸಹಿತ ಮಳೆಯಾಗುತ್ತಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಜುಲೈ 23-24ರಂದು ಆರೆಂಜ್ ಮತ್ತು ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ, ಮಲೆನಾಡು, ಉತ್ತರ ಒಳನಾಡಿನಲ್ಲಿ ಕೆಲವೆಡೆ ಧಾರಾಕಾರ ಮಳೆಯಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+